Thursday, November 21, 2024

Crop survey status-ಮನೆಯಲ್ಲೆ ಕುಳಿತು ನಿಮ್ಮ ಮೊಬೈಲ್ ನಲ್ಲಿ ಬೆಳೆ ಸಮೀಕ್ಷೆಯ ವರದಿ ತಿಳಿದುಕೊಳ್ಳಬಹುದು! ಇಲ್ಲಿದೆ ಅದರ ಮಾಹಿತಿ.

ನಮಸ್ಕಾರ ರೈತರೇ, 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಇನ್ನೇನು ಕೆಲವೇ ದಿನಗಳಲ್ಲಿ ಮುಕ್ತಾಯವಾಗಲಿದೆ . ಆದ್ದರಿಂದ ಮನೆಯಲ್ಲೆ ಕುಳಿತು ನಿಮ್ಮ ಮೊಬೈಲ್ ನಲ್ಲಿ ಬೆಳೆ ಸಮೀಕ್ಷೆಯ ವರದಿಗಳನ್ನು ಹೇಗೆ ನೋಡಬೇಕು ಎಂಬ ಮಾಹಿತಿಯನ್ನು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡಲಾಗುತ್ತದೆ.

ಹೌದು ರೈತರೇ 2024-25 ನೇ ಸಾಲಿನ ಬೆಳೆ ಸಮೀಕ್ಷೆಯ ವರದಿಗಳನ್ನು ಹೇಗೆ ತಿಳಿದುಕೊಳ್ಳಬೇಕು ಎಂಬ ಮಾಹಿತಿಯು ಹೆಚ್ಚಿನ ಜನರಿಗೆ ತಿಳಿದಿರುವುದಿಲ್ಲ. ಬೆಳೆ ಸಮೀಕ್ಷೆಗಾರರು ತಮ್ಮ ಸರ್ವೇ ನಂಬರ್ ಗೆ ಯಾವ ಬೆಳೆಯನ್ನು ಹಾಕಿದ್ದಾರೆ ಎಂದು ನೋಡಬಹುದು.

ಬೆಳೆ ಸಮೀಕ್ಷೆಗಾರರು ಯಾವ ಬೆಳೆ ನಮೂದಿಸಿದ್ದಾರೆ ಅದು ಸರಿಯೋ ತಪ್ಪೋ ಎಂದು ತಿಳಿದು ಕೊಳ್ಳುವುದು ಹೇಗೆ ಎಂದು ನಾವು ನಿಮಗೆ ಈ ದಿನ ತಿಳಿಸಿ ಕೊಡಲಾಗುತ್ತದೆ. ಅದನ್ನು ತಾವುಗಳು ತಮ್ಮ ತಮ್ಮ ಮೊಬೈಲ್ ನಲ್ಲಿ ಮನೆಯಲ್ಲೇ ಕುಳಿತು ನೋಡಿಕೊಳ್ಳಬಹುದು.

ಇದನ್ನೂ ಓದಿ:ಹಸು ಸಾಕಾಣಿಕೆ ರೈತರಿಗೆ ಸಿಹಿ ಸುದ್ಧಿ ಉಚಿತ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ.

Crop survey crop checking-ಬೆಳೆ ಸಮೀಕ್ಷೆಯ ವರದಿಯನ್ನು ನೋಡಿಕೊಳ್ಳುವ ವಿಧಾನ!

1)ಮೊದಲಿಗೆ GOOGLE PLYSTORE ಹೋಗಿ ಅಲ್ಲಿ bele darshak app ನ್ನು ಡೌನ್ಲೋಡ್‌ ಮಾಡಿಕೊಳ್ಳಿ. ಅಥವಾ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ bele darshank app ನ್ನು ಡೌನ್ಲೋಡ್‌ ಮಾಡಿಕೊಳ್ಳಬಹುದು.

2)ನಂತರ ನಿಮಗೆ ಅದರಲ್ಲಿ ವರ್ಷ, ಋತು, ಜಿಲ್ಲೆ, ತಾಲೂಕು, ಹೋಬಳಿ,ಗ್ರಾಮ ಕೇಳುತ್ತದೆ ಅದನ್ನೂ ನಮೂದಿಸಿ ಮುಂದೆವರೆಯಿರಿ. (ರೈತರ ಗಮನಕ್ಕೆ ಋತು ಆಯ್ಕೆಯಲ್ಲಿ ವಾರ್ಷಿಕ ಬೆಳೆಗಳಿಗೆ ಮುಂಗಾರು ಮಾತ್ರ ಆಯ್ಕೆ ಮಾಡಬೇಕು, ಬೇರೆ ಬೆಳೆಗಳಿಗೆ ಬೆಳೆದ ಹಂಗಾಮು ಆಯ್ಕೆ ಮಾಡಿಕೊಳ್ಳಿ).

3)ಇದಾದ ಮೇಲೆ ನಿಮ್ಮ ಸರ್ವೆ ನಂಬರ್‌ ಹಾಕಿ ವಿವರ ಪಡೆಯಿರಿ ಮೇಲೆ ಕ್ಲಿಕ್‌ ಮಾಡಿ.

4) ನಂತರ ನಿಮಗೆ ನಿಮ್ಮ ಸರ್ವೇ ನಂಬರಿನ್‌ ಹಿಸ್ಸಾ ನಂಬರ್ ಬರುತ್ತವೆ ಅದನ್ನು ಆಯ್ಕೆ ಮಾಡಿಕೊಳ್ಳಿ.

5)ಇದಾದ ಮೇಲೆ ಮಾಲೀಕರ ವಿವರ ಆಯ್ಕೆ ಮಾಡಿ ಮುಂದರೆವರೆಯಿರಿ.

6)ನಂತರ ಸಮೀಕ್ಷೆ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್‌ ಮಾಡಿ ಮುಂದೆವರೆಯಿರಿ.

7)ಕ್ಲಿಕ್‌ ಮಾಡಿದ ಮೇಲೆ ನಿಮಗೆ ಅಲ್ಲಿ ಸಮೀಕ್ಷೆಗಾರರ ಹೆಸರು, ಮೊಬೈಲ್‌ ಸಂಖ್ಯೆ, ಸಮೀಕ್ಷೆಯ ದಿನಾಂಕ ಕಾಣುತ್ತದೆ ಅದರ ಕೆಳಗಡೆ ಇರುವ ಮೊಬೈಲ್‌ ನಂಬರ್‌ ಮೇಲೆ ಕ್ಲಿಕ್‌ ಮಾಡಿ ಆಗ ನಿಮಗೆ ತಿಳಿ ಹಸಿರು ಬಣ್ಣದ ಬದಲಾವಣೆ ಕಾಣುತ್ತದೆ.

ಇದನ್ನೂ ಓದಿ:ಹಸಿರೆಲೆ ಗೊಬ್ಬರದ ಮಹತ್ವ ಮತ್ತು ವಿಶೇಷತೆ ಹಾಗೂ ಅದರ ವಿಧಗಳು!

8)ನಂತರ ನಿಮಗೆ ಅದರ ಕೆಳಗಡೆ ಕಾಣುವ ಬೆಳೆ ವಿವರ ವೀಕ್ಷಿಸಿ ಮೇಲೆ ಕ್ಲಿಕ್‌ ಮಾಡಿ.

9)ಆಗ ನಿಮಗೆ ರೈತನ ಹೆಸರು, ಸರ್ವೇ ನಂಬರ್‌, ಮೊಬೈಲ್‌ ನಂ, ಅದರ ಕೆಳಗಡೆ ಬೆಳೆ ಹೆಸರು , ವಿಸ್ತೀರ್ಣ, ವರ್ಗ, ನೀರಾವರಿ ವಿಧ, ಷರ್‌, ಛಾಯಾಚಿತ್ರ ವೀಕ್ಷಿಸಿ, ಋತು ಎಂಬ ಆಯ್ಕೆಗಳು ಕಾಣಿಸುತ್ತವೆ.

10)ತಮಗೆ ಕಾಣುವ ಬೆಳೆಯ ಹೆಸರು ಏನು ನಮೂದಾಗಿದೆ ಎಂದು ತಿಳಿಯುತ್ತದೆ. ಹಾಗೂ ನಿಮ್ಮ ಬೆಳೆಯ ಪೋಟೋ ಸಹ ತಾವು ಅಲ್ಲಿ ನೋಡಬಹುದು.

ದಾಖಲಾದ ಬೆಳೆ ವಿವರ ತಿಳಿಯಲು ಇಲ್ಲಿದೆ ಲಿಂಕ್ Click here….

ಇತ್ತೀಚಿನ ಸುದ್ದಿಗಳು

Related Articles