Friday, September 20, 2024

Scholarship Schemes: ಈ ಮೂರು ಯೋಜನೆಯಡಿ ವಿದ್ಯಾರ್ಥಿವೇತನ 2,35,000/- ರೂ. ಇಂದೇ ಅರ್ಜಿ ಸಲ್ಲಿಸಿ.

Scholarship Schemes: ಈ ಮೂರು ಯೋಜನೆಯಡಿ ವಿದ್ಯಾರ್ಥಿವೇತನ 2,35,000/- ರೂ ಇಂದೇ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ವಿದ್ಯಾ ಅರ್ಹತೆಗಳೇನು? ಯಾವ ಯಾವ ಯೋಜನೆಗಳು ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ.

ಆತ್ಮೀಯ ವಿದ್ಯಾರ್ಥಿ ಮಿತ್ರರೇ ಪ್ರತಿ ವರ್ಷವು ಹಲವಾರು ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳು ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲೇಂದು ಮತ್ತು ಮುಂದಿನ ಶೈಕ್ಷಣಿಕ ಕಲಿಕೆಗೆ ಉಪಯೋಗವಾಗುವ ದೃಷ್ಠಿಯಿಂದ ವಿದ್ಯಾರ್ಥಿವೇತನವು ವಿದ್ಯಾರ್ಥಿಗಳಿಗೆ ನೀಡಲಾಗುವ ಒಂದು ರೀತಿಯ ಆರ್ಥಿಕ ಪ್ರೋತ್ಸಾಹ ಧನವಾಗಿದೆ.ಇದರಿಂದ ಎಷ್ಟೋ ಬಡ ವಿದ್ಯಾರ್ಥಿಗಳಿಗೆ ಸಹಾಯವಾಗಿದೆ.

ಆ ಒಂದು ನಿಟ್ಟಿನಲ್ಲಿ ಸೆಪ್ಟೆಂಬರ್-ಅಕ್ಟೋಬರ್ 2023 ರ ತಿಂಗಳ ಕೊನೆಯ ದಿನಾಂಕದೊಂದಿಗೆ ಕೊನೆಗೊಳ್ಳುವ ಮೂರು ವಿದ್ಯಾರ್ಥಿವೇತನ ಮತ್ತು ಫೆಲೋಶಿಪ್ ಕಾರ್ಯಕ್ರಮಗಳೊಂದಿಗೆ ವಿದ್ಯಾರ್ಥಿವೇತನಗಳು ಶಿಕ್ಷಣ ಕ್ಷೇತ್ರದಲ್ಲಿ ಅವಕಾಶಗಳಿಗೆ ದಾರಿದೀಪವಾಗಿ ವಿದ್ಯಾರ್ಥಿಗಳ ಜೀವನಕ್ಕೆ ಬೆಳಕಾಗುವ ವಿದ್ಯಾರ್ಥಿವೇತನದ ಯೋಜನೆಗಳ ಬಗ್ಗೆ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

  1. GSK Scholarship:ಜಿಎಸ್ ಕೆ ಸ್ಕಾಲರ್ಸ್ ಪ್ರೋಗ್ರಾಂ 2023-24: ಮೊದಲನೆಯದಾಗಿ GSK Scholarship scheme:2023-24

ಜಿಎಸ್ಕೆ ಸ್ಕಾಲರ್ಸ್ ಪ್ರೋಗ್ರಾಂ 2023-24 ಭಾರತದ ಸರ್ಕಾರಿ ಕಾಲೇಜುಗಳಲ್ಲಿ ಮೊದಲ ವರ್ಷದ ಎಂಬಿಬಿಎಸ್ ಅಧ್ಯಯನ ಮಾಡುತ್ತಿರುವ ಪ್ರತಿಭಾವಂತ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಬೆಂಬಲ ನೀಡುವ ಗುರಿಯನ್ನು ಹೊಂದಿದೆ.

ಅರ್ಹತೆ


12 ನೇ ತರಗತಿಯಲ್ಲಿ ಕನಿಷ್ಠ 65% ಅಂಕಗಳನ್ನು ಪಡೆದ ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ರೂ. 6,00,000 ಕ್ಕಿಂತ ಕಡಿಮೆ ಇರಬೇಕು.
ವಿದ್ಯಾರ್ಥಿ ವೇತನ ವರ್ಷಕ್ಕೆ ರೂ. 10,000/- 1,00,000 /-ವರೆಗೆ ಅವಕಾಶವಿದೆ.
ಈ ಯೋಜನೆಯಡಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 10-10-2023 ವಾಗಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ಆನ್ ಲೈನ್ ಅರ್ಜಿಗಳು ಮಾತ್ರ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕಾಣಿಸಿರುವ ಜಾಲತಾಣ ಲಿಂಕ್ ಮೇಲೆ ಒತ್ತುವುದರ ಮೂಲಕ ತಿಳಿಯಿರಿ www.b4s.in/it/GSKP3

ಇದನ್ನೂ ಓದಿ: 2019 ರ ಹಿಂದಿನ ವಾಹನಗಳಿಗೆ ಈ ನಿಯಮ ಕಡ್ಡಾಯ!!!
ಇದನ್ನೂ ಓದಿ: Agriculture equipment subsidy: ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ದೊರೆಯುವ ಕೃಷಿ ಯಂತ್ರೋಪಕರಣಗಳು.

