Saturday, November 9, 2024

Agriculture department recruitment- ಕೃಷಿ ಇಲಾಖೆಯಲ್ಲಿ ಖಾಲಿ ಇರುವ 750 ಹುದ್ದೆಗಳ ಭರ್ತಿಗೆ ಕ್ರಮ – ಕೃಷಿ ಸಚಿವ ಎನ್.ಚಲುವರಾಯಸ್ವಾಮಿ,

ಸರ್ಕಾರವು ಗ್ಯಾರಂಟಿ ಯೋಜನೆಗಳ ಜೊತೆಗೆ ಕೃಷಿಗೂ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, ಕೃಷಿ ಇಲಾಖೆಯ ಕಾರ್ಯಚಟುವಟಿಕೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅನುಕೂಲವಾಗುವಂತೆ ಇಲಾಖೆಯಲ್ಲಿ ಖಾಲಿ ಇರುವ 750 ಹುದ್ದೆಗಳನ್ನು(Agriculture department recruitment-2024) ಜೂನ್ ಮಾಹೆಯೊಳಗೆ ಭರ್ತಿ ಮಾಡಲಾಗುವುದು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದರು.

ಅವರು ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕೃಷಿ ಇಲಾಖೆಯ 2023-24ನೇ ಸಾಲಿನಲ್ಲಿ ಇದುವರೆಗಿನ ಸಾಧನೆ ಕುರಿತು ಮಾಹಿತಿ ನೀಡಲು ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಖಾಲಿ ಹುದ್ದೆಯ ಭರ್ತಿಗೆ ಆರ್ಥಿಕ ಇಲಾಖೆಯು ಅಧಿಕೃತವಾಗಿ ಮಂಜೂರಾತಿ ನೀಡಿದೆ. 750 ಹುದ್ದೆಗಳಲ್ಲಿ 100 ಕೃಷಿ ಅಧಿಕಾರಿಗಳು(Agriculture officer) ಮತ್ತು 650 ಸಹಾಯಕ ಕೃಷಿ ಅಧಿಕಾರಿಗಳ(Assistant Agriculture officer) ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಲೋಕಸೇವಾ ಆಯೋಗಕ್ಕೆ ಪತ್ರ ಬರೆಯಲಾಗುವುದು ಎಂದರು.

ಇದನ್ನೂ ಓದಿ: Aadhar card Update : ಆಧಾರ್‍ ನವೀಕರಣ ಮಾಡಲು Website link ಬಿಡುಗಡೆ

ಕಳೆದ 20 ವರ್ಷಗಳಿಂದ ಆಗದ ಮುಂಬಡ್ತಿಯನ್ನು ನಾವು ಅಧಿಕಾರಕ್ಕೆ ಬಂದ 10 ತಿಂಗಳಲ್ಲಿ 04 ಉಪ ಕೃಷಿ ನಿರ್ದೇಶಕರು, 292 ಸಹಾಯಕ ಕೃಷಿ ನಿರ್ದೇಶಕರು, 253 ಕೃಷಿ ಅಧಿಕಾರಿಗಳು, 33 ಸಿಬ್ಬಂದಿಗಳು ಸೇರಿದಂತೆ ಒಟ್ಟು 582 ಹುದ್ದೆಗಳಿಗೆ ಮುಂಬಡ್ತಿ ನೀಡಲಾಗಿದೆ. ಇನ್ನೂ ಎರಡು-ಮೂರು ವರ್ಷದೊಳಗೆ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.

ಬರಗಾಲವಿದ್ದು ರೈತರಿಗೆ ಅನೂಕೂಲ ಕಲ್ಪಿಸಿಕೊಡಬೇಕಾಗಿರುವುದರಿಂದ, ಯಾವ ಯಾವ ಇಲಾಖೆಯಲ್ಲಿ ರೈತರಿಗೆ ಅನೂಕೂಲ ಕಲ್ಪಿಸುವ ಯೋಜನೆಗಳಿದ್ದರೆ, ಅವುಗಳನ್ನು ತುರ್ತಾಗಿ ಅನುಷ್ಠಾನಗೊಳಿಸುವಂತೆ ಮಾನ್ಯ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಅದರಂತೆ ಕೃಷಿ ಇಲಾಖೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಮೂರು ಬಾರಿ ಸಭೆ ನಡೆಸಲಾಗಿದೆ. ಈಗಲೂ ಸಭೆ ನಡೆಸಿ ಮಾರ್ಚ್ ಅಂತ್ಯದೊಳಗೆ ಕೃಷಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಎಲ್ಲಾ ಕೃಷಿ ಇಲಾಖೆಯ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ ಎಂದರು.

