Sunday, October 6, 2024

Paddy buying centre: ಬೆಂಬಲ ಬೆಲೆಯಲ್ಲಿ ಭತ್ತ ಮತ್ತು ರಾಗಿ ಖರೀದಿ !

ಬೆಂಬಲ ಬೆಲೆಯಲ್ಲಿ ಭತ್ತ ಮತ್ತು ರಾಗಿ ಖರೀದಿ ! ಪ್ರತಿ ಕ್ವಿ, ಬೆಲೆ ಏಷ್ಟು? ಒಬ್ಬ ರೈತರಿಂದ ಖರೀದಿಸುವ ಪ್ರಮಾಣವೇನು?

ಆತ್ಮೀಯ ರೈತ ಬಾಂದವರೇ 2023-24 ನೇ ಸಾಲಿನ ಮುಂಗಾರು ಹಂಗಾಮಿನನಲ್ಲಿ ರೈತರು ಬೆಳೆದ ಭತ್ತ ಮತ್ತು ರಾಗಿ ಬೆಳೆಗೆ ಸರ್ಕಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ APMC ಗಳ ಮೂಲಕ ಬೆಂಬಲ ಬೆಲೆಗೆ ಖರೀದಿ ಮಾಡಲು ಮುಂದಾಗಿದೆ.

2023-24 ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಭತ್ತ ಮತ್ತು ರಾಗಿ ಖರೀದಿಸಲು ದಾವಣಗೆರೆ ಜಿಲ್ಲೆಯ ರೈತರಿಂದ ನೋಂದಣಿಯನ್ನು ಆಹ್ವಾನಿಸಲಾಗಿದೆ. ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಬೆಳೆ ಖರೀದಿ ನಡೆಯಲಿದೆ.

ರೈತರು ಬೆಳೆದ ಉತ್ತಮ ಗುಣಮಟ್ಟದ ರಾಗಿ ಮತ್ತು ಭತ್ತವನ್ನು ನೇರವಾಗಿ ನೋಂದಾಯಿತ ರೈತರಿಂದ ಖರೀದಿಸಲು ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು ಖರೀದಿ ಏಜೆನ್ಸಿಯಾಗಿ ನೇಮಕ ಮಾಡಲಾಗಿರುತ್ತದೆ.

ಇದನ್ನೂ ಓದಿ: First installment drought relief: ಮೊದಲ ಕಂತಿನ ಬರ ಪರಿಹಾರ ಹಣ ಜಮಾ ನಿಮಗೂ ಬಂದಿರುವುದು ಚೆಕ್ ಮಾಡಿ!!!

ಆದ್ದರಿಂದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ APMC ಗಳಲ್ಲಿ ಆಸಕ್ತ ರೈತರು ತಾವು ಬೆಳೆದ ಭತ್ತ ಮತ್ತು ರಾಗಿಯ ಗುಣಮಟ್ಟವನ್ನು ಆಯಾ ತಾಲ್ಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಪರೀಶಿಲಿಸಿಕೊಂಡು ಈ ಕೇಂದ್ರದಲ್ಲಿ ತಾವು ಬೆಳೆದ ಕೊಂಡಯ್ಯಬೇಕಾಗುತ್ತದೆ.

APMC ಕೇಂದ್ರಕ್ಕೆ ಭತ್ತ ಮತ್ತು ರಾಗಿ ಮಾರಾಟ ಮಾಡುವ ಮುಂಚೆ ಗಮನಿಸಬೇಕಾದ ಅಂಶಗಳು?


ಭತ್ತ ಮತ್ತು ರಾಗಿ APMC ಬೀಡುವ ಮುಂಚೆ ಕಡ್ಡಾಯವಾಗಿ ಪ್ರತಿಯೊಬ್ಬ ರೈತರು ಮೊದಲು ಕೃಷಿ ಇಲಾಖೆ ನೀಡಿರುವ Fruits FID ಫೂಟ್ಸ್ ಗುರುತಿನ ಸಂಖ್ಯೆಯೊಂದಿಗೆ ನೋಂದಣಿ ಮಾಡಿಸಬೇಕಾಗಿರುತ್ತದೆ.


ಫೂಟ್ಸ್ ದತ್ತಾಂಶದಲ್ಲಿ ರೈತರು ನೀಡಿರುವ ಬ್ಯಾಂಕ್ ಖಾತೆ ಸಂಖ್ಯೆಗೆ ಮುಖಾಂತರ ನೇರವಾಗಿ ರೈತರ ಖಾತೆಗೆ ಹಣ ಸಂದಾಯ ಮಾಡಲಾಗುತ್ತದೆ. ಆದ್ದರಿಂದ ರೈತರು ಫೂಟ್ಸ್ ದತ್ತಾಂಶದಲ್ಲಿ ದಾಖಲಿಸಿರುವ ತಮ್ಮ ಬ್ಯಾಂಕ್ ಖಾತೆಯನ್ನು ಆಧಾ‌ರ್ ಸಂಖ್ಯೆಯೊಂದಿಗೆ ಜೋಡಣೆ ಆಗಿರುವುದನ್ನು ಮತ್ತು ಎನ್‌ಪಿಸಿಐ NPCI ಮ್ಯಾಪಿಂಗ್ ಆಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಹಾಗೂ ಖರೀದಿ ಕೇಂದ್ರಕ್ಕೆ ಆಧಾರ್ ಕಾರ್ಡ್ ಮತ್ತು ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆಯನ್ನು ನೀಡಬೇಕಾಗಿರುತ್ತದೆ.

what is the support Price ಬೆಂಬಲ ಬೆಲೆ ಎಷ್ಟು?;
ಸರ್ಕಾರ ನಿಗದಿ ಮಾಡಿರುವಂತೆ ರಾಗಿ ಪ್ರತಿ ಕ್ವಿಂಟಲ್‌ಗೆ ರೂ. 3,846 ಮತ್ತು ಭತ್ತ ಪ್ರತಿ ಕ್ವಿಂಟಲ್‌ಗೆ ಸಾಮಾನ್ಯ ರೂ. 2,183, ಗ್ರೇಡ್-ಎಗೆ ರೂ. 2,203 ಗಳ ಕನಿಷ್ಟ ಬೆಂಬಲ ಬೆಲೆ ನಿಗದಿಪಡಿಸಲಾಗಿದೆ.

ಬೀಜಗಳ ಗುಣಮಟ್ಟ ಪರೀಶೀಲನೆಗೆ ಪರೀಕ್ಷಕರು ನೇಮಕ? ಪ್ರತಿ ರೈತರಿಂದ ಖರೀದಿ ಪ್ರಮಾಣ ಎಷ್ಟು?

ಇದನ್ನೂ ಓದಿ: Drought relief Proposal: ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ: ರಾಜ್ಯ ಸರ್ಕಾರ

ಭತ್ತ ಮತ್ತು ರಾಗಿ ತಂದು ಖರೀದಿ ಕೇಂದ್ರದಲ್ಲಿ ರಾಶಿ ಹಾಕಬೇಕು. ರಾಗಿ ಗುಣಮಟ್ಟ ಪರಿಶೀಲಿಸಲು ಕೃಷಿ ಇಲಾಖೆಯಿಂದ ನೇಮಿಸಲ್ಪಟ್ಟ ಗುಣಮಟ್ಟ ಪರೀಕ್ಷಕರು ದಾಸ್ತಾನಿನ ಗುಣಮಟ್ಟವನ್ನು ಪರಿಶೀಲಿಸಿ ಉತ್ತಮ ಗುಣಮಟ್ಟವೆಂದು ದೃಢಪಟ್ಟರೆ ಮಾತ್ರ ಖರೀದಿಸಲಾಗುವುದು. ಗುಣಮಟ್ಟ ಸರಿಯಿಲ್ಲವೆಂದು ದೃಢಪಡಿಸಿದ್ದಲ್ಲಿ ರೈತರು ತಮ್ಮ ಸ್ವಂತ ಖರ್ಚಿನಿಂದ ಹಿಂದಕ್ಕೆ ತೆಗೆದುಕೊಂಡು ಹೋಗಬೇಕು.

