Saturday, August 30, 2025

Heavy Rain Forecast: ಭಾರೀ ಮಳೆಯ ಮುನ್ಸೂಚನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದುವರಿಯುತ್ತಿರುವ ಗಾಳಿಯೊಂದಿಗೆ ಭಾರೀ ಮಳೆಯ ಎಚ್ಚರಿಕೆ:

ಆತ್ಮೀಯ ಮಿತ್ರರೇ, ಕರ್ನಾಟಕ ರಾಜ್ಯದಲ್ಲಿ ಭೌಗೋಳಿಕ ವಿಭಾಗಗಳಾದ ಕರಾವಳಿಪ್ರದೇಶ, ಮಲೆನಾಡು ಪ್ರದೇಶ, ಮತ್ತು ಉತ್ತರ ಒಳನಾಡು,ದಕ್ಷಿಣ ಒಳನಾಡು ಪ್ರದೇಶದಲ್ಲಿ ಮಳೆ ಹವಾಮಾನ ಮುನ್ಸೂಚನೆ ಯಾವ ರೀತಿ ಇದೆ, ಅಂತ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ,

ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರ್ನಾಟಕದ ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಅಲ್ಲಲ್ಲಿ ಅಲ್ಪ ಪ್ರಮಾಣದ ಬಿಸಿಲು ಸಾಧ್ಯತೆಯೂ ಇದೆ. ಉಡುಪಿ ಜಿಲ್ಲೆಯ ಉತ್ತರ ಭಾಗದ ತಾಲೂಕು ಹಾಗೂ ಉತ್ತರ ಕನ್ನಡ ಜಿಲ್ಲೆಯ ದಕ್ಷಿಣ ಭಾಗದಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಕರಾವಳಿಯಾದ್ಯಂತ ಮಳೆಯ ಜೊತೆಗೆ ಗಾಳಿಯೂ ಇರಬಹುದು. ಇದರಿಂದ ಮಳೆ ಒಮ್ಮೆಗೇ ಜೋರು ಬಂದು 5 – 10 ನಿಮಿಷಗಳಲ್ಲಿ ಕಡಿಮೆಯಾಗಬಹುದು.
ಕರಾವಳಿ ಕರ್ನಾಟಕ (ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ.)
ಕೆಲವಡೆ ಭಾರೀ ರಿಂದ ಅತಿಭಾರೀ ಮಳೆ
ಗಾಳಿಯ ವೇಗ: 30–40 ಕಿ.ಮೀ/ಗಂ ಇರುತ್ತದೆ.
ಈಗಿನಂತೆ ಜುಲೈ 28ರ ತನಕ ಬಿಟ್ಟು ಬಿಟ್ಟು ಸಾಮಾನ್ಯ ಮಳೆ(ಗಾಳಿಯೊಂದಿಗೆ) ಮುಂದುವರಿಯುವ ಸಾಧ್ಯತೆಗಳಿವೆ.

ಇದನ್ನೂ ಓದಿ: ರಾಜ್ಯಕ್ಕೆ 1449 ಕೋಟಿ ಬೆಳೆವಿಮೆ ಪರಿಹಾರ ಬಿಡುಗಡೆ: ಈ ಜಿಲ್ಲೆಗಳಿಗೆ ಬಂಪರ್‍ ಪರಿಹಾರ

ಕರ್ನಾಟಕದ ಮಲೆನಾಡು ಹವಾಮಾನ ಮುನ್ಸೂಚನೆ :
ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಗಾಳಿಯೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. (ಮಧ್ಯಾಹ್ನ ನಂತರ ಕಡಿಮೆ ಆಗಬಹುದು) ಉಳಿದ ಭಾಗಗಳಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ 27ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 29 ಅಥವಾ 30ರಿಂದ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.