ಇದನ್ನೂ ಓದಿ: PM Kisan ಹಣ ಜಮಾ ಆಗಲು NPCI Active ಕಡ್ಡಾಯ ಚೆಕ್ ಮಾಡಿ ಈ ಲಿಂಕ್ ಮೇಲೆ ಓತ್ತಿ ಪರಿಕ್ಷೀಸಿಕೊಳ್ಳಿ.

ಕೃಷಿ ಭಾಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಿ ಮಳೆಯಾಶ್ರಿತ 24 ಬರ ಪೀಡಿತ ಜಿಲ್ಲೆಗಳಲ್ಲಿನ 106 ತಾಲ್ಲೂಕಿಗಳಲ್ಲಿ 100 ಕೋಟಿ ರೂ.ಗಳ ಅನುದಾನದಲ್ಲಿ ಸುಮಾರು 10 ಸಾವಿರ ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದೆ. ಕೃಷಿಯಲ್ಲಿ ಯಾಂತ್ರಿಕತೆಯನ್ನು ಪ್ರೋತ್ಸಾಹಿಸಲು 63,783 ಫಲಾನುಭವಿಗಳಿಗೆ 370 ಟ್ರ್ಯಾಕ್ಟರ್. 5,946 ಪವರ್ ಟಿಲ್ಲರ್, 12.060 ಸ್ವಯಂಚಾಲಿತ ಕೃಷಿ ಯಂತ್ರೋಪಕರಣಗಳು ಹಾಗೂ ಟ್ರ್ಯಾಕ್ಟರ್, ಎಂಜಿನ್, ಮೋಟಾರ್ ಚಾಲಿತ ಯಂತ್ರೋಪಕರಣಗಳು 36,907 ಮತ್ತು ಕೃಷಿ ಸಂಸ್ಕರಣಾ ಘಟಕಗಳಿಗೆ ರೂ.284.92 ಕೋಟಿ ಸಹಾಯ ಧನ ನೀಡಲಾಗಿದೆ.

ಬರಗಾಲದ ಹಿನ್ನೆಲೆಯಲ್ಲಿ ಬೆಳೆ ವಿಮೆ ಯೋಜನೆಯಡಿ 24.51 ಲಕ್ಷ ರೈತರ ಪ್ರಸ್ತಾವನೆಗಳು ಬಂದಿದ್ದು, 20.10 ಹೆಕ್ಟೇರ್ ಪ್ರದೇಶಕ್ಕೆ ನೋಂದಣಿಯಾಗಿದೆ. ಬಿತ್ತನೆ ವೈಫಲ್ಯ, ಮಧ್ಯಂತರ ಬೆಳೆ ವಿಮೆ ಪರಿಹಾರ, ಸ್ಥಳ ನಿರ್ಧಿಷ್ಟ ಪ್ರಕೃತಿ ವಿಕೋಪ ಹಾಗೂ ಕೊಲ್ಲೋತ್ತರ ಬೆಳೆ ನಷ್ಟದಡಿ 8.09 ಲಕ್ಷ ರೈತ ಫಲಾನುಭವಿಗಳಿಗೆ ರೂ. 574.52 ಕೋಟಿಗಳ ಬೆಳೆ ವಿಮೆ ಪರಿಹಾರ ವಿಮಾ ಸಂಸ್ಥೆಗಳಿಂದ ಇತ್ಯರ್ಥಪಡಿಸಲಾಗುತ್ತಿದೆ. ಇನ್ನುಳಿದ ರೈತರಿಗೆ ಮಾರ್ಚ್ ಅಂತ್ಯದೊಳಗೆಬೆಳೆ ವಿಮಾ ಪರಿಹಾರ ಪಾವತಿ ಮಾಡಲಾಗುವುದು. ಇದರಲ್ಲಿ ರೈತರ ಪಾಲಿನ ಬೆಳೆ ವಿಮಾ ಕಂತು ರೂ.184.78 ಕೋಟಿಗಳು ಪಾವತಿಯಾಗಿರುತ್ತದೆ ಎಂದರು.

ಇದನ್ನೂ ಓದಿ: PM kisan Scheme 16 Beneficiaries list: ಪಿ ಎಂ ಕಿಸಾನ್ 16 ನೇ ಕಂತಿನ ಅರ್ಹ ಫಲಾನುಭವಿಗಳ ಪಟ್ಟಿ:

ಇತ್ತೀಚಿನ ಸುದ್ದಿಗಳು

Related Articles