  1. Aditya Birla Capital Scholarship-: ಎರಡನೇ ಯೋಜನೆಯಾದ ಆದಿತ್ಯ ಬಿರ್ಲಾ ಕ್ಯಾಪಿಟಲ್ ಸ್ಕಾಲರ್ಶಿಪ್ 2023-24:ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ನಿಂದ ಪ್ರತಿ ವರ್ಷ ನೀಡುವ ಆದಿತ್ಯ ಬಿರ್ಲಾ ಕ್ಯಾಪಿಟಲ್ ಸ್ಕಾಲರ್‌ಶಿಪ್ ಯೋಜನೆಯಡಿ ಈ ವರ್ಷವೂ ಸಹ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ.

ಈ ಯೋಜನೆಯಡಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅವರ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗಲು ಆರ್ಥಿಕವಾಗಿ ನೆರವು ನೀಡಲಾಗುತ್ತದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬವುದು.
ಆದಿತ್ಯ ಬಿರ್ಲಾ ಕ್ಯಾಪಿಟಲ್ ಸ್ಕಾಲರ್ಶಿಪ್ 2023-24 ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಮತ್ತು ಶೈಕ್ಷಣಿಕ ನೆರವು ಸೇವೆಗಳನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ.

ಈ ಯೋಜನೆಗೆ ಅರ್ಹತೆಗಳು:

1 ನೇ ತರಗತಿಯಿಂದ ಪದವಿಪೂರ್ವ ಕೊರ್ಸ ಗಳ ವಿದ್ಯಾರ್ಥಿಗಳು (ಸಾಮಾನ್ಯ ಮತ್ತು ವೃತ್ತಿಪರ) ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ತೆರೆಯಲಾಗಿದೆ.

ಇವರೆಲ್ಲಾ ಅರ್ಜಿ ಸಲ್ಲಿಸಬವುದಾಗಿರುತ್ತದೆ.

ಅರ್ಜಿದಾರರು ತಮ್ಮ ಹಿಂದಿನ ತರಗತಿಯಲ್ಲಿ ಕನಿಷ್ಠ 60% ಅಂಕಗಳನ್ನು ಪಡೆದಿರಬೇಕು.

ಅರ್ಜಿದಾರರ ಸಲ್ಲಿಸುವ ವಿದ್ಯಾರ್ಥಿಯ ಕುಟುಂಬದ ಒಂದು ವರ್ಷದ ಆದಾಯವು ಎಲ್ಲಾ ಮೂಲಗಳಿಂದ 6 ಲಕ್ಷ ಕ್ಕಿಂತ ಹೆಚ್ಚಿಗೆ ಇರಬಾರದು.

ಆದಿತ್ಯ ಬಿರ್ಲಾ ಕ್ಯಾಪಿಟಲ್ ಲಿಮಿಟೆಡ್ ಮತ್ತು ಅದರ ಅಂಗಸಂಸ್ಥೆಗಳಲ್ಲಿ ಉದ್ಯೋಗದಲ್ಲಿರುವ ವ್ಯಕ್ತಿಯ ಮಕ್ಕಳು ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ರೂ. 6 ಲಕ್ಷ ಮೀರಬಾರದು.

ವಿದ್ಯಾರ್ಥಿವೇತನವು :

ವರ್ಷಕ್ಕೆ 60,000/- ರೂ.ವರೆಗೆ ಇರುತ್ತದೆ.

ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 30-09-2023 ವಾಗಿರುತ್ತದೆ.

ಅರ್ಜಿ ವಿಧಾನ: ಆನ್ ಲೈನ್ ಅರ್ಜಿಗಳು ಮಾತ್ರ ಸಲ್ಲಿಸಬಹುದಾಗಿರುತ್ತದೆ. ಇನ್ನೂ ಹೆಚ್ಚಿನ ಮಾಹಿತಿ ಈ ಕೆಳಗೆ ಕಾಣಿಸಿದ ಜಾಲತಾಣದಲ್ಲಿ ವಿವರಿಸಲಾಗಿದೆ.

www.b4s.in/it/ABCC5 ಇದರ ಬಗ್ಗೆ ಹೆಚ್ಚಿನ ಮಾಹಿತಿ ಈ ಕೆಳಗಿನ ಲಿಂಕ್ ನಲ್ಲಿ ನೀಡಲಾಗಿದೆ.

ಇದನ್ನೂ ಓದಿ: Aditya Birla Capital Scholarship

  1. HDFC Bank: ಎಚ್ಎಸ್ಸಿ ಬ್ಯಾಂಕ್ ಪರಿವರ್ತನ 2023-24ರ ಇಸಿಎಸ್ಎಸ್ ಕಾರ್ಯಕ್ರಮ:

ಎಚ್ಎಸ್ಸಿ ಬ್ಯಾಂಕ್ 1 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಂದ ಸ್ನಾತಕೋತ್ತರ ಮಟ್ಟಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹತೆ


ವಿದ್ಯಾರ್ಥಿವೇತನವನ್ನು ಭಾರತೀಯ ನಾಗರಿಕರಿಗೆ ಮಾತ್ರ ನೀಡಲಾಗುವುದು.
ವಿದ್ಯಾರ್ಥಿಗಳು 1 ರಿಂದ 12 ನೇ ತರಗತಿ, ಡಿಪ್ಲೊಮಾ, – ಐಟಿಐ, ಪಾಲಿಟೆಕ್ನಿಕ್, ಪದವಿಪೂರ್ವ ಅಥವಾ ಸ್ನಾತಕೋತ್ತರ (ಸಾಮಾನ್ಯ ಮತ್ತು ವೃತ್ತಿಪರ ಸೇರಿದಂತೆ) ಕೋರ್ಸಗಳಲ್ಲಿ ಅಧ್ಯಯನ ಮಾಡಿರಬೇಕು.
ಅರ್ಜಿದಾರರು ತಮ್ಮ ಹಿಂದಿನ ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಠ 55% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಮತ್ತು ಅವರ ಕುಟುಂಬದ ವಾರ್ಷಿಕ ಆದಾಯವು 2.5 ಲಕ್ಷ ರೂ.ಗಿಂತ ಕಡಿಮೆ ಅಥವಾ ಸಮಾನವಾಗಿರಬೇಕು.
ಕಳೆದ ಮೂರು ವರ್ಷಗಳಲ್ಲಿ ಸಂಭವಿಸಿದ ವೈಯಕ್ತಿಕ ಅಥವಾ ಕುಟುಂಬ ಬಿಕ್ಕಟ್ಟುಗಳನ್ನು ಎದುರಿಸುತ್ತಿರುವ ಅರ್ಜಿದಾರರಿಗೆ ಆದ್ಯತೆ ನೀಡಲಾಗುವುದು.

ವಿದ್ಯಾರ್ಥಿವೇತನವು :

ವರ್ಷಕ್ಕೆ ರೂ. 75,000/- ವರೆಗೆ ಇರುತ್ತದೆ.

ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಇದೆ ತಿಂಗಳ : 30-09-2023ವಗಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್ ಅರ್ಜಿಗಳಿಗೆ ಮಾತ್ರ ಅವಕಾಶವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಇಲ್ಲಿ ನೀಡಿರುವ ಜಾಲತಾಣ ಮೂಲಕ ತಿಳಿಯಬಹುದು.

www.b4s.in/it/HDFC44
ಈ ಮೂರು ಯೋಜನೆಯಡಿ ಅರ್ಜಿ ಸಲ್ಲಿಸಿ ಅರ್ಹ ವಿದ್ಯಾರ್ಥಿಗಳು ಇದರ ಲಾಭ ಪಡೆಯುವ ಮೂಖಾಂತರ ವಿದ್ಯಾಭ್ಯಾಸ ಮುಂದುವರೆಸಬಹುದು.
ಇದನ್ನೂ ಓದಿ: ಅಂಚೆ ಕಚೇರಿಯ ಖಾತೆಗೆ ಆಧಾರ್‍ ಕಾರ್ಡ ಲಿಂಕ್ ಆಗದ್ದಿದರೆ ಈ ಎಲ್ಲಾ ಯೋಜನೆಗಳು ರದ್ದಾಗುವವು!!!
ಇದನ್ನೂ ಓದಿ: ಆಧಾರ್ ಕಾರ್ಡ ಯಾವ ಬ್ಯಾಂಕ್ ಅಕೌಂಟ್ ಗೆ ಲಿಂಕ್ ಆಗಿದೆ ಎಂದು ತಿಳಿಯಲು ಜಾಲತಾಣದ ಲಿಂಕ್:

ಇತ್ತೀಚಿನ ಸುದ್ದಿಗಳು

Related Articles