Sunday, October 6, 2024

Subsidy Schemes: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ:ಯಾವ ಯೋಜನೆಯಡಿ ಸಹಾಯಧನ ? ಸಾಲದ ಮೊತ್ತ ಏಷ್ಟು? ಕೊನೆಯ ದಿನಾಂಕ ಯಾವುದು? ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ.

ಆತ್ಮೀಯ ಸ್ನೇಹಿತರೇ ನೀವು ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದವರು ಆಗಿದ್ದರೇ ತಕ್ಷಣ ಈ ಯೋಜನೆ ಸಹಾಯಧನದ ಲಾಭ ಪಡೆಯಲು ಆಸಕ್ತಿವಹಿಸಿ ,ಯಾವ ಯಾವ ಯೋಜನೆಗಳಡಿ ಏನೆಲ್ಲಾ ಲಾಭಗಳಿವೆ ಎಂದು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.


Veerashaiva Lingayat: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವೀರಶೈವ ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ-3ಬಿ) ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಹರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಸಾಲ ಯೋಜನೆಗಳಡಿ ಸ್ವಾವಲಂಭಿ ಸಾರಥಿ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ವಿಭೂತಿ ನಿರ್ಮಾಣ ಘಟಕ, ಬಸವ ಬೆಳಗು ಯೋಜನೆ(ಹೊಸತು, ನವೀಕರಣ), ವಿದೇಶ ವಿದ್ಯಾ ವಿಕಾಸ ಯೋಜನೆ (ಹೊಸತು, ನವೀಕರಣ) ಮತ್ತು ಜೀವ ಜಲ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ,

ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಗಳಡಿ ಸಾಲ ಸೌಲಭ್ಯ ಹಾಗೂ ಸಹಾಯಧನ ನೀಡಲಾಗುವುದು.ಹಾಗಿದ್ದರೆ ಈ ಕೆಳಗೆ ಎಲ್ಲಾ ಯೋಜನೆಗಳ ಮಾಹಿತಿಯನ್ನು ವಿವರಿಸಲಾಗಿದೆ ಈ ಮಾಹಿತಿಯನ್ನು ನೀವು ಓದಿ ನಿಮ್ಮ ಆತ್ಮೀಯರಿಗೂ ಶೇರ್‍ ಮಾಡಿ.

ಇದನ್ನೂ ಓದಿ: ಶೇಕಡಾ 90 ರ ಸಹಾಯಧನದಲ್ಲಿ ನೀರಾವರಿ ಘಟಕಗಳಿಗೆ ಅರ್ಜಿ:
ಇದನ್ನೂ ಓದಿ: ಹಸು, ಎಮ್ಮೆ, ಕುರಿ, ಮೇಕೆ, ಹಂದಿ ಮತ್ತು ಕೋಳಿ ಸಾಕಾಣಿಕೆಗೆ ಸಾಲ ಸೌಲಭ್ಯ :

Svavalanbhi Sarati Yojane:ಸ್ವಾವಲಂಭಿ ಸಾರಥಿ ಯೋಜನೆ :

ಈ ಯೋಜನೆಯಡಿಯಲ್ಲಿ ಹಳದಿ ಬೋರ್ಡ್ ಕಾರು ಖರೀದಿಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ. ಮತ್ತು ವೀರಶೈವ ಲಿಂಗಾಯತ ಸಮುದಾಯದ ಜನರಿಗೆ ಮಾತ್ರ . ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ನಿರುದ್ಯೋಗಿ ಚಾಲಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಭಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರ ವಾಹನ (ಹಳದಿ ಬೊರ್ಡ್) ಖರೀದಿಗೆ ಅನುಕೂಲ ಮಾಡಿಕೊಡುತ್ತದೆ.


ನೀವು ಈ ಯೋಜನೆಯಡಿಯಲ್ಲಿ ಪಡೆಯುವ ಸಾಲಕ್ಕೆ ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷಗಳ ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡಲಾಗುತ್ತದೆ. ಉಳಿದ ಮೊತ್ತವನ್ನು ಬ್ಯಾಂಕ್/ ಹಣಕಾಸು ಸಂಸ್ಥೆಗಳ ಮೂಲಕ ಅವರು ವಿಧಿಸುವ ಚಾಲ್ತಿ ಬಡ್ಡಿದರದಲ್ಲಿ ಸಾಲ ಪಡೆಯಬಹುದಾಗಿದೆ.

