Thursday, November 21, 2024

CROP INSURANCE-ಬೆಳೆ ವಿಮೆ ಮಾಡಿಸಿದ ಮೇಲೆ ಈ ಕೆಲಸ ಮಾಡಿ ಇಲ್ಲವಾದಲ್ಲಿ ಬೆಳೆ ವಿಮೆ (CROP INSURANCE) ಪರಿಹಾರ ಸಿಗುವುದಿಲ್ಲ!

ಹೌದು ರೈತರೇ, ನೀವೂ ಬೆಳೆ ವಿಮೆ ಮಾಡಿದರೆ ಸಾಲದು ನಿಮ್ಮ ಜಮೀನಿನ ಬೆಳೆಗಳು ಪಹಣಿ/RTC ಗೆ ದಾಖಲಾದರೇ ಮಾತ್ರ ಸರಕಾರದ ಬೆಳೆ ಹಾನಿ ಪರಿಹಾರಗಳು ಸಿಗುತ್ತವೆ. ಹಾಗಾಗಿ ಎಲ್ಲಾ ರೈತರು ತಮ್ಮ ತಮ್ಮ ತೋಟ/ಹೊಲ/ಗದ್ದೆಗಳ ಬೆಳೆ ಸಮೀಕ್ಷೆ (CROP SURVEY)  ಮಾಡಿಕೊಳ್ಳಿ. ಇಲ್ಲವಾದಲ್ಲಿ ನಿಮಗೆ ಯಾವುದೇ ಬೆಳೆ ವಿಮೆಯ ಪ್ರಯೋಜನ ಸಿಗುವುದಿಲ್ಲ.

ಕರ್ನಾಟಕ ಸರಕಾರವು ನನ್ನ ಬೆಳೆ ನನ್ನ ಹಕ್ಕು ಎಂಬ ವಾಕ್ಯದೊಂದಿಗೆ ರೈತರ ಬೆಳೆ ಸಮೀಕ್ಷೆ ತಂತ್ರಾಂಶವನ್ನು ಬಿಡುಗಡೆ ಮಾಡಲಾಗಿದೆ. ಈ ತಂತ್ರಾಂಶವನ್ನು ಬಳಸಿ ಹೇಗೆ ನಿಮ್ಮ ಜಮೀನಿನಲ್ಲಿರುವ ಬೆಳೆಗಳನ್ನು ದಾಖಲಿಸಬೇಕು ಎಂದು ಈ ಲೇಖನದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಬೆಳೆ ವಿಮೆ ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಸಲ್ಲಿಸಬೇಕಾದ ದಾಖಲೆಗಳೇನು?

Kharif crop survey-2024: ಮುಂಗಾರು ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡುವ ವಿಧಾನ:

ರೈತರು ಅಥವಾ ತಮ್ಮ ಮನೆಯಲ್ಲಿರುವ ಯಾರದಾದರು ಒಬ್ಬರ ಸ್ಕ್ರೀನ್ ಟಚ್ ಮೊಬೈಲ್ ನಲ್ಲಿ ಮೊದಲಿಗೆ ಈ Kharif crop survey app link ಲಿಂಕ್ ಮೇಲೆ ಕ್ಲಿಕ್ ಮಾಡಿ ಗೂಗಲ್ ಪ್ಲೇ-ಸ್ಟೋರ್ ಭೇಟಿ ಮಾಡಿ ಇಲ್ಲಿ “ಹಿಂಗಾರು ರೈತರ ಬೆಳೆ ಸಮೀಕ್ಷೆ 2024-25” ಎನ್ನುವ ಹೆಸರಿನ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ಇಲ್ಲಿದೇ ಲಿಂಕ್ click here

https://play.google.com/store/apps/details?id=com.csk.farmer23_24.cropsurvey

Kharif crop survey app: ಮೊಬೈಲ್ ನಲ್ಲಿ ಬೆಳೆ ಸಮೀಕ್ಷೆ ಮಾಡುವ ವಿಧಾನ:

ಮೇಲೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಗೂಗಲ್ ಪ್ಲೇ-ಸ್ಟೋರ್ ನಿಂದ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡ ಬಳಿಕ ನಿಮ್ಮ ಜಮೀನಿಗೆ ಭೇಟಿ ಮಾಡುವ ಮೊದಲು ಮೊದಲಿಗೆ ನೆಟ್ ವರ್ಕ ಇರುವ ಸ್ಥಳದಲ್ಲೇ ಈ ಅಪ್ಲಿಕೇಶನ್ ಅನ್ನು ಒಪನ್ ಮಾಡಿಕೊಂಡು ನಿಮ್ಮ ಅಧಾರ್ ವಿವರ ಮತ್ತು ಜಮೀನಿನ ಸರ್ವೆ ನಂಬರ್ ವಿವರವನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.

