Friday, September 20, 2024

Scholarship status- 4067 ವಿದ್ಯಾರ್ಥಿಗಳಿಗೆ ರೂ.5.53 ಕೋಟಿ ವಿದ್ಯಾರ್ಥಿವೇತನ ಬಿಡುಗಡೆ!

ಬ್ರಾಹ್ಮಣ ಹಾಗೂ ಆರ್ಯ ವೈಶ್ಯ ಸಮಾಜದ 4067 ವಿದ್ಯಾರ್ಥಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಫೆಬ್ರವರಿ 27, ಮಂಗಳವಾರ 5.53 ಕೋಟಿ ರೂ. ವಿದ್ಯಾರ್ಥಿ ವೇತನವನ್ನು ನೇರ ನಗದು ವರ್ಗಾವಣೆ ಮೂಲಕ ವಿದ್ಯಾರ್ಥಿಗಳ ಖಾತೆಗೆ ನೇರ ವರ್ಗಾವಣೆಗೊಳಿಸಿದರು.

ಹಣ ವರ್ಗಾವಣೆ ನಂತರ ವಿದ್ಯಾರ್ಥಿಗಳಿಗೆ ಶುಭ ಕೋರಿದ ಸಚಿವರು, “ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಬ್ರಾಹ್ಮಣ ಮತ್ತು ಆರ್ಯ ವೈಶ್ಯ ಅಭಿವೃದ್ಧಿ ನಿಗಮದಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ.

ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ ಹಾಗೂ ವೃತ್ತಿಪರ ಕೋರ್ಸ್ ಅಧ್ಯಯನ ನಡೆಸುತ್ತಿರುವ ಎರಡೂ ಸಮಾಜದ 4 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಈಗಾಗಲೇ ನೇರ ನಗದು ವರ್ಗಾವಣೆ ಮೂಲಕ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಂಡು, ಸಮಾಜಕ್ಕೆ ಬೆಳಕಾಗಬೇಕು ಎಂದು ಅವರು ಹಾರೈಸಿದರು.

ಇದನ್ನೂ ಓದಿ: Horticulture training: ಮಾಸಿಕ ರೂ, 1750/- ಶಿಷ್ಯವೇತನದೊಂದಿಗೆ ರೈತರ ಮಕ್ಕಳಿಗೆ ತರಬೇತಿ

Student scholarship- ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವಿದ್ಯಾರ್ಥಿ ವೇತನದ ವಿವರ:

2023-24ನೇ ಸಾಲಿನಲ್ಲಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ 2710 ವಿದ್ಯಾರ್ಥಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಲಾಗಿದೆ.

ಪದವಿಪೂರ್ವ (ಪಿಯುಸಿ) ವ್ಯಾಸಂಗ ಮಾಡುತ್ತಿರುವ 758 ಬ್ರಾಹ್ಮಣ ವಿದ್ಯಾರ್ಥಿಗಳಿಗೆ 15,000 ರೂ. ಎಂಬಂತೆ 113.70 ಕೋಟಿ ರೂ.ಗಳನ್ನು ವರ್ಗಾವಣೆ ಮಾಡಲಾಗಿದೆ. ವೃತ್ತಿಪರ ಕೋರ್ಸ್ ವ್ಯಾಸಂಗದ 1952 ವಿದ್ಯಾರ್ಥಿಗಳಿಗೆ ಅವರ ಒಟ್ಟು ಶುಲ್ಕದ 2/3 ಭಾಗ ವಿದ್ಯಾರ್ಥಿ ವೇತನವಾಗಿ 2.65 ಕೋಟಿ ರೂ ಎಂಬಂತೆ. ಒಟ್ಟು 3.78 ಕೋಟಿ ರೂ. ನಿಗಮದ ಮೂಲಕ ಪಾವತಿಸಲಾಗಿದೆ.