Vibhuti Unit and Khanavali: ವಿಭೂತಿ ಘಟಕ, ಖಾನಾವಳಿ ತೆರೆಯಲು ಸಾಲ ಸೌಲಭ್ಯ:

ವೀರಶೈವ-ಲಿಂಗಾಯತ ಸಮುದಾಯದವರು ವಿಭೂತಿಯನ್ನು ತಯಾರಿಸುವವರಿಗೆ ಸಾಲ ಮತ್ತು ಸಹಾಯಧನ ನೀಡುವ ಯೋಜನೆ ಇದಾಗಿದೆ.
ಘಟಕ ವೆಚ್ಚ ರೂ.2,00,000/- ಗಳಿಗೆ ಶೇ.15ರಷ್ಟು ಗರಿಷ್ಠ ರೂ.10,000/-ಗಳ ಸಹಾಯಧನವನ್ನು ಹಾಗೂ ಉಳಿಕೆ ಶೇ.15ರಷ್ಟು ಗರಿಷ್ಠ ರೂ.1,70,000/-ಗಳನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಸಾಲವನ್ನು ನೀಡಲಾಗುತ್ತದೆ

ಇದನ್ನೂ ಓದಿ: ತೋಟಗಾರಿಕೆ ಇಲಾಖೆಯಿಂದ 2,50000/- ಲಕ್ಷ ರೂ. ವೈಯಕ್ತಿಕ ಕೆಲಸಗಳಿಗೆ ಅರ್ಜಿ ಸಲ್ಲಿಸಿ:
ಇದನ್ನೂ ಓದಿ: ಹೊಸ ವೃತ್ತಿ ಪ್ರಾರಂಭಿಸಲು 100000/-ರೂ ಪ್ರೋತ್ಸಾಹಧನ.

ಭೋಜನಾಲಯ ಕೇಂದ್ರ ಸ್ಥಾಪನೆಗೆ ಸಮುದಾಯದ ಜನರು ಖಾನಾವಳಿ ಉದ್ಯಮ ವನ್ನು ಮಾಡಲು ಬಯಸಿದರೆ, ಹಂತವರಿಗೆ ಈ ಯೋಜನೆಯಲ್ಲಿ ಸಾಲ ಮತ್ತು ಸಹಾಯಧನ ನೀಡಲಾಗುತ್ತದೆ.
ಹೋಟೆಲ್ ಉದ್ದಿಮೆ ಕೈಗೊಳ್ಳಲು ಘಟಕ ವೆಚ್ಚ ರೂ. 5.00 ಲಕ್ಷ ಇದರಲ್ಲಿ ರೂ.4,60,000/- ಸಾಲ ಮತ್ತು ರೂ.10,000/- ಸಹಾಯಧನ ನೆರವು ನೀಡಲಾಗುತ್ತದೆ ಮತ್ತು ಫಲಾನುಭವಿಗಳು ತಮ್ಮ ಸ್ವಂತ ಹೆಸರಿನಲ್ಲಿ ಕನಿಷ್ಠ 20+30 ಅಳತೆಯುಳ್ಳ ನಿವೇಶನ ಹೊಂದಿರಬೇಕು.

Self Employed: ಸ್ವಯಂ ಉದ್ಯೋಗ ಸಾಲ ಯೋಜನೆ :

ಈ ಯೋಜನೆಯ ಅಡಿಯಲ್ಲಿ ಕೃಷಿ ಅವಲಂಬಿತ ಚಟುವಟಿಕೆಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ. ಮತ್ತು ವೀರಶೈವ ಲಿಂಗಾಯತ ಸಮುದಾಯದ ಜನರಿಗೆ ಮಾತ್ರ. ಈ ಯೋಜನೆಯಡಿಯಲ್ಲಿ ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ನಿರುದ್ಯೋಗ ಇರುವವರಿಗೆ ಸ್ವಯಂ ಉದ್ಯೋಗವನ್ನು ಕಲ್ಪಿಸಿಕೊಳ್ಳಲು ಅವರು ಕೈಗೊಳ್ಳುವ ಕೃಷಿ ಅಥವಾ ಕೃಷಿ ಅವಲಂಬಿತ ಚಟುವಟಿಕೆಗಳು, ವ್ಯಾಪಾರ, ಸಾರಿಗೆ ಮತ್ತು ಯಂತ್ರೋಪಕರಣಗಳನ್ನು ಕೊಳ್ಳುವ ಅರ್ಥಿಕ ಚಟುವಟಿಕೆಗಳು/ ಉದ್ಯಮಗಳಿಗೆ ಸಾಲವನ್ನು ನೀಡಲಾಗುತ್ತದೆ.ನೀವೇನಾದರೂ ವಾಣಿಜ್ಯ ಬ್ಯಾಂಕ್ಗಳ ಮೂಲಕ ಸಾಲ ಪಡೆದಿದ್ದಲ್ಲಿ ನಿಗಮದಿಂದ 20 %ರಷ್ಟು ಅಥವಾ ಗರಿಷ್ಟ ರೂ. 100 ಲಕ್ಷಗಳ ಸಹಾಯಧನ ಮಂಜೂರು ಮಾಡಲು ಅವಕಾಶವಿದೆ.

