2024-25ನೇ ಸಾಲಿನ ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಎಲ್ಲಾ ಬಗೆಯ ಪದವಿ ಶಿಕ್ಷಣದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲೆಂದು ನೆರವು ನೀಡಲು ವಿದ್ಯಾರ್ಥಿ ವೇತನ ಪಡೆಯಲು (SSP Scholarship-2024) ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಯಾರು ಎಲ್ಲಾ ವಿದ್ಯಾರ್ಥಿಗಳು 2024-25ನೇ ಸಾಲಿನ ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಎಲ್ಲಾ ಬಗೆಯ ಪದವಿ ಓದುತ್ತಿರುವವರು ಮತ್ತು ಅರ್ಹ ಆಸಕ್ತ ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಗಿಯುದರೊಳಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ.
ಈ ವಿದ್ಯಾರ್ಥಿ ವೇತನಕ್ಕೆ ಎಲ್ಲಿ ಅರ್ಜಿ ಸಲ್ಲಿಸಬೇಕು? ಯಾರು ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಹಾಗೂ ಇನ್ನಿತರ ವಿಷಯಗಳ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗುವುದು.
ಇದನ್ನೂ ಓದಿ:ಕೊಳವೆ ಬಾವಿ ಕೊರೆಸಲು ಡಿ.ದೇವರಾಜ ಅರಸು ನಿಗಮದಿಂದ 4.75 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!
Apply documents-ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
2024-25-ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಅಗತ್ಯ ಅದರ ವಿವರ ಹೀಗಿದೆ.
1)SSLC MARKS CARD/ಎಸ್.ಎಸ್.ಎಲ್.ಸಿ ಅಂಕ ಪಟ್ಟಿ.
2)PUC MARKS CARD/ಪಿ.ಯು.ಸಿ ಅಂಕಪಟ್ಟಿ.
3)CASTE AND INCOME CERTIFICATE/ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
4)AADHAR CARD XEROX/ಆಧಾರ್ ಕಾರ್ಡ್ ಪ್ರತಿ.
5)PARENTES AADHAR CARD/ತಂದೆ/ತಾಯಿ ಆಧಾರ್ ಕಾರ್ಡ ಪ್ರತಿ.
6)MOBILE WITH OTP/ಮೊಬೈಲ್ ನಂಬರ್.
How can apply SSP Scholarship-ಹೇಗೆ ಸಲ್ಲಿಸಬೇಕು?
ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಕೆಳಗಡೆ ವಿಧಾನಗಳನ್ನು ಅನುಸರಿಸಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಬಹುದು.
ವಿಧಾನ-1:ಮೊದಲಿಗೆ ಈ ಲಿಂಕ್ SSP Scholarship ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕಾಗುತ್ತದೆ. ಇದಾದ ನಂತರ ಇಲ್ಲಿ ಎರಡು ಆಯ್ಕೆಗಳು ತೋರಿಸುತ್ತದೆ. ಮೊದಲ ಬಾರಿಗೆ ಈ ವೆಬ್ಸೈಟ್ ಪ್ರವೇಶ ಮಾಡುತ್ತಿರುವವರು ಹೊಸ ಖಾತೆಯನ್ನು ಸೃಜಿಸಲು ಇಲ್ಲಿ ಕ್ಲಿಕ್ ಮಾಡಿ ಎನ್ನುವ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಮುಂದೆವರೆಯಬೇಕು. ಒಂದು ವೇಳೆ ಈಗಾಗಲೇ ಖಾತೆಯನ್ನು ಸೃಜನೆ ಮಾಡಿಕೊಂಡಿದ್ದರೆ ವಿದ್ಯಾರ್ಥಿಗಳು 2024-25ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಮೇಲೆ ಕ್ಲಿಕ್ ಮಾಡಿ ಮುಂದುವರೆಯಬೇಕು.
ವಿಧಾನ-2:ನಂತರ ಪೇಜ್ ನಲ್ಲಿ ವಿದ್ಯಾರ್ಥಿಗಳ ಲಾಗಿನ್ ಐಡಿ/USER ID, ಪಾಸ್ವರ್ಡ್/Password, ಕ್ಯಾಪ್ಚ್/Captcha, ಕೋಡನ್ನು ನಮೂದಿಸಿ “student login” ಬಟನ್ ಮೇಲೆ ಕ್ಲಿಕ್ ಮಾಡಬೇಕು.
ವಿಧಾನ-3: student login” ಬಟನ್ ಮೇಲೆ ಕ್ಲಿಕ್ ಮಾಡಿದ ಬಳಿಕ ವಿದ್ಯಾರ್ಥಿಗಳ ವೈಯಕ್ತಿಕ ವಿವರ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “ಸಲ್ಲಿಸಿ/Submit” ಮೇಲೆ ಕ್ಲಿಕ್ ಮಾಡಬೇಕು.
SSP Scholarship-2024-25-ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಯಾರು ಎಲ್ಲಾ ಅರ್ಜಿ ಸಲ್ಲಿಸಬಹುದು?
ಪ್ರಸ್ತುತ 2024-25 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವರ್ಗದ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಇಲ್ಲಿದೆ ಲಿಂಕ್: Click here…