Friday, September 20, 2024

Scholarship application- ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ!

2023-24ನೇ ಸಾಲಿನ ಪಿಯುಸಿ ಯಿಂದ ಪಿಹೆಚ್‍ಡಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಹಾಗೂ ವೃತಿಪರ ಮತ್ತು ತಾಂತ್ರಿಕ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆರಿಟ್ ಕಮ್ ಮೀನ್ಸ್ ಶುಲ್ಕ ಮರುಪಾವತಿ ವಿದ್ಯಾರ್ಥಿವೇತನಕ್ಕಾಗಿ(Scholarship application) ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.

ವಿದ್ಯಾರ್ಥಿಗಳು ಎಲ್ಲಿ ಅರ್ಜಿ ಸಲ್ಲಿಸಬೇಕು? ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Milk Incentive-2024: ಹಾಲಿನ ಪ್ರೋತ್ಸಾಹ ಧನ ಅಕೌಂಟ್ ಗೆ ಜಮಾ ಅಗಿರುವುದನ್ನು ಹೇಗೆ ಚೆಕ್ ಮಾಡುವುದು?

Last date for scholarship application- ಇಲಾಖಾವಾರು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿವರ:

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/03/2024

ವೈದ್ಯಕೀಯ ಶಿಕ್ಷಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/05/2024

ಆಯುಷ್ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/05/2024

ಇದನ್ನೂ ಓದಿ: Yashaswini card – ಯಶಸ್ವಿನಿ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಇನ್ನೂ 10 ದಿನ ಮಾತ್ರ ಅವಕಾಶ!

ಎಲ್ಲಿ ಅರ್ಜಿ ಸಲ್ಲಿಸಬೇಕು?

ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಎಸ್‍ಎಸ್‍ಪಿ ಪೋರ್ಟಲ್‍ನಲ್ಲಿ ಅಗತ್ಯ ವಿವರ ಮತ್ತು ದಾಖಲಾತಿಗಳನ್ನು ಸಲ್ಲಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಲಿಂಕ್: Apply Now

Required Documents for application- ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:

1) ವಿದ್ಯಾರ್ಥಿಗಳ ಆಧಾರ್ ಸಂಖ್ಯೆ ಮತ್ತು ಆಧಾರ್ ನಲ್ಲಿ ಇರುವ ಹಾಗೆ ಹೆಸರು

2) ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ

3) ವಿದ್ಯಾರ್ಥಿಗಳ ಇ-ಮೇಲ್ ಐ.ಡಿ.

ಇದನ್ನೂ ಓದಿ: Crop insurence Questions and Answers: ಬೆಳೆ ವಿಮೆ ಕುರಿತು ರೈತರಿಗೆ ಅನುಮಾನಗಳಿಗೆ ತೆರೆ ನೀಡಿದ ಇಲಾಖೆ: PMFBY: ರೈತರ ಹಲವು ಪ್ರಶ್ನೆಗಳಿಗೆ ಉತ್ತರಗಳು ಈ ಲೇಖನದಲ್ಲಿ

4) ವಿದ್ಯಾರ್ಥಿಗಳ ಎಸ್.ಎಸ್.ಎಲ್.ಸಿ ನೋಂದಣಿ ಸಂಖ್ಯೆ

5) ವಿದ್ಯಾರ್ಥಿಯ ಹೆಸರಿನಲ್ಲಿ ಇರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಆ‌ರ್.ಡಿ ಸಂಖ್ಯೆ

6) ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯು.ಡಿ.ಐ.ಡಿ ಗುರುತಿನ ಸಂಖ್ಯೆ

7) ವಿದ್ಯಾರ್ಥಿಯು ವಾಸವಿರುವ ಜಿಲ್ಲೆ, ತಾಲ್ಲೂಕು, ವಿಧಾನಸಭಾ ಕ್ಷೇತ್ರದ ಹೆಸರು ಮತ್ತು ಮನೆಯ ವಿಳಾಸ

8) ವಿದ್ಯಾರ್ಥಿಯ ಕಾಲೇಜು ದಾಖಲಾತಿ/ನೋಂದಣಿ ಸಂಖ್ಯೆ

9) ಸಂಬಂದಪಟ್ಟ ಮಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ )

10) ಹಾಸ್ಟೆಲ್ ವಿವರಗಳು (ಅನ್ವಯವಾದಲ್ಲಿ)

ಇದನ್ನೂ ಓದಿ: ಬರ ಪರಿಹಾರ ಜಮಾ ಆಗಲು NPCI Active ಕಡ್ಡಾಯ ಚೆಕ್ ಮಾಡಿ ಈ ಲಿಂಕ್ ಮೇಲೆ ಓತ್ತಿ ಪರಿಕ್ಷೀಸಿಕೊಳ್ಳಿ.

Helpline number- ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿಗಳು:

ಸಹಾಯವಾಣಿ(STATE SCHOLARSHIP PORTAL HELPLINE NUMBER.): 1902

ಸಮಾಜ ಕಲ್ಯಾಣ ಇಲಾಖೆ- 9482300400/08022634300

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ- 9482300400/08022634300

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ- 8277799990

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ- 8050770004/8050770005

ಕೃಷಿ ಇಲಾಖೆ- 1800-425-3553

ಕುಟುಂಬ- 080-22371030

ಇದನ್ನೂ ಓದಿ: Crop insurance 2024: ಬಾಕಿ 800 ಕೋಟಿ ಬೆಳೆವಿಮೆ ಪರಿಹಾರ ಮಾರ್ಚ ಅಂತ್ಯಕ್ಕೆ ಬಿಡುಗಡೆ:

ಇತ್ತೀಚಿನ ಸುದ್ದಿಗಳು

Related Articles