Basava belaku yojane: ಬಸವ ಬೆಳಗು ಯೋಜನೆ :

ಈ ಯೋಜನೆಯು ಶೈಕ್ಷಣಿಕ ಸಾಲವನ್ನು ಒದಗಿಸುತ್ತದೆ. ವೃತ್ತಿಪರ ಕೋರ್ಸ್ ಗಳನ್ನು ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಶೈಕ್ಷಣಿಕ ಸಾಲದ ಯೋಜನೆ ಉಪಯೋಗವಾಗುತ್ತದೆ.
ಅರ್ಹ ಅಭ್ಯರ್ಥಿಗಳು ಕುಟುಂಬದ ಆದಾಯವು 3.5 ಲಕ್ಷದ ಮಿತಿಯಲ್ಲಿ ಇರಬೇಕು .
ವಿದ್ಯಾರ್ಥಿಗಳು ವಿವಿಧ 28 ವೃತ್ತಿಪರ ಕೋರ್ಸ್ ಗಳಲ್ಲಿ ಏನಾದರೂ ವ್ಯಾಸಂಗ ಮಾಡುತ್ತಿರುವವರು ಇದ್ದರೆ ಅಂತವರಿಗೆ 2% ರಷ್ಟು ಬಡ್ಡಿ ದರದಲ್ಲಿ ಸಾಲವನ್ನು ನೀಡಲಾಗುತ್ತದೆ
ಬಸವ ಬೆಳಕು ಯೋಜನೆ 2023 23ನೇ ಸಾಲಿನಲ್ಲಿ ಸಾಲ ಪಡೆದಿದ್ದರೆ ವಿದ್ಯಾರ್ಥಿಗಳು ಎರಡನೇ ಕಂತಿನ ಹೊಸ ಸಾಲವನ್ನು ಪಡೆಯಲು ವ್ಯಾಸಂಗ ದೃಢೀಕರಣ ಪತ್ರ ಮತ್ತು ಹಿಂದಿನ ವರ್ಷದ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

Jeeva jala Yojane:ಜೀವ ಜಲ ಯೋಜನೆ :

ಈ ಜೀವ ಜಲ ಯೋಜನೆಯು ನೀರಾವರಿ ಸೌಲಭ್ಯ ಒದಗಿಸುತ್ತದೆ. ಈ ಯೋಜನೆಯಡಿಯಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ಕೊಳವೆ ಬಾವಿ ಕೊರೆಸುವ ಮುಖಾಂತರ ನೀರಾವರಿ ಸೌಲಭ್ಯವನ್ನು ಒದಗಿಸಲಾಗುತ್ತದೆ. ಈ ಯೋಜನೆಯನ್ನೂ ಪಡೆಯುವ ಅರ್ಹರು ಏನಾದರೂ ಗ್ರಾಮಾಂತ ಪ್ರದೇಶದವರಾಗಿದ್ದರೆ ವಾರ್ಷಿಕ ಆದಾಯ 98,000 ಮತ್ತು ಪಟ್ಟಣ ಪ್ರದೇಶದವರಾಗಿದ್ದರೆ ವಾರ್ಷಿಕ ಆದಾಯ 1,20,000 ಮಿತಿಯ ಒಳಗೆ ಇರಬೇಕು.