ಇದನ್ನೂ ಓದಿ: Aadhar card Update : ಆಧಾರ್‍ ನವೀಕರಣ ಮಾಡಲು Website link ಬಿಡುಗಡೆ

ಆರ್ಯ ವೈಶ್ಯ ಅಭಿವೃದ್ಧಿ ನಗಮ ವಿದ್ಯಾರ್ಥಿ ವೇತನದ ವಿವರ:

2023-24ನೇ ಸಾಲಿನಲ್ಲಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 1357 ವಿದ್ಯಾರ್ಥಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಲಾಗಿದೆ.

ವೃತ್ತಿಪರ ಪದವಿ ಮತ್ತು ಸ್ನಾತ್ತಕೋತ್ತರ ಪದವಿಗಳಿಗೆ ಗರಿಷ್ಠ 1.20 ಲಕ್ಷ ರೂ. ವರೆಗೆ ಹಾಗೂ ಪದವಿ-ಪದವಿಪೂರ್ವ ವಿದ್ಯಾರ್ಥಿಗಳಿಗೆ ಗರಿಷ್ಠ 30,000 ರೂ. ಗಳವರೆಗೆ ವಿದ್ಯಾರ್ಥಿ ವೇತನ ನೀಡಲಾಗಿದೆ. ಒಟ್ಟಾರೆ ಈ ಸಾಲಿನಲ್ಲಿ 1357 ವಿದ್ಯಾರ್ಥಿಗಳಿಗೆ 1.75 ಕೋಟಿ ರೂ. ಹಣವನ್ನು ನೇರ ನಗದು ವರ್ಗಾವಣೆ ಮೂಲಕ ವಿದ್ಯಾರ್ಥಿಗಳ ಖಾತೆಗೆ ಜಮಾಗೊಳಿಸಲಾಗಿದೆ.

ಇದನ್ನೂ ಓದಿ: PM Kisan ಹಣ ಜಮಾ ಆಗಲು NPCI Active ಕಡ್ಡಾಯ ಚೆಕ್ ಮಾಡಿ ಈ ಲಿಂಕ್ ಮೇಲೆ ಓತ್ತಿ ಪರಿಕ್ಷೀಸಿಕೊಳ್ಳಿ.

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕಿಯಾದ ಶ್ರೀಮತಿ ಪೂರ್ಣಿಮಾ ಪಿ.ವಿ ಹಾಗೂ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾದ ಶ್ರೀಮತಿ ದೀಪಶ್ರೀ ಕೆ ರವರು ಉಪಸ್ಥಿತರಿದ್ದರು.

Scholarship status: ವಿದ್ಯಾರ್ಥಿಗಳು ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ನಿಮ್ಮ ಅರ್ಜಿ ಸ್ಥಿತಿ ತಿಳಿದುಕೊಳ್ಳಬಹುದು:

ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ಬಳಿಕ ನಿಮ್ಮ ಅರ್ಜಿ ಯಾವ ಹಂತದಲ್ಲಿದೆ ಮತ್ತು ನಿಮಗೆ ವಿದ್ಯಾರ್ಥಿವೇತನ ಜಮಾ ಅಗಿದಿಯಾ? ಇಲ್ಲವಾ? ಎಂದು ನಿಮ್ಮ ಮೊಬೈಲ್ ನಲ್ಲೇ SSP ಪೋರ್ಟಲ್ ಭೇಟಿ ಅಥವಾ DBT karnataka ಮೊಬೈಲ್ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೇ ಸ್ಟೋರ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಚೆಕ್ ಮಾಡಿಕೊಳ್ಳಬಹುದಾಗಿದೆ ಈ ಎರಡರ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.

ಇದನ್ನೂ ಓದಿ: PM kisan Scheme 16 Beneficiaries list: ಪಿ ಎಂ ಕಿಸಾನ್ 16 ನೇ ಕಂತಿನ ಅರ್ಹ ಫಲಾನುಭವಿಗಳ ಪಟ್ಟಿ:

SSP portal- click here
DBT karnataka app download link- Download Now

ಇತ್ತೀಚಿನ ಸುದ್ದಿಗಳು

Related Articles