ರೈತರಿಂದ ಪ್ರತಿ ಎಕರೆಗೆ ರಾಗಿ 10ಕ್ವಿಂಟಾಲ್‌ನಂತೆ ರೈತರು ಹೊಂದಿರುವ ಜಮೀನಿಗೆ ಅನುಗುಣವಾಗಿ ಖರೀದಿಸಲಾಗುವುದು.

ಹಾಗೂ ರೈತರಿಂದ ಭತ್ತವನ್ನು ಪ್ರತಿ ಎಕರೆಗೆ ಭತ್ತ 25 ಕ್ವಿಂಟಾಲ್‌ನಂತೆ ಗರಿಷ್ಠ 40 ಕ್ವಿಂಟಾಲ್ ಖರೀದಿಸಲಾಗುವುದು.

ರೈತರು ತರುವ ರಾಗಿ ಮತ್ತು ಭತ್ತದ ಎಲ್ಲಾ ಚೀಲಗಳನ್ನು ಖರೀದಿ ಕೇಂದ್ರಗಳಲ್ಲಿ ಒಂದಾಗಿ ಪರಿಶೀಲಿಸುವುದರಿಂದಾಗಿ ರೈತರು ತಾವು ತರುವ ಪದಾರ್ಥಗಳು ಒಂದೇ ತರಹದ್ದಾಗಿರಬೇಕು.

ಒಂದು ವೇಳೆ ಗುಣಮಟ್ಟದಲ್ಲಿ ಯಾವುದೇ ನ್ಯೂನತೆ ಕಂಡುಬಂದಲ್ಲಿ ಸಂಪೂರ್ಣ ಪ್ರಮಾಣವನ್ನು ತಿರಸ್ಕರಿಸಲಾಗುತ್ತದೆ.

ಖರೀದಿಗೆ ಸಂಬಂಧಿಸಿದ ಯಾವುದೇ ದೂರುಗಳನ್ನು ತಹಶೀಲ್ದಾರ್/ ಉಪವಿಭಾಗಾಧಿಕಾರಿಗಳು/ ಉಪನಿರ್ದೇಶಕರು (ಆಹಾರ), ಕೃಷಿ ಮಾರುಕಟ್ಟೆ ಅಧಿಕಾರಿಗಳ ಗಮನಕ್ಕೆ ತರಬಹುದಾಗಿರುತ್ತದೆ.

ರೈತರ ವಿಶೇಷ ಗಮನಕ್ಕೆ:

ಈ ಒಂದು ಖರೀದಿ ಕೇಂದ್ರವನ್ನು ಪ್ರತಿ ಜಿಲ್ಲೆಯ ತಾಲೂಕು ಮಟ್ಟದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಗುರುತಿಸಿರುವ ಕೇಂದ್ರಗಳಲ್ಲಿ ಖರೀದಿ ಮಾಡಲು ಅವಕಾಶ ಮಾಡಿಕೊಡಲಾಗಿರುತ್ತದೆ. ಈ ಒಂದು ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬಹುದಾಗಿರುತ್ತದೆ.

ಇದನ್ನೂ ಓದಿ: Krishi Bhagya Scheme 2023-24: 100 ಕೋಟಿ ವೆಚ್ಚ ದಲ್ಲಿ “ಕೃಷಿ ಭಾಗ್ಯ” ಯೋಜನೆ ಮರುಜಾರಿ:

ಇತ್ತೀಚಿನ ಸುದ್ದಿಗಳು

Related Articles