ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೋಬೇಷನರಿ ಆಫೀಸರ್ ಹುದ್ದೆಗೆ ನೇಮಕಾತಿ
ಬೆಂಗಳೂರು: ಕರ್ನಾಟಕ ಬ್ಯಾಂಕ್ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಪ್ರೋಬೇಷನರಿ ಆಫೀಸರ್ ಹುದ್ದೆ ಖಾಲಿ ಇದ್ದು, ಅಧಿಕೃತ ವೆಬ್ಸೈಟ್ www.karnatakabank.com ನಲ್ಲಿ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ.
ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜನವರಿ 19 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಲು ಕೋರಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ:
ಕರ್ನಾಟಕ ಬ್ಯಾಂಕ್ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ಯಾವುದೇ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ವಯೋಮಿತಿ:
ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೋಬೇಷನರಿ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 28 ವರ್ಷ ಆಗಿದೆ. ಕಾಯ್ದಿರಿಸಿದ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಐದು ವರ್ಷ ಸಡಿಲಿಕೆ ಇರುತ್ತದೆ.
ಆನ್ಲೈನ್ ಅಪ್ಲಿಕೇಶನ್ ರಿಜಿಸ್ಟ್ರೇಷನ್ 31-12-2022 ರಿಂದ 10-01-2023 ರವರೆಗೆ ಇರುತ್ತದೆ.
ಆಯ್ಕೆ ಪ್ರಕ್ರಿಯೆ:
ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೋಬೇಷನರಿ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ವೆಬ್ಸೈಟ್ ಲಿಂಕ್ಗಾಗಿ ಇಲ್ಲಿ ಕ್ಲಿಕ್ ಮಾಡಿ https://karnatakabank.com/careers
ಆನ್ಲೈನ್ ನಲ್ಲಿ ಅಪ್ಲೈ ಮಾಡಲು ಈ ಲಿಂಕ್ ಅನ್ನು ಒತ್ತಿ https://ibpsonline.ibps.in/kabodec22/