ಆತ್ಮೀಯ ವಿದ್ಯಾರ್ಥಿ ಮಿತ್ರರೇ ಪ್ರತಿ ವರ್ಷದಂತೆ ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ / ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿಗೆ ಪ್ರವೇಶಾತಿಗಾಗಿ ಅಲ್ಪಸಂಖ್ಯಾತ ಸಮುದಾಯ ಹಾಗೂ ಹಿಂದುಳಿದ ವರ್ಗದ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿರುತ್ತದೆ. ಹಾಗಿದ್ದರೆ ಈ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ? ಬೇಕಾದ ದಾಖಲೆಗಳೇನು? ಯಾವ ರೀತಿ ಆಯ್ಕೆ ಪ್ರಕ್ರಿಯೆ ಇರುತ್ತೆ? ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ವಿವರಿಸಲಾಗಿದೆ.
ವಿದ್ಯಾರ್ಥಿಗಳು ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಿಂದ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು/ಉತ್ತೀರ್ಣರಾಗಿರಬೇಕು. ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಅಂಕಪಟ್ಟಿಯನ್ನು ಹೊಂದಿರಬೇಕು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು, 11 ರಿಂದ 13 ವರ್ಷದ ವಯೋಮಾನದವರಾಗಿರಬೇಕು.
Required documents for application-ಅರ್ಜಿ ಹಾಕಲು ಬೇಕಾಗುವ ಅಗತ್ಯ ದಾಖಲಾತಿಗಳು:
1) ವಿದ್ಯಾರ್ಥಿಯು ಈಗಾಗಲೇ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ SATS ಸಂಖ್ಯೆ
2) ಇತ್ತೀಚಿನ ಭಾವಚಿತ್ರ
3) ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳನ್ನು ಸಲ್ಲಿಸಬೇಕು.
4) ಆಧಾರ್ ಕಾರ್ಡ ವಿವರ.
Website Link: ಇಲ್ಲಿದೆ ಅರ್ಜಿ ಸಲ್ಲಿಸಲು ವೆಬೈಟ್ ಲಿಂಕ್:
ಅರ್ಹ ವಿದ್ಯಾರ್ಥಿಗಳು ಸೇವಾಸಿಂದು ಪೋರ್ಟಲ್ https://sevasindhuservices.karnataka.gov .in ರಲ್ಲಿ ಮಾರ್ಚ್ 15 ರೊಳಗಾಗಿ ಸಲ್ಲಿಸುವುದು. ಅಥವಾ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು, ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳು ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿಯೂ ಕೂಡ ಉಚಿತವಾಗಿ ಸಲ್ಲಿಸಬಹುದಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಆಸಕ್ತರು ಇಲ್ಲಿ ಕಾಣಿಸಿರುವ ವಿಳಾಸಕ್ಕೆ ಸಂಪರ್ಕಿಸಬಹುದು, ಮೇಲಿನಹನಸವಾಡಿ ಡಾ|| ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಂಶುಪಾಲರು -9483623537, ಭದ್ರಾವತಿಯ ದೊಡ್ಡೆರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು -9591237905, ಶಿರಾಳಕೊಪ್ಪ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ
ಪ್ರಾಂಶುಪಾಲರು-8310350361, ಶಿಕಾರಿಪುರ ಉಡುಗಣಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು -9036866642, ಅಲ್ಪಸಂಖ್ಯಾತರ ಜಿಲ್ಲಾ ಮಾಹಿತಿ ಕೇಂದ್ರ ಶಿವಮೊಗ್ಗ-7676888388, ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರ, ಭದ್ರಾವತಿ-9538853680, ತೀರ್ಥಹಳ್ಳಿ -8861982835, ಸೊರಬ-9513815513, ಶಿಕಾರಿಪುರ -7829136724, ಹೊಸನಗರ-9008447029, ಸಾಗರ-7338222907 ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಿ ಇನ್ನೂ ಹೆಚ್ಚಿನ ಮಾಹಿತಿಯನ್ನು ಪಡೆದು ಈ ಒಂದು ವಸತಿ ಶಾಲೆಗಳಿಗೆ ಅರ್ಜಿ ಸಲ್ಲಿಸಬಹುದು.
ಈ ಶಾಲೆಗಳಲ್ಲಿ ಯಾವೆಲ್ಲ ಸೌಲಭ್ಯ ಸಿಗುತ್ತದೆ?
ಈ ವಸತಿ ಶಾಲೆಗಳಲ್ಲಿ ಉಚಿತ ಊಟ, ವಸತಿ, ಪಠ್ಯಪುಸ್ತಕ, ಲೇಖನ ಸಾಮಗ್ರಿ, ಸಮವಸ್ತ್ರಗಳೊಂದಿಗೆ ಇನ್ನಿತರೇ ಮೂಲಭೂತ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುತ್ತದೆ.
Selection Method: ಆಯ್ಕೆ ವಿಧಾನದ ಮಾಹಿತಿ:
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ ನಂತರ ಹೆಚ್ಚು ಅಂಕ ಪಡೆದ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ದಪಡಿಸಿ ಬಳಿಕ ಆನ್‌ಲೈನ್ ಕೌನ್ಸಿಲಿಂಗ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಿ ವಸತಿ ಶಾಲೆಯಲ್ಲಿ 6 ನೇ ತರಗತಿ ವ್ಯಾಸಂಗಕ್ಕೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.