Support price for monsoon Sunflower: ಮುಂಗಾರು ಸೂರ್ಯಕಾಂತಿ ಬೆಳೆದ ರೈತರಿಗೆ ಸರ್ಕಾರದಿಂದ 6750/- ರೂ ಬೆಂಬಲ ಬೆಲೆ ನಿಗಧಿ;
ಯಾವ ಯಾವ ಜಿಲ್ಲೆಯ ರೈತರಿಂದ ಖರೀದಿ? ಪ್ರತಿ ರೈತನಿಂದ ಎಷ್ಟು ಕ್ವಿಂಟಲ್ ಖರೀದಿ? ಕ್ವಿಂಟಲ್ ಗೆ ನಿಗಧಿ ಪಡಿಸಿದ ಬೆಂಬಲ ಬೆಲೆ ಎಷ್ಟು? ಸಂಪೂರ್ಣ ಮಾಹಿತಿ ತಿಳಿಯಿರಿ.
ಆತ್ಮೀಯ ರೈತ ಬಾಂದವರೇ ಮುಂಗಾರು ಹಂಗಾಮಿನಲ್ಲಿ ಸೂರ್ಯಕಾಂತಿ ಬೆಳೆದ ರೈತರಿಗೆ ಸಿಹಿಸುದ್ದಿ. ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಖರೀದಿ ಮಾಡಲು ಸೂರ್ಯಕಾಂತಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಈ ಕುರಿತು ಮಾಹಿತಿ ನೀಡಿದ್ದಾರೆ.
ಮುಂಗಾರು ಋತುವಿನಲ್ಲಿ ರೈತರಿಗೆ ಸಹಾಯಕವಾಗಲು ಕೇಂದ್ರ ಸರ್ಕಾರ ಸೂರ್ಯಕಾಂತಿಗೆ ಬೆಂಬಲ ಬೆಲೆ ಘೋಷಣೆ ಮಾಡಿದೆ.
2023-24 ನೇ ಸಾಲಿನ ಉಚಿತ ಹೊಲಿಗೆ ಯಂತ್ರ ಮತ್ತು ಪವರ್ ಟೂಲ್ಸ ವಿತರಣೆ :
ಹಾದಿದ್ದರೇ ಯಾವ ಯಾವ ಜಿಲ್ಲೆಯಲ್ಲಿ ಸೂರ್ಯಕಾಂತಿ ಬೆಳೆದ ರೈತರಿಗೆ ಈ ಯೋಜನೆ ಉಪಯೋಗವಾಗಲಿದೆ ಎಂದು ತಿಳಿಯೋಣ ಆತ್ಮೀಯ ರೈತ ಬಾಂದವರೇ ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಸೂರ್ಯಕಾಂತಿ ಬೆಳೆದ ರೈತರಿಗೆ ಸಿಹಿಸುದ್ದಿ. ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಖರೀದಿ ಮಾಡಲು ಸೂರ್ಯಕಾಂತಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಈ ಕುರಿತು ಮಾಹಿತಿ ನೀಡಿದ್ದಾರೆ.
How much purchase from farmers: ಪ್ರತಿ ಒಬ್ಬ ರೈತರಿಂದ ಎಷ್ಟು ಖರೀದಿ ಮಾಡಲಾಗುತ್ತದೆ?
ಸರ್ಕಾರದ ಆದೇಶದಂತೆ 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್. ಎ. ಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಪ್ರತಿ ಕ್ವಿಂಟಾಲ್‌ಗೆ ರೂ. 6760 ಗಳಂತೆ ಎಕರೆಗೆ 3 ಕ್ವಿಂಟಾಲ್‌ನಂತೆ ಒಬ್ಬ ರೈತರಿಂದ ಗರಿಷ್ಠ 15 ಕ್ವಿಂಟಲ್‌ರಂತೆ ಖರೀದಿ ಮಾಡಲಾಗುತ್ತದೆ.
ರಾಜ್ಯದಲ್ಲೇ ಅತಿಹೆಚ್ಚು ಬೆಳೆವಿಮೆ ಪರಿಹಾರ ಈ ಜಿಲ್ಲೆಯ ರೈತರಿಗೆ !!!
ಪ್ರತಿ ಎಕರೆಗೆ ಗರಿಷ್ಠ 3 ಕ್ವಿಂಟಾಲ್‌ರಂತೆ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಾಲ್ ಸೂರ್ಯಕಾಂತಿ ಉತ್ಪನ್ನವನ್ನು ಖರೀದಿಸಲಾಗುತ್ತದೆ. ಎಫ್. ಎ. ಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಮಾತ್ರ ಖರೀದಿಸಲಾಗುವುದು ಎಂದು ಸ್ಪಷ್ಟಪಡಿಸಲಾಗಿದೆ.
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಕೊಪ್ಪಳ ಜಿಲ್ಲೆಯ ರೈತರಿಂದ ಸೂರ್ಯಕಾಂತಿ ಖರೀದಿಸುವ ಕುರಿತು ಸೆಪ್ಟೆಂಬರ್ 19ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ
ಟಾಸ್ಕ್‌ಫೋರ್ಸ್ ಸಮಿತಿಯ ಸಭೆಯಲ್ಲಿ ಚರ್ಚಿಸಲಾಗಿತ್ತು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ ರಾಯಚೂರು ವಿಭಾಗೀಯ ಕಚೇರಿ ಕೊಪ್ಪಳ ಮೊಬೈಲ್ ಸಂಖ್ಯೆ 9591812142 ಇವರನ್ನು ಸಂಪರ್ಕಿಸಬಹುದಾಗಿದೆ. ಕೊಪ್ಪಳ ತಾಲೂಕಿನ ಅಳವಂಡಿ, ಕುಕನೂರು ತಾಲೂಕಿನ ಮಂಡಲಗೇರಿ ಹಾಗೂ ಯಲಬುರ್ಗಾ ತಾಲೂಕಿನ ಬೇವೂರಿನಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ಸಭೆಯಲ್ಲಿ ತೀರ್ಮಾನಿಸಲಾಗಿತ್ತು.
ನೋಡಲ್ ಅಧಿಕಾರಿಗಳು ಸೂರ್ಯಕಾಂತಿ ಖರೀದಿ ಕೇಂದ್ರಗಳ ಖರೀದಿ ಕೇಂದ್ರಕ್ಕೆ ಕೊಪ್ಪಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಜಿ. ಎಂ. ಮರುಳಸಿದ್ದಯ್ಯ (8495056203), ಮಂಡಲಗೇರಿ ಹಾಗೂ ಬೇವೂರು ಈ ಎರಡು ಖರೀದಿ ಕೇಂದ್ರಗಳಿಗೆ ಯಲಬುರ್ಗಾ (ಕೇಂದ್ರ ಕಚೇರಿ, ಕುಕನೂರು) ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಸಿದ್ದಯ್ಯಸ್ವಾಮಿ (9902224089) ನೋಡಲ್ ಅಧಿಕಾರಿಗಳಾಗಿದ್ದಾರೆ. ಹೆಚ್ಚಿನ ಮಾಹಿತಿಗೆ ರೈತರು ಇವರನ್ನು ಸಂಪರ್ಕಿಸಬಹುದು.
ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ರೂ 60,000 ರವರೆಗೆ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ ಆಹ್ವಾನ!
ಬಳ್ಳಾರಿ ಜಿಲ್ಲೆ: ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಉತ್ಪನ್ನ ಖರೀದಿಗೆ ಕೇಂದ್ರ ಆರಂಭ;
ಬಳ್ಳಾರಿ: ಜಿಲ್ಲೆಯಲ್ಲಿ 2023-24ನೇ ಸಾಲಿಗೆ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಉತ್ಪನ್ನವನ್ನು ಖರೀದಿಗಾಗಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕ ಎಂ.ಶ್ಯಾಮ್ ಅವರು ತಿಳಿಸಿದ್ದಾರೆ.
ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾ ಮಂಡಳಿ ನಿಯಮಿತ(KOF) ಬೆಂಗಳೂರು, ವಿಭಾಗೀಯ ಕಚೇರಿ ಬಳ್ಳಾರಿ, ಇವರಿಂದ ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್‌ಗೆ ರೂ.6,760 ರಂತೆ ರೈತರಿಂದ ಖರೀದಿಗಾಗಿ ಖರೀದಿ ಕೇಂದ್ರ ತೆರೆಯಲಾಗಿದೆ.
ಖರೀದಿ ಕೇಂದ್ರದ ಹೆಸರು:
ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾ ಮಂಡಳಿ ನಿಯಮಿತ(KOF), ವಿಭಾಗೀಯ ಕಚೇರಿ, ಬಳ್ಳಾರಿ.
ಹೆಚ್ಚಿನ ಮಾಹಿತಿಗಾಗಿ ನಟರಾಜ ಹೊಸಮನಿ ಅವರ ಮೊ. 9686513163 ಮತ್ತು ಅಯ್ಯಪ್ಪ ಅವರ ಮೊ 8073797774 ಗೆ ಸಂಪರ್ಕಿಸಬಹುದು.