ಇದನ್ನೂ ಓದಿ: ಕೃಷಿ ಮೇಳದಲ್ಲಿ ಮಳಿಗೆ ಹಾಕಲು ಶರತ್ತು ಮತ್ತು ನಿಬಂಧನೆಗಳೇನು?

ಉತ್ತರ ಒಳನಾಡು ಹವಾಮಾನ ಮುನ್ಸೂಚನೆ :
ಉತ್ತರ ಒಳನಾಡಿನ ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಬೆಳಗಾವಿಯ ಬಹುತೇಕ ಭಾಗಗಳಲ್ಲಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

  • ಬೆಳಗಾವಿ, ಧಾರವಾಡ, ಬೀದರ್, ಕಲಬುರಗಿ: ಒಂದು ಅಥವಾ ಎರಡು ಕಡೆಗಳಲ್ಲಿ ಭಾರೀ ಮಳೆ
  • ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ: *ಮಧ್ಯಮ ಮಳೆಯೊಂದಿಗೆ ಬಲವಾದ ಗಾಳಿ ಬೀಸಲಿದೆ

ಇದನ್ನೂ ಓದಿ: ಟ್ರಾಕ್ಟರ್ ಚಾಲಿತ ಔಷಧಿ ಸಿಂಪರಣೆ ಉಪಕರಣಗಳು ಶೇ.50 ರ ಸಹಾಯಧನ

ದಕ್ಷಿಣ ಒಳನಾಡು ಹವಾಮಾನ ಮುನ್ಸೂಚನೆ :
ದಕ್ಷಿಣ ಒಳನಾಡಿನ ಮೈಸೂರಿನ ಕೊಡಗಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇರುತ್ತದೆ.

  • ಚಿಕ್ಕಮಗಳೂರು, ಶಿವಮೊಗ್ಗ: ಒಂದು ಅಥವಾ ಎರಡು ಕಡೆಗಳಲ್ಲಿ ಅತಿಭಾರೀ ಮಳೆ ಆಗುವ ಸಾದ್ಯತೆ ಇರುತ್ತದೆ.
  • ದಾವಣಗೆರೆ, ಹಾಸನ, ಕೊಡಗು: ಒಂದು ಅಥವಾ ಎರಡು ಕಡೆಗಳಲ್ಲಿ ಭಾರೀ ಮಳೆ ಆಗುವ ಸಾದ್ಯತೆ ಇರುತ್ತದೆ.
  • ಬಳ್ಳಾರಿ, ಬೆಂಗಳೂರು (ನಗರ/ಗ್ರಾಮಾಂತರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ: *ಮಧ್ಯಮ ಮಳೆಯೊಂದಿಗೆ ಗಾಳಿ ಇರುವ ಸಾದ್ಯತೆ ಇರುತ್ತದೆ.

ಈಗಿನಂತೆ ಜುಲೈ 28ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, 29 ಅಥವಾ 30ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಸೂಚನೆಗಳಿವೆ

ಇದನ್ನೂ ಓದಿ: ಕಾಳು ಮೆಣಸು ಬಿಡಿಸುವ ಯಂತ್ರ, ಮಳೆ ನೀರು ಕೊಯ್ಲು ,ಪಂಪ್ ಸೆಟ್ ಗೆ ಸಹಾಯಧನ ಅರ್ಜಿ

ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬಾಂಗ್ಲಾದೇಶ ಕರಾವಳಿಯಲ್ಲಿ ಪ್ರವೇಶಿಸಿದ್ದು ಇನ್ನು ಒಂದೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.
ಇದರೊಂದಿಗೆ ಮುಂಗಾರು ಸ್ವಲ್ಪ ಮಟ್ಟಿಗೆ ದುರ್ಬಲಗೊಳ್ಳುವ ಸಾಧ್ಯತೆಗಳಿವೆ.

ಮಾಹಿತಿ..
ಸಾಯಿ ಶೇಖರ್

ಇತ್ತೀಚಿನ ಸುದ್ದಿಗಳು

Related Articles