Thursday, November 14, 2024

ಹವಾಮಾನ ಇಲಾಖೆಯಿಂದ ಮಾಹಿತಿ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆರಾಯನ ಆಗಮನ:ಯಾವ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಮಾಹಿತಿ

ಆತ್ಮೀಯ ರೈತ ಬಾಂದವರೇ ಈ ವರ್ಷ ಮಳೆರಾಮನ ಆಗಮನವೇ ತಡವಾಗಿದ್ದು, ಆಗಸ್ಟ್ ತಿಂಗಳ ಆರಂಭದಲ್ಲೇ ಕೈ ಕೊಟ್ಟ ಮಳೆಯಿಂದಾಗಿ ಹಲವು ಜಲಾಶಯಗಳಲ್ಲಿ ನೀರಿನ ಪ್ರಮಾಣ ಬಹಳ ಕಡಿಮೆಯಾಗಿದೆ. ಇಂದಿನಿಂದ ರಾಜ್ಯದ ಬಹುತೇಕ ಜಿಲ್ಲೆಯಲ್ಲಿ ಮಳೆರಾಯನ ಆಗಮನವಾಗಲಿದೆ ಎಂದು ಭಾರತೀಯ ಹವಾಮಾನ ಮೂನ್ಸೂಚೆನೆ ಇಲಾಖೆ ಮಾಹಿತಿ ನೀಡಿರುತ್ತದೆ.

ರಾಜ್ಯದ ಕರಾವಳಿ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾದ್ಯತೆ ಇರುತ್ತದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆ ಹಾಗೂ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇರುವುದಾಗಿ ಮಾಹಿತಿಯಿದೆ. ರಾಜ್ಯದ ಬಹುತೇಕ ಕಡೆ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ತಿಳಿಸಿದೆ.

ಕಳೆದ ಎರಡು ಮತ್ತು ಮೂರು ದಿನಗಳಿಂದ ರಾಜ್ಯದಲ್ಲಿ ಮತ್ತೆ ಮಳೆ ಪ್ರಾರಂಭವಾಗಿದೆ. ರಾಜ್ಯದ ಬಹುತೇಕ ಪ್ರದೇಶದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಆಗಸ್ಟ್ ಆರಂಭದಿಂದಲೂ ಮಳೆಯಾಗದ ಹಿನ್ನಲೆ ರಾಜ್ಯದಲ್ಲಿ ಮಳೆ ಕೊರತೆ ಉಂಟಾಗಿದ್ದು, ಮತ್ತೆ ಮಳೆರಾಯನ ಆಗಮನ ಗೋಚರಿಸುತ್ತಿದೆ.

ಇದನ್ನೂ ಓದಿ: ಇಲಾಖೆಯಿಂದ ಅನರ್ಹ ಮತ್ತು ಅರ್ಹ ಪಡಿತರ ಚೀಟಿ ಪಟ್ಟಿ!!

ಇದನ್ನೂ ಓದಿ: ಬರ ಘೋಷಣೆಗೆ ಸರ್ಕಾರ ಚಿಂತನೆ: ಕೃಷಿ ಸಚಿವ Shri .N.ಚೆಲುವರಾಯ ಸ್ವಾಮಿ:

ಉತ್ತರ ಒಳನಾಡು ಭಾಗದಲ್ಲಿ ಹಗುರವಾಗಿ ಮಳೆಯಾಗಿರುವ ವರದಿಗಳು ಬಂದಿವೆ. ಇನ್ನುಳಿದಂತೆ ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದ್ದು, ಜನರಿಗೆ ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಲಾಗಿದೆ. ರಾಜ್ಯದ ಕರಾವಳಿ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ.

ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ
ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆ ಹಾಗೂ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಹೇಳಿದೆ.

ಯಾವ ಜಿಲ್ಲೆಯಲ್ಲಿ ಮಳೆ ಇದೆ?

ಇನ್ನೂ ಮಳೆ ಕಡಿಮೆಯಾಗಿದ್ದರಿಂದ ಆಗಸ್ಟ್ ಮೊದಲ ಎರಡು ವಾರದಲ್ಲಿ ಬಿಸಿಲು ಸಹ ಹೆಚ್ಚಾಗಿತ್ತು. ಮಳೆಗಾಲದಲ್ಲಿಯೂ ಗರಿಷ್ಠ 30 ರಿಂದ 33 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ದಾಖಲಾಗಿತ್ತು. ಇದೀಗ ಮತ್ತೆ ಮಳೆ ಆರಂಭವಾಗಿದ್ದು, ರೈತರಿಗೆ ನಿಟ್ಟೂಸಿರು ಬಿಟ್ಟಂತಾಗಿದೆ.

ಇನ್ನೂ ಈ ಮಧ್ಯೆ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಕೊಪ್ಪಳ, ಬೆಂಗಳೂರು ಮತ್ತು ದಾವಣಗೆರೆಯಲ್ಲಿ ಸಾಧಾರಣ ಮಳೆಯಾಗಿದೆ.
ಮಳೆ ಚೆನ್ನಾಗಿ ಬಂದು ರೈತನ ಬೆಳೆ ಚೆನ್ನಾಗಿ ಬೆಳೆದು ಒಳ್ಳೆಯ ಇಳುವರಿ ಬರುವಂತಾಗಲಿ ಎಂದು ಪ್ರಾರ್ಥಿಸುವ.

ಇದನ್ನೂ ಓದಿ: ಕಲ್ಪವೃಕ್ಷ (ತೆಂಗಿನಮರಕ್ಕೂ) ವಿಮೆ! ಎಲ್ಲಿ ಅರ್ಜಿಸಲ್ಲಿಸಬೇಕು ?
ಇದನ್ನೂ ಓದಿ: Solar Energy Scheme:ಸೌರ ಶಕ್ತಿ ಆಧಾರಿತ 3 HPಯಿಂದ 7.5 HP ಕೃಷಿ ಪಂಪ್‌ಸೆಟ್ ಗಳಿಗೆ ಸರ್ಕಾರದಿಂದ ಶೇ. 80 Subsidy.

ಇತ್ತೀಚಿನ ಸುದ್ದಿಗಳು

Related Articles