Kayaka kiran :ಕಾಯಕ ಕಿರಣ ಯೋಜನೆ :

ಕಾಯಕ ಕಿರಣ ಯೋಜನೆಯಡಿ ವೀರಶೈವ-ಲಿಂಗಾಯತ ಸಮುದಾಯದ ನಿರುದ್ಯೋಗಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ಚಟುವಟಿಕೆಗಳ ಅನುಸಾರ ಈ ಕೆಳಕಂಡಂತೆ ಸಾಲ ಮತ್ತು ಸಹಾಯಧನ ಸೌಲಭ್ಯ ಒದಗಿಸಲಾಗುತ್ತದೆ.
ಘಟಕ ವೆಚ್ಚ ರೂ.1,00,000/- ಗಳಿಗೆ ಶೇ.20ರಷ್ಟು ಗರಿಷ್ಠ ರೂ.20,000/-ಗಳ ಸಹಾಯಧನವನ್ನು ಹಾಗೂ ಉಳಿಕೆ ಶೇ.80ರಷ್ಟು ಗರಿಷ್ಠ ರೂ.80,000/-ಗಳನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಸಾಲವನ್ನು ನೀಡಲಾಗುತ್ತದೆ.

ಇದನ್ನೂ ಓದಿ: Electric bill: ಈ ತಿಂಗಳ ವಿದ್ಯುತ್ ಬಿಲ್ ಹಾಗೂ ವರ್ಷದ ಬಳಕೆಯ ಬಿಲ್ ಎಷ್ಟು ತಿಳಿಯಿರಿ:

ಸೂಚನೆ

ಮುಖ್ಯವಾಗಿ ಈ ಯೋಜನೆ ಲಾಭ ಪಡೆಯುವ ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು.
ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು.
ನಿಗಮವು ಅನುಷ್ಠಾನಗೊಳಿಸುವ ಈ ಮೇಲ್ಕಂಡ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ಅಧ್ಯಕ್ಷರು/ ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್ನೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.

ಅರ್ಜಿ ಸಲ್ಲಿಸುವುದು ಎಲ್ಲಿ?


ಈ ಯೋಜನೆಯಡಿ ಲಾಭ ಪಡೆಯುವ ಅರ್ಹ ಫಲಾಪೇಕ್ಷಿಗಳು ಗ್ರಾಮಒನ್, ಬೆಂಗಳೂರುಒನ್, ಕರ್ನಾಟಕಒನ್, ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟ ಲನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು.
ಕಳೆದ ಮೂರು ವರ್ಷದಿಂದ ಸರ್ಕಾರದ ಯಾವುದೇ ನಿಗಮ ಅಥವಾ ಇಲಾಖೆಗಳಲ್ಲಿ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ ಎಂದು ನಿಗಮ ತಿಳಿಸಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಅರ್ಜಿ ಸಲ್ಲಿಸಲು ಅ.30 ಕೊನೆಯ ದಿನವಾಗಿರುತ್ತದೆ (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ).

ಮಾಹಿತಿಗಾಗಿ ನಿಗಮದ ಜಾಲತಾಣ

https://kvldcl.karnataka.gov.in ನಿಗಮದ ದೂ.08022865522, 9900012351 ಗೆ ಸಂಪರ್ಕಿಸಬಹುದು.ಹೆಚ್ಚಿನ ಮಾಹಿತಿಗಾಗಿ ನಗರದ ಕುಮಾರಸ್ವಾಮಿ ದೇವಸ್ಥಾನದ ಎದುರಿನ ಕ್ಲಬ್ ರಸ್ತೆಯ ವೀರನಗೌಡ ಕಾಲೋನಿಯ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ(ನಿ)ದ ಜಿಲ್ಲಾ ಲಿಂಗಾಯತ ಅಭಿವೃದ್ಧಿ ನಿಗಮ(ನಿ)ದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ಕಚೇರಿಯ ದೂ. 08392-267038 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಕೆ.ಭೀಮಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ನವೋದಯ ವಿದ್ಯಾಲಯದ ಪ್ರವೇಶಾತಿಗೆ ಅರ್ಜಿ ಆಹ್ವಾನ:
ಇದನ್ನೂ ಓದಿ: PM kisan: ಫಲಾನುಭವಿಗಳು 15 ನೇ ಕಂತಿಗೆ ಅರ್ಹರಾಗಲು ಈ ಕೆಲಸ ಮಾಡುವುದು ಕಡ್ಡಾಯ :

ಇತ್ತೀಚಿನ ಸುದ್ದಿಗಳು

Related Articles