ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪ್ರಶಸ್ತಿ ಕೃಷಿ ಉತ್ಪಾದನಾ ಬಹುಮಾನ ಯೋಜನೆಯನ್ನು ಕೃಷಿ ಇಲಾಖಾ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿದೆ.
ಪ್ರತಿ ವರ್ಷದಂತೆ ಈ ವರ್ಷವೂ (2023- 24) ಸಹ ರೈತರಿಂದ ಬೆಳೆ ಸ್ಪರ್ಧೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನೋಂದಣಿ ಶುಲ್ಕ:
ಸಾಮಾನ್ಯ ರೈತರಿಗೆ 100 ರೂ .
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ರೈತರಿಗೆ ರೂ 25 ಇರುತ್ತದೆ. ಎಲ್ಲಾ ಮಟ್ಟಗಳಿಗೆ ಆನ್ವಯಿಸುವಂತೆ ಅಂದರೆ ರಾಜ್ಯ ಮಟ್ಟ, ಜಿಲ್ಲಾ ಮಟ್ಟ , ಮತ್ತು ತಾಲೂಕು ಮಟ್ಟ ಈ ಮೂರು ಹಂತದಗಳಿಗೂ
ನಿಬಂಧನೆಗಳ:
- ಕನಿಷ್ಠ ಒಂದು ಎಕರೆ ಪ್ರದೇಶದಲ್ಲಿ ಸ್ಪರ್ಧಾ ಬೆಳೆ ಬೆಳೆದಿರಬೇಕು.
- ಸ್ವಂತ ಜಮೀನು ಇರುವ ಬಗ್ಗೆ ಪಹಣಿ ಪತ್ರ ಹೊಂದಿರಬೇಕು,
- ಯಾವುದೇ ಹಂತದಲ್ಲಿ ಒಮ್ಮೆ ಬಹುಮಾನ ಪಡೆದ ರೈತ ರೈತ ಕುಟುಂಬದವರು ಮುಂದಿನ ಐದು ವರ್ಷಗಳ ಅವಧಿಗೆ ಆ ಹಂತದ ಬೆಳೆ ಸ್ಪರ್ಧೆಯ ಬಹುಮಾನಕ್ಕೆ ಅರ್ಹನಾಗಿರುವುದಿಲ್ಲ. ಆದರೆ ಆ ಬೆಳೆಯ ಮೇಲಿನ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿರುತ್ತದೆ.
- ತಾಲ್ಲೂಕು ಮಟ್ಟದಲ್ಲಿ ಬಹುಮಾನ
ಪಡೆದವರು ಜಿಲ್ಲಾ ಮಟ್ಟಕ್ಕೆ ಸ್ಪರ್ಧಿಸಬಹುದಾಗಿದೆ ಮತ್ತು ಜಿಲ್ಲಾ ಮಟ್ಟದಲ್ಲಿ ಬಹುಮಾನ ಪಡೆದವರು ರಾಜ್ಯ ಮಟ್ಟಕ್ಕೆ ಸ್ಪರ್ಧಿಸಬಹುದಾಗಿದೆ. ಆದರೆ ಕೆಳ ಹಂತದ ಸ್ಪರ್ಧೆಗೆ ಸ್ಪರ್ಧಿಸುವಂತಿಲ್ಲ.
- ಕಟಾವಿಗೆ 15 ದಿನಗಳ ಮುಂಚಿತವಾಗಿ ಸಂಬಂಧಿಸಿದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಕಟಾವು ದಿನಾಂಕವನ್ನು ತಿಳಿಸತಕ್ಕದ್ದು.
ಬಹುಮಾನದ ಮೊತ್ತ:
ತಾಲ್ಲೂಕು ಮಟ್ಟ ಮಟ್ಟದಲ್ಲಿ ಆಯ್ಕೆಯಾದ ರೈತರಿಗೆ ಪ್ರಥಮ ಬಹುಮಾನವಾಗಿ 15000/-ರೂ ನಿಗಧಿ ಪಡಿಸಲಾಗಿದೆ. ದ್ವಿತೀಯ ಬಹುಮಾನವಾಗಿ 10000/- ,ತೃತೀಯ ಬಹುಮಾನವಾಗಿ 5000/- ರೂ ನಿಗಧಿ ಪಡಿಸಲಾಗಿದೆ.
ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ರೈತರಿಗೆ ಪ್ರಥಮ ಬಹುಮಾನವಾಗಿ 30000/-
ದ್ವಿತೀಯ ಬಹುಮಾನವಾಗಿ 25000/- ತೃತೀಯ ಬಹುಮಾನವಾಗಿ 20000/- ರೂ ನಿಗಧಿ ಪಡಿಸಲಾಗಿದೆ.
ರಾಜ್ಯ ಮಟ್ಟ
ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛೆಯುಳ್ಳ ರೈತರಿಗೆ ಪ್ರಥಮ ಬಹುಮಾನವಾಗಿ 50000/-
ದ್ವಿತೀಯ ಬಹುಮಾನವಾಗಿ 40000/-
ತೃತೀಯ ಬಹುಮಾನವಾಗಿ 35000/-
ರೂ ನಿಗಧಿ ಪಡಿಸಲಾಗಿದೆ.
ವಿಶೇಷ ಸೂಚನೆ: ಅರ್ಜಿ ಸಲ್ಲಿಸಿದ ನಂತರ ರೈತರ ಕ್ಷೇತ್ರಕ್ಕೆ ಇಲಾಖೆಯಿಂದ ಪ್ರತ್ಯೇಕ ವಿಜ್ಞಾನಿಗಳು ಮತ್ತು ಇಲಾಖೆಯ ಉನ್ನತ ಅಧಿಕಾರಿಳನ್ನು ಒಳಗೊಂಡ ತಂಡ ಪರಿಶೀಲನೆಗೆ ಬರುತ್ತದೆ.
ಆಸ್ತಕ ರೈತರು ನಿಮ್ಮ ಜಿಲ್ಲೆಯ ಮತ್ತು ತಾಲ್ಲೂಕಿನ, ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಿ.
ನಿಗದಿತ ಅರ್ಜಿ ನಮೂನೆಯನ್ನು ಪಡೆದು ಕಂದಾಯ ಇಲಾಖೆಯಿಂದ ಪಡೆದ ಪಹಣಿ ಪತ್ರದೊಂದಿಗೆ ನಿಗದಿತ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬಹದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31.08.2023 ನಂತರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಇದನ್ನೂ ಓದಿ: 2023-24ನೇ ಸಾಲಿನ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ (WBCIS)