Friday, September 20, 2024

ಆಂಗ್ಲ ಮಾಧ್ಯಮ ಶಾಲೆಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಅಜಾದ ಮಾದರಿ ಶಾಲೆ ಆಂಗ್ಲ ಮಾಧ್ಯಮ ಶಾಲೆಗಳ 2023-24 ನೇ ಸಾಲಿನ 6 ನೇ ತರಗತಿಯ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಶಾಲೆಯಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಆಯಾ ಶಾಲೆಗಳ ಮುಖ್ಯ ಶಿಕ್ಷಕರಲ್ಲಿ ಹಾಗೂ ಜಿಲ್ಲೆಯ ಎಲ್ಲ ತಾಲೂಕು ಮಾಹಿತಿ ಕೇಂದ್ರಗಳಲ್ಲಿ ಅರ್ಜಿ ನಮೂನೆಯನ್ನು ಪಡೆದುಕೊಂಡು ಭರ್ತಿ ಮಾಡಿ, ಪ್ರವೇಶಾತಿಗೆ ಬೇಕಾದ ಅಗತ್ಯ ದಾಖಲಾತಿಗಳನ್ನು ಇದೇ ಮೇ 10 ದಿನಾಂಕದರೊಳಗೆ ಸಲ್ಲಿಸಲು ಕೋರಲಾಗಿದೆ. ಹಾಗಿದ್ದರೆ, ಪ್ರವೇಶಾತಿಗೆ ಅರ್ಹತೆಗಳೇನು? ದಾಖಲೆಗಳೇನು? ಸ್ಥಳ ಎಲ್ಲಿ? ಇದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿರುತ್ತೆ.

ಇದನ್ನೂ ಓದಿ:ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್‍ ಕಾರ್ಡ ಲಿಂಕ್ ಆಗಿದೆಯೋ? ಇಲವೋ ? ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಿ.

ಅರ್ಹತೆಗಳು :
ವಿದ್ಯಾರ್ಥಿಗಳು ಮುಸ್ಲಿಂ, ಕ್ರಿಶ್ಚಿಯನ್,ಜೈನ್, ಸಿಖ್ಖ, ಬೌದ್ದ್,ಮತ್ತು ಪಾರ್ಸಿ,ಸಮುದಾಯಕ್ಕೆ ಸೇರಿದವರು ಇರಬೇಕು.
ಸರ್ಕಾರದ ಅಥವಾ ಅಂಗಿಕೃತ ಶಾಲೆಗಳಲ್ಲಿ 5 ನೇ ತರಗತಿ ಉತ್ತಿರ್ಣರಾಗಿರಬೇಕು.
ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ಮೀರಿರಬಾರದು.
ಅಲ್ಪಸಂಖ್ಯಾತರ ವರ್ಗಗಳಿಗೆ ಶೇ. 75 ರಷ್ಟು ಮತ್ತು ಇತರೆ ಹಿಂದಿಳಿದ ವರ್ಗದವರಿಗೆ ಶೇ. 25 ರಷ್ಟು ಮೀಸಲಾತಿ ಇರುತ್ತದೆ.

ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಪ್ರವೇಶಕ್ಕೆ ಆಸಕ್ತಿ ಇರುವ ವಿದ್ಯಾರ್ಥಿಗಳು ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಅರ್ಜಿ ನಮೂನೆಗಳನ್ನು ಪಡೆದುಕೊಳ್ಳಬೇಕು. ನಂತರ ಜಾತಿ, ಆದಾಯ ಪ್ರಮಾಣ ಪತ್ರದ ಪ್ರತಿ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ನಿಗದಿಪಡಿಸಿದ ದಿನಾಂಕದೊಳಗೆ ಸಲ್ಲಿಸಬೇಕು.

ಸ್ಥಳ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ, ಹಳಿಯಾಳ, ಕುಮಟಾ

ಇದನ್ನೂ ಓದಿ: ದ್ವಿತೀಯ PUC ಫಲಿತಾಂಶ: ಯಾವ ಜಿಲ್ಲೆಗೆ ಶೇಖಡಾವಾರು ಎಷ್ಟು? ಪ್ರಥಮ,ದ್ವಿತೀಯ ಮತ್ತು ಕೊನೆಯ ಜಿಲ್ಲೆ ಯಾವುದು?

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಯ ದೂರವಾಣಿ ಸಂಖ್ಯೆಗೆ 08382-220336 ಕರೆ ಮಾಡಿ ಇನ್ನೂ ಹೆಚ್ಚಿನ ಮಾಹಿತೊಇಯನ್ನು ಪಡೆಯಬಹುದಾಗಿರುತ್ತದೆ.
ಮುಂಡಗೋಡ -9008841149
ಹಳಿಯಾಳ- 9611038069
ಕುಮಟಾ- 9739883303
ಈ ಮೇಲೇ ತಿಳಿಸಿರುವ ನಂಬರ್‍ ಗಳಿಗೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

ಪ್ರತಿ ಜಿಲ್ಲೆಯಲ್ಲೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿರುತ್ತೆ. ಆಸಕ್ತರು ನಿಮ್ಮ ಜಿಲ್ಲಾ ಮತ್ತು ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಮಾಹಿತಿಯನ್ನು ಪಡೆಯಿರಿ.

ಇತ್ತೀಚಿನ ಸುದ್ದಿಗಳು

Related Articles