Friday, September 20, 2024

Aditya Birla Capital Scholarship: 1-ರಿಂದ ಪದವಿ ವಿದ್ಯಾರ್ಥಿಗಳಿಗೆ ರೂ 60,000 ರವರೆಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

ಆತ್ಮೀಯ ವಿದ್ಯಾರ್ಥಿ ಮಿತ್ರರೇ ಪ್ರತಿ ವರ್ಷ ನೀಡುವ ಆದಿತ್ಯ ಬಿರ್ಲಾ ಕ್ಯಾಪಿಟಲ್ ಸ್ಕಾಲರ್‌ಶಿಪ್ ಯೋಜನೆಯಡಿ ಈ ವರ್ಷವೂ ಸಹ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿರುತ್ತದೆ.
ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ನಿಂದ ಪ್ರತಿ ವರ್ಷ ನೀಡುವ ಆದಿತ್ಯ ಬಿರ್ಲಾ ಕ್ಯಾಪಿಟಲ್ ಸ್ಕಾಲರ್‌ಶಿಪ್ ಯೋಜನೆಯಡಿ ಈ ವರ್ಷವೂ ಸಹ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ.

ಈ ಯೋಜನೆಯಡಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅವರ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗಲು ಆರ್ಥಿಕವಾಗಿ ನೆರವು ನೀಡಲಾಗುತ್ತದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬವುದು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು:

1)ಅರ್ಜಿದಾರ ವಿದ್ಯಾರ್ಥಿಯ ಪೋಟೋ.

2)ಹಿಂದಿನ ತರಗತಿಯ ಅಂಕಪಟ್ಟಿ.

3)ಗುರುತಿನ ಚೀಟಿ (ಉದಾಹರಣೆಗೆ: ಆಧಾರ್ ಕಾರ್ಡ್/ ವೋಟರ್ ಐಡಿ).

4)ಪ್ರಸಕ್ತ ಸಾಲಿನ ಶಾಲೆ/ಕಾಲೇಜಿಗೆ ಪ್ರವೇಶ ಪಡೆದಿರುವ ಪುರಾವೆ ಪತ್ರ (ಶಾಲಾ ಶುಲ್ಕ ರಸೀದಿ/ಪ್ರವೇಶ ಪತ್ರ/ ಸಂಸ್ಥೆಯ ಗುರುತಿನ ಚೀಟಿ).

5)ಅರ್ಜಿದಾರರ ಬ್ಯಾಂಕ್ ಖಾತೆ ವಿವರ.

6)ಆದಾಯ ಪ್ರಮಾಣಪತ್ರ.

ಇದನ್ನೂ ಓದಿ: Agriculture equipment subsidy: ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ದೊರೆಯುವ ಕೃಷಿ ಯಂತ್ರೋಪಕರಣಗಳು.
ಇದನ್ನೂ ಓದಿ: 2019 ರ ಹಿಂದಿನ ವಾಹನಗಳಿಗೆ ಈ ನಿಯಮ ಕಡ್ಡಾಯ!!!

ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈ ರೀತಿ ಇದೆ:

ಹಂತ -1: ವಿದ್ಯಾರ್ಥಿಗಳು ತಮ್ಮ ಮೊಬೈಲ್ ಮೂಲಕವೇ ಮನೆಯಲ್ಲಿ ಅಗತ್ಯ ಮಾಹಿತಿಯೊಂದಿಗೆ ಅರ್ಜಿ ಭರ್ತಿ ಮಾಡಿ ಅರ್ಜಿ ಸಲ್ಲಿಸಬವುದು ಇಲ್ಲಿ ನೀಡಿರುವ ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ ಅರ್ಜಿದಾರರ 10 ಅಂಕಿಯ ಮೊಬೈಲ್ ಸಂಖ್ಯೆಯನ್ನು ಹಾಕಿ ಆ ಮೊಬೈಲ್ ಸಂಖ್ಯೆಗೆ ಬರುವ 6 ಅಂಕಿಯ OTP ಯನ್ನು ನಮೂದಿಸಿ ನಂತರ ನೀವು ಯಾವ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಿರಿ ಎಂದು ಆಯ್ಕೆ ಮಾಡಿಕೊಳ್ಳಬೇಕು.

ಹಂತ -2: ನಂತರ ನಿಮ್ಮ ರಾಜ್ಯ, ಲಿಂಗ, ಧರ್ಮ, ಭಾಷೆ ವಿವರ ಭರ್ತಿ ಮಾಡಿ “Update” ಬಟನ್ ಮೇಲೆ ಕ್ಲಿಕ್ ಮಾಡಿದರೆ ನೀವು ಅರ್ಜಿ ಸಲ್ಲಿಸಲು ಲಾಗಿನ್ ಆಗುತ್ತಿರಿ

ಹಂತ -3: “START APPLICATION” a wee ಕ್ಲಿಕ್ ಮಾಡಿ ಅಲ್ಲಿ ಕೇಳುವ 3 ಪ್ರಶ್ನೆಗಳಲ್ಲು ಓದಿ “YES” ಎಂದು ಉತ್ತರಿಸಬೇಕು. ಇದಾದ ಬಳಿಕ “continue” ಬಟನ್ ಮೇಲೆ ಕ್ಲಿಕ್ ಮಾಡಬೇಕು.

ಹಂತ -4: ತದನಂತರ ವಿದ್ಯಾರ್ಥಿಯ ವಿವರ, ಬ್ಯಾಂಕ್ ಖಾತೆ ವಿವರ, ವಿದ್ಯಾಭ್ಯಾಸದ ವಿವರ, ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು.

Aditya Birla Capital Scholarship: ಆದಿತ್ಯಾ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ನಿಂದ ಸ್ಕಾಲರ್‌ಶಿಪ್ ಕಾರ್ಯಕ್ರಮದಡಿ 1 ರಿಂದ 12 ನೇ ತರಗತಿ ಮತ್ತು ಪದವಿ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ವೆಚ್ಚಗಳನ್ನು ಸರಿದೂಗಿಸಿಕೊಂಡು ಹೋಗಲು ಈ ಯೋಜನೆಯನ್ನು ಸದುಪಯೋಗವನ್ನು ಮಾಡಿಕೊಳ್ಳಬಹುದಾಗಿರುತ್ತದೆ. ಒಟ್ಟು 60,000 ರೂ. (ಒಂದು ಬಾರಿ) ವರೆಗಿನ ವಿದ್ಯಾರ್ಥಿವೇತನವನ್ನು ಪಡೆಯಬವುದು.

Aditya Birla Capital Scholarship-2023 ಆದಿತ್ಯಾ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ನಿಂದ ಸ್ಕಾಲರ್‌ಶಿಪ್ ವಿವರದ ಮಾಹಿತಿ:

1) 1 ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ

ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಯೋಜನೆಯಡಿ ಅರ್ಜಿ ಸಲ್ಲಿಸಿ ರೂ 18000/- ರೂ ವಿದ್ಯಾರ್ಥಿ ವೇತನ ಪಡೆಯಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಲು ಲಿಂಕ್: Apply Now

2) 9 ರಿಂದ 12 ನೇ ತರಗತಿ ವಿದ್ಯಾರ್ಥಿಗಳಿಗೆ:

9 ರಿಂದ 12 ನೇ ತರಗತಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ 24,000 ರೂ. ಸ್ಕಾಲರ್‌ಶಿಪ್ ಪಡೆಯಬವುದು.

ಅರ್ಜಿ ಸಲ್ಲಿಸಲು ಲಿಂಕ್: Apply Now

3)ಪದವೀಧರ ವಿದ್ಯಾರ್ಥಿಗಳಿಗೆ:

ಅಧಿಕೃತವಾಗಿ ಮಾನ್ಯತೆ ಪಡೆದ ಕಾಲೇಜುಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ 36,000 ರೂ ವಿದ್ಯಾರ್ಥಿ ವೇತನ ಪಡೆಯಬುದಾಗಿರುತ್ತದೆ..

ಅರ್ಜಿ ಸಲ್ಲಿಸಲು ಲಿಂಕ್: Apply Now

4)ವೃತ್ತಿಪರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ:

ವೃತ್ತಿಪರ ಪದವಿ ಕೊರ್ಸ್ ವಿದ್ಯಾರ್ಥಿಗಳಿಗೆ ಮಾನ್ಯತೆ ಪಡೆದ ಕಾಲೇಜುಗಳಲ್ಲಿ ಅಥವಾ ವಿಶ್ವವಿದ್ಯಾಲಯಗಳಿ ಯಾವುದೇ ವೃತ್ತಿಪರ ಪದವಿ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು 60,000 ರೂ.ಪಡೆಯಬಹುದಾಗಿರುತ್ತದೆ..

ಅರ್ಜಿ ಸಲ್ಲಿಸಲು ಲಿಂಕ್: Apply Now

ಇದನ್ನೂ ಓದಿ: Post Office Scholarship:ಅಂಚೆ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಇದನ್ನೂ ಓದಿ:ಹಸು, ಎಮ್ಮೆ, ಕುರಿ, ಮೇಕೆ, ಹಂದಿ ಮತ್ತು ಕೋಳಿ ಸಾಕಾಣಿಕೆಗೆ ಸಾಲ ಸೌಲಭ್ಯ :

ಇವರೆಲ್ಲಾ ಅರ್ಜಿ ಸಲ್ಲಿಸಬವುದಾಗಿರುತ್ತದೆ.

ಅರ್ಜಿದಾರರು ತಮ್ಮ ಹಿಂದಿನ ತರಗತಿಯಲ್ಲಿ ಕನಿಷ್ಠ 60% ಅಂಕಗಳನ್ನು ಪಡೆದಿರಬೇಕು.

ಅರ್ಜಿದಾರರ ಸಲ್ಲಿಸುವ ವಿದ್ಯಾರ್ಥಿಯ ಕುಟುಂಬದ ಒಂದು ವರ್ಷದ ಆದಾಯವು ಎಲ್ಲಾ ಮೂಲಗಳಿಂದ 6 ಲಕ್ಷ ಕ್ಕಿಂತ ಹೆಚ್ಚಿಗೆ ಇರಬಾರದು.

ಆದಿತ್ಯ ಬಿರ್ಲಾ ಕ್ಯಾಪಿಟಲ್ ಲಿಮಿಟೆಡ್ ಮತ್ತು ಅದರ ಅಂಗಸಂಸ್ಥೆಗಳಲ್ಲಿ ಉದ್ಯೋಗದಲ್ಲಿರುವ ವ್ಯಕ್ತಿಯ ಮಕ್ಕಳು ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಇದೇ ತಿಂಗಳ 30 ಸೆಪ್ಟೆಂಬರ್ 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ : ಇಲ್ಲಿ ಕ್ಲಿಕ್ ಮಾಡಿ.

ಇತ್ತೀಚಿನ ಸುದ್ದಿಗಳು

Related Articles