ಅಂತರ ರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ 2024 ರ ಅಂಗವಾಗಿ ಮೈಸೂರು ಜಿಲ್ಲೆಯಲ್ಲಿ ಸಿರಿಧಾನ್ಯ ಪಾಕಸ್ಪರ್ಧೆಯನ್ನು ಕೃಷಿ ಇಲಾಖೆಯಿಂದ ದಿನಾಂಕ: 13-12-2023 ರಂದು ಏರ್ಪಡಿಸಲಾಗಿದೆ. ಸದರಿ ಸ್ಪರ್ಧೆಯಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು/ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳನ್ನು ಹೊರತುಪಡಿಸಿ ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿರುತ್ತದೆ.
ಭಾಗವಹಿಸುವ ಅರ್ಭರ್ಥಿಗಳ ಬೇಕಾದ ದಾಖಲೆಗಳು:
ಅಭ್ಯರ್ಥಿಗಳು ತಮ್ಮ ಭಾವ ಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯ, ಬೇಕಾಗುವ ಸಾಮಾಗ್ರಿಗಳು, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನದ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು
ದಿನಾಂಕ: 11-12-2023 ರ ಮಧ್ಯಾನ 12-00 ಗಂಟೆಯೊಳಗೆ ಇ-ಮೇಲ್ ವಿಳಾಸ jdamysuru@gmail.com ಅಥವಾ ಖುದ್ದಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಸಾರ್ವಜನಿಕ ಕಛೇರಿಗಳ ಕಟ್ಟಡ, ನ್ಯೂ ಸಯ್ಯಾಜಿರಾವ್ ರಸ್ತೆ, ಮೈಸೂರು ಈ ವಿಳಾಸಕ್ಕೆ ಸಲ್ಲಿಸಲು ತಿಳಿಸಲಾಗಿದೆ.
ಇದನ್ನೂ ಓದಿ: Interim Crop Insurance: ಈ ಜಿಲ್ಲೆಯ ರೈತರಿಗೆ 50.298 ಕೋಟಿ ರೂ ಗಳ ಮಧ್ಯಂತರ ವಿಮೆ ಮಂಜೂರು.
ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಈ ಕೆಳಗಿನ ಸೂಚನೆಗಳನ್ನು ಪಾಲಿಸುವುದು.
- ಪ್ರತಿ ಸ್ಪರ್ಧಿಗೆ ಒಂದೇ ತಿನಿಸು (ಸಸ್ಯಾಹಾರಿ ತಿನಿಸುಗಳು ಮಾತ್ರ) ಸಿಹಿ ಅಥವಾ ಖಾರ ಮಾಡಲು ಅವಕಾಶವಿರುತ್ತದೆ.
- ತಯಾರಿಸಿದ ತಿನಿಸುಗಳ ಪ್ರದರ್ಶನ (Display), ಬಳಸಿದ ಸಾಮಾಗ್ರಿಗಳು (Ingredients) ತೋರಿಕೆ (Appearance), ರುಚಿ (Taste) ಸುವಾಸನೆ (Aroma) ಪೌಷ್ಟಿಕತೆ (Nutrients) ಗಳ ಮೇಲೆ ಅಂತಿಮ ತೀರ್ಪು ಕೈಗೊಳ್ಳಲಾಗುವುದು.
- ತೀರ್ಪುದಾರರ ನಿರ್ಧಾರವೇ ಅಂತಿಮವಾಗಿರುತ್ತದೆ.
- ಜಿಲ್ಲಾಮಟ್ಟಕ್ಕೆ ಪ್ರಥಮ ಬಹುಮಾನವಾಗಿ ಖಾರ ತಿನಿಸು ಮತ್ತು ಸಿಹಿ ತಿನಿಸಿಗೆ ತಲಾ ರೂ 5,000/- ಬಹುಮಾನವಿರುತ್ತದೆ.
- ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದವರು ದಿನಾಂಕ : 23-12-2023 ರಂದು ಬೆಂಗಳೂರಿನಲ್ಲಿ ಏರ್ಪಡಿಸುವ ರಾಜ್ಯಮಟ್ಟದ ಸ್ಪರ್ದೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು.
- ಖಾದ್ಯವನ್ನು ತಯಾರಿಸಲು ಬೇಕಾಗುವ ಸಾಮಾಗ್ರಿಗಳನ್ನು ತಾವೇ ತೆಗೆದುಕೊಂಡು ಹೋಗಿ ನಿಗಧಿತ ಸ್ಥಳ, ಸಮಯದಲ್ಲಿ ಖಾದ್ಯವನ್ನು ಅಲ್ಲಿಯೇ ತಯಾರಿಸಲು ಸಿದ್ಧರಾಗಿರಬೇಕು.
ಇದನ್ನೂ ಓದಿ: Drought relief list: 2023-24 ನೇ ಸಾಲಿನ ಬರ ಪರಿಹಾರ ಅರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ:
ಇಲ್ಲಿ ಕಾಣಿಸಿರುವ ಲಿಂಕ್ ಮೇಲೆ ಓತ್ತಿ ನಿಮ್ಮ ಹೆಸರು ಪರೀಕ್ಷಿಸಿಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರು (ಉ & ಮೌ), ಜಂಟಿ ಕೃಷಿ ನಿರ್ದೇಶಕರ ಕಛೇರಿ, ಮೈಸೂರು ಇವರ ಮೊಬೈಲ್ ಸಂಖ್ಯೆ 8277933105 ನ್ನು ಸಂಪರ್ಕಿಸಬಹುದಾಗಿದೆ.
ವಿಶೇಷ ಸೂಚನೆ: ಇದೇ ರೀತಿ ಸಿರಿಧಾನ್ಯ ಪಾಕಸ್ಪರ್ಧೆಯನ್ನು ಕೃಷಿ ಇಲಾಖೆಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏರ್ಪಡಿಸಲಾಗುತ್ತದೆ ಆಸಕ್ತರು ನಿಮ್ಮ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು, ಕಚೇರಿಯನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಿರಿ.