2024ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಈಗಾಗಲೇ ಆರಂಭವಾಗಿದ್ದು, ರೈತರ ಪ್ರತಿಯೊಂದು ಜಮೀನಿನ ಹಿಸ್ಸಾ ನಂಬರ್ ಪ್ರಕಾರ ಬೆಳೆ ಸಮೀಕ್ಷೆ ಮಾಡಲು ನಿಮ್ಮ ಗ್ರಾಮಕ್ಕೆ ಖಾಸಗಿ ನಿವಾಸಿಗಳನ್ನು ನೇಮಕ ಮಾಡಲಾಗಿದೆ. ಅವರಿಂದ ನಿಮ್ಮ ಜಮೀನಿನ ಬೆಳೆ ಸಮೀಕ್ಷೆ ಆಗಿದೆಯೇ ಇಲ್ಲವೇ ಎಂದು ತಿಳಿದುಕೊಳ್ಳುವುದು ಹೇಗೆ ಎಂದು ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ.
ಕರ್ನಾಟಕ ಸರಕಾರವು ಪ್ರತಿ ವರ್ಷವು ರೈತರ ಜಮೀನಿನಲ್ಲಿ ಯಾವೆಲ್ಲ ಬೆಳೆಗಳನ್ನು ಮತ್ತು ಎಷ್ಟು ಪ್ರಮಾಣದಲ್ಲಿ ಬೆಳೆದಿದ್ದಾರೆ ಎಂಬ ಇತ್ಯಾದಿ ಮಾಹಿತಿಯನ್ನು ಬೆಳೆ ಸಮೀಕ್ಷೆ ತಂತ್ರಾಂಶದ ಮೂಲಕ ಸಂಗ್ರಹಣೆ ಮಾಡಲಾಗುತ್ತಿದೆ. ಈ ಮಾಹಿತಿ ಸಂಗ್ರಹಣೆಯನ್ನು ಸ್ವತಃ ರೈತರೇ ತಂತ್ರಾಂಶದಲ್ಲಿ ನಮೂದಿಸಬಹುದು ಅಥವಾ ಖಾಸಗಿ ನಿವಾಸಿ ಆದರೂ ನಮೂದಿಸಬಹುದು.
ಬೆಳೆ ಸಮೀಕ್ಷೆ ಮಾಡಿಕೊಂದರೇ ಮಾತ್ರ ರೈತರಿಗೆ ಕೃಷಿ ಸಾಲ, ಬೆಳೆ ವಿಮೆ ಕಟ್ಟಲು, ಬೆಳೆ ಹಾನಿ ಪರಿಹಾರ ಮತ್ತು ಕೃಷಿ, ತೋಟಗಾರಿಕೆ ಇಲಾಖೆಯ ಸೌಲಭ್ಯಗಳನ್ನು ಪಡೆಯಲು ಅವಕಾಶ ಮಾಡಲಾಗಿದೆ. ಆದ್ದರಿಂದ ಪ್ರತಿಯೊಬ್ಬರ ಬೆಳೆ ಸಮೀಕ್ಷೆ ಆಗುವುದು ಕಡ್ಡಾಯ. ಅದರಿಂದ ಸಮೀಕ್ಷೆಗೆ ಕಂದಾಯ ಇಲಾಖೆಯ ಮೂಲಕ ಪ್ರತಿಯೊಂದು ಗ್ರಾಮಕ್ಕೆ ಖಾಸಗಿ ನಿವಾಸಿಗಳನ್ನು ನೇಮಕ ಮಾಡಲಾಗಿದೆ.
ಇದನ್ನೂ ಓದಿ:ರೈತರು ರಸಗೊಬ್ಬರವನ್ನು ಖರೀದಿಸುವಾಗ ಗಮನಿಸಬೇಕಾದ ಅಂಶಗಳು! ಯಾವು ನಿಮಗೆ ಗೊತ್ತೆ?
How to Check Crop Survey Details-ಖಾಸಗಿ ನಿವಾಸಿಗಳು ನಿಮ್ಮ ಜಮೀನಿನ ಬೆಳೆ ಸಮೀಕ್ಷೆ ಮಾಡಿದ್ದಾರೆಯೇ? ನೋಡುವ ವಿಧಾನ:
1)ಮೊದಲಿಗೆ ಈ ಲಿಂಕ್ ಮೇಲೆ (bele darshak app) ಕ್ಲಿಕ್ ಮಾಡಿ bele darshak app ನ್ನು ಡೌನ್ಲೋಡ್ ಮಾಡಿಕೊಳ್ಳಿ.
