ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರದಲ್ಲಿ ಅತೀ ಮುಖ್ಯವಾಗಿರುವ ಸಂಪನ್ಮೂಲವೇಂದರೆ ಅದು ನೀರು ,ನಾವು ಯಾವುದೇ ಬೆಳೆಬೆಳೆಯಲು ನೀರು ಅತೀ ಅವಶ್ಯಕ .ಕೃಷಿಯಲ್ಲಿ ನೀರಿನ ಮಿತ ಬಳಕೆ ಮತ್ತು ಸಂರಕ್ಷಣೆ ಅತ್ಯಂತ ಮಹತ್ವವನ್ನು ಪಡೆದಿದ್ದು ಈ ನಿಟ್ಟಿನಲ್ಲಿ ಸೂಕ್ಷ್ಮ ನೀರಾವರಿಯ ಅಳವಡಿಕೆ ಮಾಡುವುದು ಅತ್ಯವಶ್ಯಕವಾಗಿದೆ.
ಇದನ್ನು ಮನಗಂಡು ನಮ್ಮ ರಾಜ್ಯದಲ್ಲಿ ತೋಟಗಾರಿಕೆ ಇಲಾಖೆಯಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರೈತರಿಗೆ ಸೂಕ್ಷ (ಹನಿ/ತುಂತುರು)ನೀರಾವರಿ ಘಟಕ ಅಳವಡಿಕೆ ಮಾಡಿಕೊಳ್ಳಲು ಸಹಾಯಧನ ನೀಡಲಾಗುತ್ತದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ತೋಟಗಾರಿಕೆ ಇಲಾಖೆಯ ವತಿಯಿಂದ 2022-23ನೇ ಸಾಲಿನ ತೋಟಗಾರಿಕಾ ಕಾರ್ಯಕ್ರಮದಡಿ ಹನಿ ನೀರಾವರಿ (PMKSY-PDMC) ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧೀನಕ್ಕೆ ಸೇರಿದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಪೇಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು.
ತೋಟಗಾರಿಕೆ ಬೆಳೆಗಳಾದ( ತೆಂಗು, ಅಡಿಕೆ,ಪೇರಲ, ಕಾಳುಮೆಣಸು, ಇತ್ಯಾದಿ)ಹನಿ ನೀರಾವರಿ ಅಳವಡಿಸುವ ರೈತರಿಗೆ ಆಯಾ ಬೆಳೆಗಳು ಮತ್ತು ಬೆಳೆಗಳ ಅಂತರಕ್ಕೆ ಅನುಗುಣವಾಗಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಪ್ರಥಮ 2 ಹೆಕ್ಟೇರ್ ಗೆ ಮಾರ್ಗಸೂಚಿಯನ್ವಯ ನಿಗಧಿಪಡಿಸಿರುವ ವೆಚ್ಚದ ಶೇ. 90 ರಷ್ಟು ಸಹಾಯಧನವನ್ನು ಹಾಗೂ ಇತರೆ ವರ್ಗದ ರೈತರಿಗೆ ಶೇ. 75 ರಷ್ಟು ಸಹಾಯಧನವನ್ನುನೀಡಲಾಗುವುದು. 2 ಹೆಕ್ಟೇರ್ ಗೆ ಮೇಲ್ಟಟ್ಟು 5 ವರೆಗೆ ಶೇ.45 ರಷ್ಟು ಸಹಾಯಧನವನ್ನು ನೀಡಲಾಗುತ್ತದೆ.( ತರಕಾರಿ ಹಾಗೂ ವಾಣಿಜ್ಯ ಹೂ ಬೆಳೆಗಳಿಗೆ ಗರಿಷ್ಟ 2 ಹೆಕ್ಟೇರ್ ವರೆಗೆ ಸಹಾಯಧನವನ್ನು ನೀಡಲಾಗುತ್ತದೆ.) ಸದರಿ ಸೌಲಭ್ಯವನ್ನು ಪ್ರತಿ ಫಲಾನುಭವಿಗೆ 5 ಹೆಕ್ಟೇರ್ ಪ್ರದೇಶದವರೆಗೆ ಮಿತಿಗೊಳಿಸಲಾಗಿದೆ.
ತೋಟಗಾರಿಕೆಯಲ್ಲಿ ಕೃಷಿ ಮಾಡುತ್ತಿರುವ ಹಾಗೂ ನೀರಾವರಿ ಮೂಲ ಹೊಂದಿರುವ ರೈತರು ತಮ್ಮ ಜಮೀನಿಗೆ ಹನಿನೀರಾವರಿ ಅಳವಡಿಸಿಕೊಳ್ಳಲು ಆಸಕ್ತಿ ಇದ್ದಲ್ಲಿ ತಮ್ಮ ಜಮೀನು ವ್ಯಾಪ್ತಿಯ ಹೋಬಳಿಯ ರೈತ ಸಂಪರ್ಕ ಕೇಂದ್ರ/ ತಾಲ್ಲುಕು ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ಹನಿ ನೀರಾವರಿ ಅಳವಡಿಸಲು ನಿಗಧಿತ ಅರ್ಜಿಯನ್ನು ಪಡೆಯುವುದು.
ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು:
*ಪಹಣಿ/ ಉತಾರ್(RTC)
*ಆಧಾರ್ ಕಾರ್ಡ ಪ್ರತಿ
*ಜಾತಿ ಮತ್ತು ಆದಾಯ ಪ್ರಮಾಣ ಪತ್ರ
*ನೀರಿನ ಮೂಲ ಪ್ರಮಾಣ ಪತ್ರ/ಕೊಳವೆ ಬಾವಿ ಸರ್ಟಿಪಿಕೆಟ್( ಕಂದಾಯ ಇಲಾಖೆಯಲ್ಲಿ
*ಬ್ಯಾಂಕ್ ಪಾಸ್ ಬುಕ್ ಪ್ರತಿ
- ಇತ್ತೀಚಿನ ಪೋಟೋ
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲುಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸಿ. ಇನ್ನೂ ಹೆಚ್ಚಿನ ಮಾಹಿತಿ ಪಡೆದುಕೊಳ್ಳಿ.
ಇದೇ ರೀತಿ ಇತರೆ ಜಿಲ್ಲೆಗಳಲ್ಲಿ ಅನುದಾನ ಲಭ್ಯತೆ ಅನುಗುಣವಾಗಿ ಹನಿ ನೀರಾವರಿ ಘಟಕ ಸ್ಥಾಪನೆಗೆ ಅವಕಾಶವಿರುತ್ತದೆ. ಒಮ್ಮೆ ನಿಮ್ಮ ತಾಲ್ಲೂಕಿನ ತೋಟಗಾರಿಕೆ ಕಚೇರಿಯನ್ನು ಭೇಟಿ ಮಾಡಿ ಹೆಚ್ಚಿನ ಮಾಹಿತಿ ಪಡೆಯಿರಿ.
ಸಹಾಯವಾಣಿ ಸಂಖ್ಯೆ: 1902