2024 ರ ಮುಂಗಾರು ಹಂಗಾಮಿನ ಬೆಳೆ ವಿಮೆ ಮಾಡಿಸಲು ರೈತರಿಗೆ ಅವಕಾಶ ಕಲ್ಪಿಸಲಾಗಿದ್ದು, ರೈತರು ಬೆಳೆ ವಿಮಾ ಪೋರ್ಟಲ್ ಭೇಟಿ ಮಾಡಿ ನಿಮ್ಮ ಹಳ್ಳಿಯ ಹೆಸರನ್ನು ಆಯ್ಕೆ ಮಾಡಿಕೊಂಡು ಈ ವರುಷದ ಮುಂಗಾರು ಹಂಗಾಮಿನ ಯಾವೆಲ್ಲ ಬೆಳೆಗಳಿಗೆ ವಿಮೆ ಮಾಡಿಸಬಹುದು (CROP INSURANCE) ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ.
ಫಸಲ್ ಬೀಮಾ ಯೋಜನೆಯಡಿ ಬೆಳೆ ವಿಮೆ (CROP INSURANCE) ಮಾಡಿಕೊಳ್ಳಲು ಅವಕಾಶವಿದ್ದು ಯಾವ ಬೆಳೆಗೆ ಎಷ್ಟು ಮೊತ್ತದ ಪ್ರೀಮಿಯಂ ಪಾವತಿ ಮಾಡಬೇಕು? ಒಂದು ವೇಳೆ ನಿಮ್ಮ ಹಳ್ಳಿ ವ್ಯಾಪ್ತಿಯ ವಿಮಾ ಘಟಕದಲ್ಲಿ ಬೆಳೆ ನಷ್ಟ ಆದಾಗ ಎಷ್ಟು ಪರಿಹಾರ ಬರುತ್ತದೆ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ.
ರಾಜ್ಯ ಸರಕಾರದ ಸಂರಕ್ಷಣೆ(Samrakshane) ಪೋರ್ಟಲ್ ಭೇಟಿ ಮಾಡಿ ರೈತರು ತಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ, ಹಳ್ಳಿ/ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು ಈ ವರ್ಷದ ಮುಂಗಾರು ಹಂಗಾಮಿಗೆ ಯಾವೆಲ್ಲ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂದು ನಿಮ್ಮ ಮೊಬೈಲ್ ನಲ್ಲಿ ತಿಳಿದುಕೊಳ್ಳಬಹುದು.
Samrakshane.karnataka.gov.in ವೆಬ್ಸೈಟ್ ಭೇಟಿ ಮಾಡಿ ಈ ಕೆಳಗಿನ ವಿಧಾನವನ್ನು ಅನುಸರಿಸಿ ಮುಂಗಾರು ಹಂಗಾಮಿಗೆ ಯಾವೆಲ್ಲ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂದು ತಿಳಿದುಕೊಳ್ಳಬಹುದು. ಬೆಳೆಗೆ ಎಷ್ಟು ವಿಮೆ ಪ್ರಿಮಿಯಂ ಪಾವತಿ ಮಾಡಬೇಕು ಮತ್ತು ವಿಮಾ ಮೊತ್ತ ಎಷ್ಟು? ಬೆಳೆ ವಿಮೆ ಮಾಡಿಸಲು ಕೊನೆಯ ದಿನಾಂಕ ಇತ್ಯಾದಿ ಸಂಪೂರ್ಣ ವಿವರ ಪಡೆಯಬಹುದು.
Step-1:ರೈತರು ತಮ್ಮ ಮೊಬೈಲ್ ನಲ್ಲಿ ಪ್ರಥಮದಲ್ಲಿ ಈ KHARIF CROP INSURANCE ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಬೆಳೆ ವಿಮೆಯ ಸಂರಕ್ಷಣೆ ಜಾಲತಾಣವನ್ನು ಪ್ರವೇಶ ಮಾಡಬೇಕು. ಬಳಿಕ ಮುಖಪುಟದಲ್ಲಿ ಮೊದಲಿಗೆ ನೀವು “ವರ್ಷ/year:2024-25 “ ಹಾಗೂ ಋತು: ಮುಂಗಾರು/kharif” ಎಂದು ಸೆಲೆಕ್ಟ್ ಮಾಡಿಕೊಂಡು “ಮುಂದೆ/go” ಎಂದು ಕೆಳಗೆ ಕಾಣುವ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಮುಂದುವರೆಯಬೇಕು.
ಸೂಚನೆ:ಮುಖಪುಟದಲ್ಲಿ ಮೇಲೆ ಕಾಣುವ ಕನ್ನಡ/English ಭಾಷೆಯನ್ನು ಆಯ್ಕೆ ಮಾಡಿಕೊಳ್ಳಬಹುದು.
Step-2: ಬಳಿಕ ಈ ಪೇಜಿನ ಕೆಳಗೆ “Farmers’ಕಾಲಂ ನಲ್ಲಿ ಕಾಣುವ “crop you can insure/ವಿಮೆ ಮಾಡಬಹುದಾದ ಬೆಳೆಗಳ” ಬಟನ್ ಮೇಲೆ ಕ್ಲಿಕ್ ಮಾಡಬೇಕು.
Step-3:ಈ ಪೇಜ್ ನಲ್ಲಿ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ, ಹಳ್ಳಿ/ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು “Display” ಬಟನ್ ಮೇಲೆ ಕ್ಲಿಕ್ ಮಾಡಿದರೆ ನೀವು ಯಾವೆಲ್ಲ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಬಹುದು? ಎನ್ನುವ ವಿವರ ಗೋಚರಿಸುತ್ತದೆ.
ಇದನ್ನೂ ಓದಿ: ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ 10 ಸಾವಿರ ರೂ. ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.
ಬೆಳೆ ವಿಮೆ ಮಾಡಲು ಬಿಡುಗಡೆ ಮಾಡಿದ ಬೆಳೆಗಳ ವಿಮೆ ಮೊತ್ತದ ವಿವರ:
ಭತ್ತ-415/-
ಮುಸುಕಿನ ಜೋಳ-522/-
ಜೋಳ-458/-
ತೊಗರಿ-389/-
ಹತ್ತಿ-1492/-
ನೆಲಗಡಲೆ-532/-
ಸೂರ್ಯಕಾಂತಿ-395/-
ಬೆಳೆ ವಿಮೆ ಹೆಚ್ಚಿನ ಮಾಹಿತಿಗೆ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಭೇಟಿ ಮಾಡಿ ಅಥವಾ ನಿಮ್ಮ ಹತ್ತಿರದ ಕೃಷಿ ಪತ್ತಿನ ಸಹಕಾರಿ ಸಂಘ, ಕೃಷಿ ಸೊಸೈಟಿ ಸಂಘಗಳಿಗೆ ಭೇಟಿ ಮಾಡಿ ಮಾಹಿತಿ ಪಡೆದು ಕೊಳ್ಳಬಹುದು.
ಬೆಳೆ ವಿಮೆ ಮಾಡಿಸಲು ನಿಮ್ಮ ಹತ್ತಿರದ ಕೃಷಿ ಸಹಕಾರಿ ಬ್ಯಾಂಕ್ ಅಥವಾ ಡಿ.ಸಿ.ಸಿ ಬ್ಯಾಂಕ್ ಗಳಿಗೆ ಭೇಟಿ ಮಾಡಿ.