2)ನಂತರ ನಿಮಗೆ ಅದರಲ್ಲಿ ವರ್ಷ, ಋತು, ಜಿಲ್ಲೆ, ತಾಲೂಕು, ಹೋಬಳಿ,ಗ್ರಾಮ ಕೇಳುತ್ತದೆ ಅದನ್ನೂ ಹಾಕಿ ಮುಂದುವರೆಯಿರಿ.
3)ಇದಾದ ಮೇಲೆ ನಿಮ್ಮ ಸರ್ವೆ ನಂಬರ್ ಹಾಕಿ ವಿವರ ಪಡೆಯಿರಿ ಮೇಲೆ ಕ್ಲಿಕ್ ಮಾಡಿ.
4) ನಂತರ ನಿಮಗೆ ನಿಮ್ಮ ಸರ್ವೇ ನಂಬರಿನ್ ಹಿಸ್ಸಾ ನಂಬರ್ ಬರುತ್ತವೆ ಅದನ್ನು ಆಯ್ಕೆ ಮಾಡಿಕೊಳ್ಳಿ.
5)ಇದಾದ ಮೇಲೆ ಮಾಲೀಕರ ವಿವರ ಆಯ್ಕೆ ಮಾಡಿ ಮುಂದರೆವರೆಯಿರಿ.
6)ನಂತರ ಸಮೀಕ್ಷೆ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿ ಮುಂದೆವರೆಯಿರಿ.
7)ಕ್ಲಿಕ್ ಮಾಡಿದ ಮೇಲೆ ನಿಮಗೆ ಅಲ್ಲಿ ಸಮೀಕ್ಷೆಗಾರರ ಹೆಸರು, ಮೊಬೈಲ್ ಸಂಖ್ಯೆ, ಸಮೀಕ್ಷೆಯ ದಿನಾಂಕ ಕಾಣುತ್ತದೆ ಅದರ ಕೆಳಗಡೆ ಇರುವ ಮೊಬೈಲ್ ನಂಬರ್ ಮೇಲೆ ಕ್ಲಿಕ್ ಮಾಡಿ ಆಗ ನಿಮಗೆ ತಿಳಿ ಹಸಿರು ಬಣ್ಣದ ಬದಲಾವಣೆ ಕಾಣುತ್ತದೆ.
8)ನಂತರ ನಿಮಗೆ ಅದರ ಕೆಳಗಡೆ ಕಾಣುವ ಬೆಳೆ ವಿವರ ವೀಕ್ಷಿಸಿ ಮೇಲೆ ಕ್ಲಿಕ್ ಮಾಡಿ.
9)ಆಗ ನಿಮಗೆ ರೈತನ ಹೆಸರು, ಸರ್ವೇ ನಂಬರ್, ಮೊಬೈಲ್ ನಂ, ಅದರ ಕೆಳಗಡೆ ಬೆಳೆ ಹೆಸರು , ವಿಸ್ತೀರ್ಣ, ವರ್ಗ, ನೀರಾವರಿ ವಿಧ, ಷರ್, ಛಾಯಾಚಿತ್ರ ವೀಕ್ಷಿಸಿ, ಋತು ಎಂಬ ಆಯ್ಕೆಗಳು ಕಾಣಿಸುತ್ತವೆ.
10)ತಮಗೆ ಕಾಣುವ ಬೆಳೆಯ ಹೆಸರು ಏನು ನಮೂದಾಗಿದೆ ಎಂದು ತಿಳಿಯುತ್ತದೆ. ಹಾಗೂ ನಿಮ್ಮ ಬೆಳೆಯ ಪೋಟೋ ಸಹ ತಾವು ಅಲ್ಲಿ ನೋಡಬಹುದು.
11)ತಾವು ದಾಖಲಿಸಿದ ಬೆಳೆಯಲ್ಲಿ ಏನಾದರೂ ವ್ಯತ್ಯಾಸ ಕಂಡು ಬಂದರೆ ನೀವು ಅಲ್ಲೇ ಕೆಳಗಡೆ ಇರುವ ಆಕ್ಷೇಪಣೆ ಸಲ್ಲಿಸಿ ಇರುವ ಆಯ್ಕೆಯನ್ನು ಆಯ್ಕೆ ಮಾಡಿ ಆಕ್ಷೇಪಣೆ ಸಲ್ಲಿಸಬಹುದು.
ದಾಖಲಾದ ಬೆಳೆ ವಿವರ ತಿಳಿಯಲು ಇಲ್ಲಿದೆ ಲಿಂಕ್ Click here….