Friday, September 20, 2024

2023-24ನೇ ಸಾಲಿನ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಅಡಿಕೆ ಮತ್ತು ಕಾಳುಮೆಣಸು ಬೆಳೆಯ ಬೆಳೆ ವಿಮೆ.

2023-24ನೇ ಸಾಲಿನ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ (WBCIS) ಕಾರ್ಯಕ್ರಮದಡಿ ಉಡುಪಿ ಜಿಲ್ಲೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆಹವಾಮಾನ ವೈಪರಿತ್ಯದಿಂದಾಗಿಉಂಟಾಗುವ ಬೆಳೆ ನಷ್ಟಕ್ಕೆ ಮುಂಗಾರು ಹಂಗಾಮಿನ ಈ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ರೈತರಿಗೆ ಅವಕಾಶ ಕಲ್ಪಿಸಲಾಗಿದ್ದು ರೈತರ ಪಹಣಿಯಲ್ಲಿ ಬೆಳೆ ಸಮೀಕ್ಷೆಯಲ್ಲಿ ಅಡಿಕೆ ಮತ್ತು ಕಾಳು ಮೆಣಸು ನಮೂದಾಗಿರುವ ಬೆಳೆ ವಿಸ್ತೀರ್ಣಕ್ಕೆಅನುಗುಣವಾಗಿ ವಿಮಾ ಮೊತ್ತವನ್ನು ಪಾವತಿಸಿ ಯೋಜನೆಯಲ್ಲಿ ಪಾಲ್ಗೊಳ್ಳಬಹುದಾಗಿದೆ.

ಕೊನೆಯ ದಿನಾಂಕ : ಈ ಯೋಜನೆಯಲ್ಲಿ ನೋಂದಣಿ ಮಾಡಿಸಲು 15.07.2023 ಅಂತಿಮ ದಿನವಾಗಿರುತ್ತದೆ.

ರೈತರು ವಿಮಾ ಕಂತುಗಳನ್ನು ಪಾವತಿಸಲು ನಿಗದಿತ ದಾಖಲೆಗಳೊಂದಿಗೆ ಹತ್ತಿರದ ಬ್ಯಾಂಕ ಮತ್ತು ಡಿಜಿಟಲ್ ಇ-ಸೇವಾ ಕೇಂದ್ರಗಳಿಗೆ ಸಂಪರ್ಕಿಬಹುದಾಗಿರುತ್ತದೆ.

ಈ ಬೆಳೆ ವಿಮಾ ಯೋಜನೆಯಲ್ಲಿ ಗ್ರಾಮ ಪಾಂಚಾಯತ್ ಗಳನ್ನು ವಿಮಾ ಘಟಕಗಳಾಗಿ ಸರ್ಕಾರದ ಆದೇಶದಲ್ಲಿ ಅಧಿಸೂಚಿಸಲಾಗಿದ್ದು.
ಅಡಿಕೆ ಹಾಗೂ ಕಾಳುಮೆಣಸು ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರು ಪಾಲ್ಗೊಳ್ಳಬಹುದಾಗಿದ್ದು ಬೆಳ ಸಾಲ ಪಡೆಯದ ರೈತರಿಗೆ ಈ ಯೋಜನೆಯು ಐಚ್ಚಿಕವಾಗಿದ್ದು .

ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಹೆಚ್ಚುವರಿ ಅಕ್ಕಿ ಬದಲು ನೇರವಾಗಿ ಹಣ ವರ್ಗಾವಣೆಗೆ ಮುಖ್ಯಮಂತ್ರಿ ಚಾಲನೆ:


ಬೆಳೆ ಸಾಲ ಪಡೆದ ರೈತರು ಯೋಜನೆಯಲ್ಲಿ ಪಾಲ್ಗೊಳ್ಳದೇ ಇರಲು ಇಚ್ಚಿಸಿದ್ದಲ್ಲಿ ನೋಂದಣಿಯಾದ ಅಂತಿಮ ದಿನಾಂಕದ ಒಂದು ವಾರದೊಳಗೆ ಮುಚ್ಚಳಿಕೆ ಪತ್ರವನ್ನು ಬೆಳೆ ಸಾಲ ಪಡೆದ ಹಣಕಾಸು ಸಂಸ್ಥೆಗೆ ನೀಡಬೇಕಾಗಿರುತ್ತದೆ. ವಿಮೆ ಮಾಡಿಸುವ ರೈತರು ಫ್ರುಟ್ (Fruits )ತಂತ್ರಾಂಶದ ನೋಂದಣಿ ಸಂಖ್ಯೆಯನ್ನು ಹೊಂದಿರಬೇಕಿದ್ದು ಸದರೀ ನೊಂದಣಿ ಸಂಖ್ಯೆಗೆ ಪಹಣಿ ವಿವರವನ್ನು ಜೋಡಿಸಿಕೊಳ್ಳಬೇಕಿರುತ್ತದೆ.