ಸೂರ್ಯಕಾಂತಿ ಉತ್ಪನ್ನ ಖರೀದಿಗೆ ಬೇಕಾದ ದಾಖಲೆಗಳು:
2023-24 ನೇ ಸಾಲಿನ ಪಹಣಿ (ರೆಕಾರ್ಡ )RTCಪತ್ರ,
ಎಫ್‌ಐಡಿ (FID) ರೈತರ ನೋಂದಣಿ ಸಂಖ್ಯೆ
.ರೈತರ ಬಳಿ ಫ್ರಟ್ಸ್ ಐಡಿ (FRUITS ID) ಇಲ್ಲದೇ ಇದ್ದಲ್ಲಿ ಅಥವಾ ಫ್ರಟ್ಸ್ ನಲ್ಲಿ ಯಾವುದಾದರು ತಾಂತ್ರಿಕ ದೋಷವಿದ್ದಲ್ಲಿ ರೈತರು ಹತ್ತಿರ ಕೃಷಿ ಇಲಾಖೆಯನ್ನು ಸಂಪರ್ಕಿಸಿ ಅವಶ್ಯಕ ಮಾಹಿತಿಯನ್ನು ಪಡೆಯಬಹುದು.
ಆಧಾರ್ ಕಾರ್ಡ್ (ಮೂಲ), ಬ್ಯಾಂಕ್ ಖಾತೆ (ಆಧಾರ್ ಕಾಡ್‌ರ್ನೊಂದಿಗೆ ಜೋಡಣೆಗೊಂಡು ಪುಸ್ತಕದ ನಕಲು ಪ್ರತಿ, ನೀಡಬೇಕಾಗಿರುತ್ತದೆ.
ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ದೊರೆಯುವ ಕೃಷಿ ಯಂತ್ರೋಪಕರಣಗಳು.
ಸರ್ಕಾರದ ಮಾನದಂಡಗಳು:
ಒಣಗಿದ ಹಾಗೂ ಸ್ವಚ್ಛ ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಕೇಂದ್ರಕ್ಕೆ ಮಾರಲು ತರಬೇಕು. ಸೂರ್ಯಕಾಂತಿ ಖರೀದಿ ಕೇಂದ್ರಗಳಲ್ಲಿ ರೈತರು ತಮ್ಮ ಹೆಸರನ್ನು ನೊಂದಣಿ ಮಾಡಿಕೊಳ್ಳಬಹುದು ಹಾಗೂ ನೋಂದಣಿ ಚೀಟಿ ಪಡೆಯಬೇಕು. ಪ್ರತಿ ಎಕರೆಗೆ 03 ಕ್ವಿಂಟಾಲ್ ಗರಿಷ್ಟ ಪ್ರಮಾಣ ಹಾಗೂ ನಿಗದಿತ ಅವಧಿಯೊಳಗೆ ನೋಂದಣಿಗೊಂಡ ಪ್ರತಿ ರೈತರಿಂದ ಗರಿಷ್ಟ 15 ಕ್ವಿಂಟಾಲ್ ಮಾತ್ರ ಖರೀದಿಸಲಾಗುವುದು.
ನೋಂದಣಿ ಮಾಡಲು ಕೊನೆಯ ದಿನಾಂಕ:
ಅಕ್ಟೋಬರ್ 21 ರವರೆಗೆ ನೋಂದಣಿ ಮಾಡಲು ಅವಕಾಶ ಮಾಡಿಕೊಡಲಗಿದೆ.
ಸೂರ್ಯಕಾಂತಿ ಖರೀದಿ ಪಾರಂಭದ ದಿನಾಂಕ ಮತ್ತು ಸಮಯ:
ಸೂರ್ಯಕಾಂತಿ ಉತ್ಪನ್ನವನ್ನು ಡಿಸೆಂಬರ್ 05 ರವರೆಗೆ ಖರೀದಿಸಲಾಗುವುದು. ಸಮಯ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಖರೀದಿಸಲಾಗುವುದು. ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಮಾತ್ರ ಖರೀದಿಸಲಾಗುವುದು ಎಂದು ಮಾಹಿತಿ ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯ ರೈತರು ಬೆಂಬಲ ಬೆಲೆ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕು. ಯಾವುದೇ ಸಂದರ್ಭದಲ್ಲಿ ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು. ರೈತರೇ ನೇರವಾಗಿ ಇದರ ಸೌಲಭ್ಯ ಪಡೆಯಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶೇಷ ಸೂಚನೆ: ಇನ್ನಿತರ ಜಿಲ್ಲೆಯ ರೈತರು ತಾವು ಬೆಳೆದ ಬೆಳೆಗಳನ್ನು ಬೆಂಬಲ ಬೆಲೆ ಯೋಜನೆಯಡಿ ಮಾರಾಟ ಮಾಡಲು ನಿಮ್ಮ ಜಿಲ್ಲೆಯ ಮತ್ತು ತಾಲೂಕಿನ ಕೃಷಿ ಮತ್ತು ಕೃಷಿ ಮಾರಾಟ ಇಲಾಖೆಯನ್ನು ಸಂಪರ್ಕಿಸಿ ಮಾಹಿತಿ ಪಡೆಯಿರಿ.