ಪ್ರೀಯ ಆತ್ಮೀಯ ನಾಗರಿಕರೇ, ರಾಜ್ಯ ಸರ್ಕಾರದಿಂದ “ಗೃಹ ಆರೋಗ್ಯ ಯೋಜನೆಗೆ” ಚಾಲನೆಯನ್ನು ಮಾಡಲಾಗಿರುತ್ತದೆ. ಈ ಒಂದು ಯೋಜನೆಯಿಂದ ಆರೋಗ್ಯ ಸೇವೆ ನಿಮ್ಮ ಮನೆ ಬಾಗಿಲಿಗೆ ಬಂದು ಚಿಕಿತ್ಸೆ ನೀಡುವರು. ಪ್ರತಿಯೊಬ್ಬ ಮಾನವ ಜೀವಕ್ಕೆ ಆರೋಗ್ಯ ತುಂಬಾ ಮುಖ್ಯ ಹಾಗಾಗಿ ಈ 14 ಅಸಾಕ್ರಾಂಮಿಕ ರೋಗಗಳಿಗೆ ಉಚಿತ ತಪಾಸಣೆ ಮತ್ತು ಔಷಧ ವಿತರಣೆ ಮಾಡುವು ಉದ್ದೇಶ ಈ ಯೋಜನೆಯದಾಗಿದೆ. ಈ ಉಚಿತ ಚಿಕಿತ್ಸೆ ಪಡೆದುಕೊಂಡು ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯವಾಗಿದೆ. ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಮಲ್ಲಂಗಿ ನಂದೀಶ ಅವರು ಮನುಷ್ಯನ ಜೀವನದಲ್ಲಿ ಆರೋಗ್ಯವು ಬಹಳ ಮಹತ್ವದಾಗಿದೆ ಎಂದು ತಿಳಿಸಿದ್ದಾರೆ.
ಪ್ರೀಯ ಆತ್ಮೀಯ ಬಾಂಧವರೇ ಮನುಷ್ಯನ ಜೀವನದಲ್ಲಿ ಆರೋಗ್ಯವು ಬಹಳ ಮಹತ್ವದ್ದಾಗಿದ್ದು ,ಎಷ್ಟೆ ಶ್ರೀಮಂತಿಕೆ ಇದ್ದರೂ ಆರೋಗ್ಯ ಇಲ್ಲವಾದಲ್ಲಿ ಅವನು ಬಡವ ,ಹೀಗಾಗಿ ಪ್ರತಿಯೋಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅಗತ್ಯವಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೆಕ್ಷಣ ಘಟಕ ಹಾಗೂ ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನೀಯಂತ್ರಣ ಕೋಶ ಬಳ್ಳಾರಿ ಇವರ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ “ಗೃಹ ಆರೋಗ್ಯ ಯೋಜನೆಯ ಕಾರ್ಯಗಾರ ಮತ್ತು ಜಿಲ್ಲೆಯಾದ್ಯಂತ ಗೃಹ ಆರೋಗ್ಯ ಯೋಜನೆಯ ವಿಸ್ತರಣೆ ಹಾಗೂ ಆಶಾ ಕೈಪಿಡಿ ಬಿಡುಗಡೆ ಕಾರ್ಯಕ್ರಮ “ಉದ್ಘಾಟಿಸಿ ಅವರು ಮಾತನಾಡಿದರು.
ಇದನ್ನೂ ಓದಿ: ಯೂರಿಯಾ ಅತೀ ಹೆಚ್ಚು ಬಳಕೆ ಮಾಡುತ್ತಿರಾ? ಆಗಿದ್ದರೆ ಈ ಮಾಹಿತಿ ನೋಡಿ!!
ನಮ್ಮ ಜಿವನದಲ್ಲಿ ಆರೋಗ್ಯವೆ ಮಹಾಭಾಗ್ಯವಾಗಿದ್ದು ,ಸರ್ಕಾರವು ಗೃಹ ಆರೋಗ್ಯ ಯೋಜನೆ ಜಾರಿ ಮಾಡಿರುವುದು ಬಡವರ್ಗದ ಜನರಿಗೆ ಬಹಳ ಉಪಯುಕ್ತವಾಗಿದೆ ಎಂದರು.
ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಣಾಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯ ಸರ್ಕಾರದ ಗೃಹ ಆರೋಗ್ಯ ಯೋಜನೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡುವಂತೆ ಮಾಡಲು ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯತಿ ಮಟ್ಟಗಳಲ್ಲಿ ಹಂತ -ಹಂತವಾಗಿ ಜಾರಿಗೊಳಿಸಿ ಬೆಂಬಲ ನೀಡಲಾಗುವುದು ಎಂದು ತಿಳಿಸಿದರು
ಸರ್ಕಾರವು ರಾಜ್ಯದಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿದ್ದು, ಮನೆ-ಮನೆಗೆ ಆರೋಗ್ಯ ತಪಾಸಣೆಗಾಗಿ ಗೃಹ ಆರೋಗ್ಯ ಯೋಜನೆ ಜಾರಿಯಾಗಿದೆ. ಗೃಹ ಆರೋಗ್ಯ ಯೋಜನೆಯನ್ನು ಮೊದಲು ಕೋಲಾರ ಜಿಲ್ಲೆಯಲ್ಲಿ ಮಾತ್ರ ಪ್ರಾರಂಭಿಸಿದಾಗ ಹಲವು ಸಂಗತಿಗಳು ಬೆಳಕಿಗೆ ಬಂದವು. 14 ರೋಗಗಳನ್ನು ಅಸಾಂಕ್ರಮಿಕ ರೋಗಗಳೆಂದು ಗುರುತಿಸಲಾಗಿದ್ದು, ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಈಗಿನ ಕಾಲದಲ್ಲಿ ಯುವಜನತೆಗೆ ಹೆಚ್ಚಾಗಿ ಹೃದಯಘಾತಕ್ಕೆ ಒಳಗಾಗುತ್ತಿದ್ದು ಪೋಷಕರು ತಮ್ಮ ಮಕ್ಕಳು ಸೇವಿಸುವ ಆಹಾರ ಮತ್ತು ಆರೋಗ್ಯದ ಮೇಲೆ ನಿಗಾವಹಿಸಬೇಕಾಗಿದೆ.
ಇದನ್ನೂ ಓದಿ: Good News: ಹೊಲ,ಗದ್ದೆಗೆ ಹೋಗುವ ಕಾಲುದಾರಿ ,ಬಂಡಿದಾರಿ, ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಯಲ್ಲಾ ರಮೇಶ ಬಾಬು ಅವರು ಮಾತನಾಡಿ, ಗೃಹ ಆರೋಗ್ಯ ಯೋಜನೆ ಜಿಲ್ಲೆಯಾದ್ಯಂತ ವಿಸ್ತರಣೇಯಾಗುತಿದ್ದು ಈ ಯೋಜನೆಯಡಿ 14 ಅಸಾಂಕ್ರಾಮಿಕ ರೋಗಗಳ ತಪಾಸಣೆ ಕೈಗೆತ್ತಿಕೊಳ್ಳಲಾಗಿದೆ.ಅಸಾಂಕ್ರಾಮಿಕ ರೋಗಗಳು ಜನರ ಜೀವಕ್ಕೆ ಅಪಾಯ ತಂದ್ದೊಡ್ಡಿವೆ. ಖಾಸಗಿ ಆರೋಗ್ಯ ವಲಯದಲ್ಲಿ ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಆದರೆ ,ಅಸಾಂಕಾಮಿಕರೋಗಗಳನ್ನು ಮುಂಚಿತವಾಗಿಯೇ ತಡೆಗಟ್ಟುವುದು ಮುಖ್ಯ. ಹೀಗಾಗಿ ಜವಬ್ದಾರಿಯುತವಾಗಿ ಆರೋಗ್ಯ ಇಲಾಖೆಯಿಂದ ಅಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವತ್ತ “ಗೃಹ ಆರೋಗ್ಯ ಯೋಜನೆ ” ಯನ್ನು ಜಿಲ್ಲೆಯಾದ್ಯಂತ ವಿಸ್ತರಿಸಲಾಗುತ್ತಿದೆ. ಎಲ್ಲಾ ಮನೆಗಳಲ್ಲಿ 30 ವರ್ಷ ಮೇಲ್ಪಟ್ಟವರನ್ನು ತಪಾಸಣೆಗೆ ಒಳಪಡಿಸಿ, ಸೂಕ್ತ ಔಷಧಗಳನ್ನು ಅವರ ಬಳಿಗೆ ತಲುಪಿಸುವ ಕಾರ್ಯ ಪ್ರಾರಂಭಿಸಲಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ: Free Computer Training-2025: ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ:
ಯಾವ ವಯಸ್ಸಿನವರಿಗೆ ಆರೋಗ್ಯ ತಪಾಸಣೆ:
ಯೋಜನೆಯಲ್ಲಿ 30ವರ್ಷ ಮೇಲ್ಪಟ್ಟ ವಯಸ್ಸಿನವರಿಗೆ ಉಚಿತವಾಗಿ ಪ್ರಮುಖ ಅಸಾಂಕ್ರಾಮಿಕ ರೋಗಗಳಾದ ಮಧುಮೇಹ, ರಕ್ತದೊತ್ತಡ, ಮತ್ತು ಬಾಯಿ, ಸ್ತನ ಗರ್ಭಕಂಠದ ಕ್ಯಾನ್ಸರ್ ರೋಗಗಳ ತಪಾಸಣೆ ಮತ್ತು ನಿರ್ವಹಣೆಯನ್ನು ನಡೆಸಲಾಗುವುದು. ಆಶಾ ಕಾರ್ಯಕರ್ತೆಯರು ಪ್ರತಿ ಮನೆ ಮನೆಗೆ ತೆರಳಿ ಜನರಲ್ಲಿ ಅಸಾಂಕ್ರಾಮಿಕ ರೋಗಗಳ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ಸಮುದಾಯ ಆರೋಗ್ಯಧಿಕಾರಿಗಳ ಮೂಲಕ ತಪಾಸಣೆ ಕಾರ್ಯಕ್ಕೆ ನೇರವಾಗುವುದು. ರಕ್ತದೊತ್ತಡ, ಡಯಾಬಿಟಿಸ್ ಹೊಂದಿರುವವರಿಗೆ ಸ್ಥಳದಲ್ಲೆ ಔಷಧಿಗಳನ್ನು ಉಚಿತವಾಗಿ ಒದಗಿಸುವ ವ್ಯವಸ್ಥೆಯನ್ನು ಗೃಹ ಆರೋಗ್ಯ ಯೋಜನೆಯಲ್ಲಿ ಕಲ್ಪಿಸಲಾಗಿದೆ ಎಂದು ತಿಳಿಸಿದರು ,
14 ಅಸಾಂಕ್ರಾಮಿಕ ರೋಗಗಳಿಗೆ ಉಚಿತ ತಪಾಸಣೆ ಮತ್ತು ಔಷಧ ವಿತರಣೆ ಅವು ಯಾವುವೆಂದರೆ.