ನೋಂದಣಿ ಸಂಖ್ಯೆ ಇಲ್ಲದ ರೈತರು ನೋಂದಣಿ ಸಂಖ್ಯೆಯನ್ನು ಮಾಡಿಕೊಂಡು ವಿಮೆಯಲ್ಲಿ ಪಾಲ್ಗೊಳ್ಳಬೇಕಿರುತ್ತದೆ.
ವಿಮೆ ಮಾಡಿಸಿರುವ ರೈತರಿಗೆ ವಿಮೆ ಮಾಡಲ್ಪಟ್ಟ ಬೆಳೆಗಳಿಗೆ ಜುಲೈ 01 2023 ರಿಂದ ಜೂನ್ 30 2024ರ ವರೆಗೆ ವಿಮೆ ರಕ್ಷಣೆಯ ಅವಧಿ ಇದ್ದು ನಿಗದಿತ ಟರ್ಮ ಶೀಟ್ ಹಾಗೂ ನಷ್ಟ ಲೆಕ್ಕಾಚಾರದ ಕಾಲಮಿತಿಯೊಳಗೆ ಹವಾಮಾನ ವೈಪರಿತ್ಯಗಳಿಂದಾಗಿ ಬೆಳೆ ನಷ್ಟ ಉಂಟಾದಲ್ಲಿ ನಷ್ಟ ಪರಿಹಾರವನ್ನು ವಿಮೆ ರಕ್ಷಣೆಯ ಅವಧಿ ಮುಗಿದ 45 ದಿನದೊಳಗಾಗಿ ವಿಮಾ ಕಂಪನಿಯು ನಷ್ಟ ಪರಿಹಾರವನ್ನು ಪಾವತಿಸಬೇಕಾಗಿರುತ್ತದೆ.

2023-24 ನೇ ಸಾಲಿನ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಕಂತಿನ ವಿವರಗಳು

ವಿಮಾ ಕಂಪನಿಯ ಹೆಸರು : ಅಗ್ರಿಕಲ್ಚರ್ ಇನ್ಸುರೆನ್ಸ್ ಕಂಪನಿ (AIC)

ಕ್ರ.ಸಂಜಿಲ್ಲೆಬೆಳೆವಿಮಾ ಮೊತ್ತ ರೂ.ಗಳಲ್ಲಿ ಪ್ರತಿ ಹೆಕ್ಟೇರ್ಗೆರೈತರು ಪಾವತಿಸಬೇಕಾದ ವಿಮಾ ಕಂತು (ಶೇ.5)ರೂ.ಗಳಲ್ಲಿ ಪ್ರತಿ ಹೆಕ್ಟೇರ್ಗೆ
1.ಉಡುಪಿಅಡಿಕೆ1,28,000.006,400.00
2.ಕರಿಮೆಣಸು47,000.002,350.00

ವಿಮಾ ನಷ್ಟ ಪರಿಹಾರವು Aadhaar enabled Payment system (AEPS) ಮುಖಾಂತರ ಆಗುವುದರಿಂದ ವಿಮಾ ಅರ್ಜಿಯಲ್ಲಿ ಸಕ್ರಿಯ ಆಧಾರ್ ಮಾಹಿತಿಯನ್ನು ನೀಡಬೇಕಾಗಿರುತ್ತದೆ. ಬೆಳೆ ಸಾಲ ಹೊಂದಿಲ್ಲದ ರೈತರು ಆಧಾರ ಮಾಹಿತಿಯೊಂದಿಗೆ ಜಮೀನಿನ ಪಹಣಿ ಪತ್ರಿಕೆ ಪ್ರತಿ ಉಳಿತಾಯ ಖಾತೆ ಮಾಹಿತಿ ದಾಖಲೆಗಳು, ಸ್ವಯಂಘೋಷಣೆ ನಮೂನೆಗಳನ್ನು ಪ್ರೀಮಿಯಂ ಮೊತ್ತದೊಂದಿಗೆ ಹಣಕಾಸು ಸಂಸ್ಥೆಗಳಿಗೆ ಸಲ್ಲಿಸಿ ನೋಂದಣಿ ಮಾಡಿಸಬೇಕಾಗಿರುತ್ತದೆ.

ಹೆಚ್ಚಿನ ವಿವರಗಳಿಗೆ ಸ್ಥಳೀಯ ವಾಣಿಜ್ಯ/ ಗ್ರಾಮೀಣ ಸಹಕಾರಿ ಬ್ಯಾಂಕ್/ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರ/ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು/ ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

  1. ತೋಟಗಾರಿಕೆ ನಿರ್ದೇಶಕರು, ಜಿ.ಪಂ. ಉಡುಪಿ – 9448999225 (0820-2531950)
  2. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿ.ಪಂ. ಉಡುಪಿ – 9900046117 (0820-2522837)
  3. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿ.ಪಂ. ಕುಂದಾಪುರ – 9945651056 (08254-230813)
  4. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿ.ಪಂ. ಕಾರ್ಕಳ – 9481440812 (08258-230288)

ಇತ್ತೀಚಿನ ಸುದ್ದಿಗಳು

Related Articles