Step-1: ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಮೊಬೈಲ್ ಅಪ್ಲಿಕೇಶನ್ ಒಪನ್ ಮಾಡಿಕೊಂಡು 3 ರಿಂದ 4 ಬಾರಿ allow ಎಂದು ಒತ್ತಿ ಬಳಿಕ ಕೊನೆಯಲ್ಲಿ “Agree” ಬಟನ್ ಮೇಲೆ ಕ್ಲಿಕ್ ಮಾಡಬೇಕು. ಬಳಿಕ “E-KYC ಮೂಲಕ ಆಧಾರ್ ದೃಡೀಕರಿಸಿ” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ರೈತರ ಅಧಾರ್ ಕಾರ್ಡ ನಂಬರ್ ಅನ್ನು ಹಾಕಿ ಸಹಮತಿ ಇದೆ ಎಂದು ಟಿಕ್ ಮಾಡಿಕೊಂಡು ಕೆಳಗಡೆ ದೃಡೀಕರಣ ವಿಧಾನವನ್ನು ಆಯ್ಕೆ ಮಾಡಿ ಅಲ್ಲಿ OTP ಮೇಲೆ ಕ್ಲಿಕ್ ಮಾಡಿ “ಓಟಿಪಿ ಪಡೆಯಿರಿ” ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-2: ತದನಂತರ ನಿಮ್ಮ ಮೊಬೈಲ್ ಗೆ ಬರುವ 6 ಅಂಕಿಯ OTP ಅನ್ನು ಹಾಕಿ ಸಲ್ಲಿಸಿ ಬಟನ್ ಮೇಲೆ ಕ್ಲಿಕ್ ಮಾಡಿದರೆ  ನಿಮ್ಮ ಎಲ್ಲಾ ವಿವರ ಇಲ್ಲಿ ತೋರಿಸುತ್ತದೆ. ಇಲ್ಲಿ ಮೊಬೈಲ್ ನಂಬರ್ ಹಾಕಿ “ಸಕ್ರಿಯಗೊಳಿಸಿ” ಬಟನ್ ಮೇಲೆ ಕ್ಲಿಕ್ ಮಾಡಿ OTP ಅನ್ನು ನಮೂದಿಸಿ “ಸಲ್ಲಿಸಿ” ಬಟನ್ ಮೇಲೆ ಕ್ಲಿಕ್ ಮಾಡಿ ಸಕ್ರಿಯಗೊಳಿಸಿಕೊಳ್ಳಬೇಕು.

Step-3: ಇದಾದ ಬಳಿಕ ನಿಮ್ಮ ಸರ್ವೆ ನಂಬರ್ ಗಳು ಇಲ್ಲಿ ತೋರಿಸುತ್ತವೆ ನಂತರ ನಿಮ್ಮ ಜಮೀನಿನ್ನು ಭೇಟಿ ಮಾಡಿ ಒಂದು ಒಂದು ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಿ “ಬೆಳೆ ವಿವರ ದಾಖಲಿಸಿ” ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ಪ್ರಸ್ತುತ ಬೆಳೆದಿರುವ ಬೆಳೆ ವಿವರವನ್ನು ಹಾಕಿ ಬೆಳೆಯ 2 ಪೋಟೋ ಕ್ಲಿಕ್ ಮಾಡಿಕೊಂಡು ಬೆಳೆ ವಿವರ ದಾಖಲಿಸಬೇಕು.

Step-4: ಒಂದೊಮ್ಮೆ ನಿಮ್ಮ ಸರ್ವೆ ನಂಬರ್ ಗಳು ಕಾಣಿಸದೇ ಇದ್ದಲ್ಲಿ “ಸರ್ವೆ ನಂಬರ್ ಸೇರಿಸಿ” ಬಟನ್ ಮೇಲೆ ಕ್ಲಿಕ್ ಮಾಡಿ ಬಿಟ್ಟು ಹೋದ ಸರ್ವೆ ನಂಬರ್ ಅನ್ನು ಸೇರಿಸಬಹುದು.

ಇದನ್ನೂ ಓದಿ: ಪಿಎಂ ಕಿಸಾನ್ ಇಕೆವೈಸಿ(Ekyc)ಆಗದೆ ಇರುವ ರೈತರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಉಂಟೇ, ಚೆಕ್ ಮಾಡಿಕೊಳ್ಳಿ.

Crop survey-ಬೆಳೆ ಸಮೀಕ್ಷೆ ವಿವರ ಅಪ್ಲೋಡ್ ಮಾಡುವ ವಿಧಾನ:

ಈ ಮೇಲಿನ ವಿಧಾನವನ್ನು ಅನುಸರಿ ನಿಮ್ಮ ಜಮೀನಿನ ಬೆಳೆ ವಿವರ ದಾಖಲಿಸಿದ ಬಳಿಕ ಕೊನೆಯಲ್ಲಿ “ಅಪ್ಲೋಡ್ ಮಾಡಿ” ಬಟನ್ ಮೇಲೆ ಕ್ಲಿಕ್ ಮಾಡಿ ತಪ್ಪದೇ ನೀವು ಮಾಡಿರುವ ಬೆಳೆ ಸಮೀಕ್ಷೆ ವರದಿಯನ್ನು ಅಪ್ಲೋಡ್ ಮಾಡಬೇಕು ಇಲ್ಲವಾದಲ್ಲಿ ಈ ವಿವರವು ನಿಮ್ಮ ಮೊಬೈಲ್ ನಲ್ಲೇ ಉಳಿದು ಬಿಡುತ್ತದೆ.

ಬೆಳೆ ಸಮೀಕ್ಷೆ ಮಾಡಲು ಆಗದಲ್ಲಿ ಕೃಷಿ ಇಲಾಖೆ, ಕಂದಾಯ ಇಲಾಖೆ, ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿ. ಮಾಹಿತಿ ನೀಡುತ್ತಾರೆ.

Crop survey helpline- 18004253553 ಇನ್ನು ಹೆಚ್ಚಿನ ಮಾಹಿತಿ:

ಇತ್ತೀಚಿನ ಸುದ್ದಿಗಳು

Related Articles