1.ಮಧುಮೇಹ
2.ಅಧಿಕ ರಕ್ಕದೊತ್ತಡ.
3.ಬಾಯಿ ಕ್ಯಾನ್ಸರ್
4.ಗರ್ಭಕಂಠದ ಕ್ಯಾನ್ಸರ್.
5.ಡಯಾಬೆಟಿಕ್ ಪೂಟ್ .
6.ಮಾನಸಿಕ ಆರೋಗ್ಯ.
7.ಅಸ್ವಸ್ಥತೆಗಳು.
8.ನರ ವೈಜ್ಞಾನಿಕ ಅಸ್ವಸ್ಥತೆಗಳು.
9.ನಿದ್ರಯಲ್ಲಿ ಉಸಿರುಗಟ್ಟುವಿಕೆ
10ದೀರ್ಘಕಾಲದ ಪ್ರತಿರೋಧಕ ಶ್ವಾಸಕೋಶದ ಕಾಯಿಲೆ
11.ದೀರ್ಘಕಾಲದ ಮೂತ್ರಪಿಂಡದ ಕಾಯಿಲೆ.
12.ಅಲ್ಕೋಹಾಲ್ ರಹಿತ ಕೊಬ್ಬಿನ ಪಿತ್ತಜನಕಾಂಗದ ಕಾಯಿಲೆ ಮತ್ತು 13.ರಕ್ತಹೀನತೆ.(19-29 ವರ್ಷ ವಯಸ್ಸಿನವರಿಗೆ)
14. ರೆಟಿನೋಪತಿ ಈ ಮೇಲಿನ ಎಲ್ಲಾ ರೋಗಗಳಿಗೆ ಆರೋಗ್ಯ ತಪಾಸಣೆಯನ್ನು ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ಉಚಿತವಾಗಿ ನಡೆಸಲಾಗುವುದು.
ಆಶಾ ಕಾರ್ಯಕರ್ತೆಯರು ಮನೆ-ಮನೆಗೆ ಭೇಟಿ:
ಆಶಾ ಕಾರ್ಯಕರ್ತೆಯರು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಮತ್ತು ಜಾಗೃತಿ ಮೂಡಿಸಿ .ಆರೋಗ್ಯ ತಪಾಸಣೆಗಾಗಿ ಆಯುಷ್ಮಾನ್ ಆರೋಗ್ಯ ಮಂದಿರಕ್ಕೆ ಕಳುಹಿಸಬೇಕು. ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ (ಎಎಎಂ) ಆರೋಗ್ಯ ತಪಾಸಣೆ ನಡೆಸಿ ಎನ್ಸಿಡಿ ಪೋರ್ಟಲ್ಗೆ ಡೇಟಾ ನಮೂದಿಸುತ್ತಾರೆ. ಆರೋಗ್ಯ ತಪಾಸಣೆ ,ನಿರ್ವಹಣೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಮೇಲ್ದರ್ಜೆ ಆಸ್ಪತ್ರೆಗಳಿಗೆ ಕಳುಹಿಸಬೇಕು ಎಂದು ಆಶಾ ಕರ್ತೆಯರಿಗೆ ಮನೆ-ಮನೆಗಳಿಗೆ ಹೋಗಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕೆಂದು ತಿಳಿಸಿದರು.
ಇದನ್ನೂ ಓದಿ: Good News : KSRTC ಬಸ್ಸಿನಲ್ಲಿ ಈ ಎಲ್ಲಾ ವಸ್ತುಗಳನ್ನು ಸಾಗಿಸಬಹುದು!!
“ಗೃಹ ಆರೋಗ್ಯ ಯೋಜನೆ “ಕರಪತ್ರ:
