ಆತ್ಮೀಯ ವಿದ್ಯಾರ್ಥಿ ಮಿತ್ರರೇ, ಹಾಗೂ ಪೋಷಕರೇ ಇದೇ ತಿಂಗಳ ಮಾರ್ಚ 1 ರಿಂದ ಮಾರ್ಚ 18 ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಬಗ್ಗೆ ಪೋಷಕರು ಅಥವಾ ವಿದ್ಯಾರ್ಥಿಗಳು ಆಕ್ಷೇಪಣೆ ಸಲ್ಲಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ತನ್ನ ಜಾಲತಾಣದಲ್ಲಿ ಅವಕಾಶವನ್ನು ಕಲ್ಪಿಸಲಾಗಿದೆ.
ಹೌದು, ಕರ್ನಾಟಕಾ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಾ.1ರಿಂದ 18ರ ವರೆಗೆ ನಡೆದಿರುವ ದ್ವಿತೀಯ ಪಿಯುಸಿ ಪರೀಕ್ಷೆ-1ರ ವಿಷಯವಾರು ಮಾದರಿ ಉತ್ತರಗಳನ್ನು ಮಂಡಳಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ವಿದ್ಯಾರ್ಥಿಗಳು ಹಾಗೂ ಪಾಲಕರು ಈ ಉತ್ತರಗಳಿಗೆ ಮಾ.21ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿರುತ್ತದೆ.
ಇದನ್ನೂ ಓದಿ: Court Job Opportunity: ಜಿಲ್ಲಾ ನ್ಯಾಯಾಲಯದಲ್ಲಿSSLC/PUC/ITI/Diploma ವಿದ್ಯಾರ್ಥಿಗಳಿಗೆ ನೇಮಕಾತಿ
ಮಾ.20ರಿಂದ 22ರ ವರೆಗೆ ನಡೆಯಲಿರುವ ಪರೀಕ್ಷೆಗಳ ಉತ್ತರಗಳನ್ನು ನಂತರ ಪ್ರಕಟಿಸಲಾಗುತ್ತದೆ. ದ್ವಂದ್ವಾರ್ಥ ಬರುವ ಪ್ರಶ್ನೆಗಳು, ಅಪೂರ್ಣ ಪ್ರಶ್ನೆಗಳು, ಪಠ್ಯದಲ್ಲಿ ಇಲ್ಲವೇ ಇರುವುದು, ಕನ್ನಡ ಮತ್ತು ಇಂಗ್ಲಿಷ್ ಆವೃತ್ತಿಯಲ್ಲಿ ಬೇರೆ ಬೇರೆ ಅರ್ಥ ಬರುವಂತದ್ದು, ಒಂದು ಆಯ್ಕೆಗಿಂತ ಹೆಚ್ಚು ಆಯ್ಕೆಗಳು ಸರಿ ಇರುವ ಬಹು ಆಯ್ಕೆ ಪ್ರಶ್ನೆಗಳಿಗೆ ಆಕ್ಷೇಪಣೆ ಸಲ್ಲಿಸಬಹುದು.
Last Date: ಆಕ್ಷೇಪಣೆ ಸಲ್ಲಿಸಲು ದಿನಾಂಕ:
ಆಕ್ಷೇಪಣೆ ಸಲ್ಲಿಸುವ ಡೈರೆಕ್ಟ ಲಿಂಕ್ ಗಾಗಿ ಇಲ್ಲಿ ಓತ್ತಿ
ಮಾರ್ಚ.19ರಿಂದ ಮಾರ್ಚ 21ರ ಸಂಜೆ 5 ಗಂಟೆಯವರೆಗೆ ಆಕ್ಷೇಪಣೆಗಳನ್ನು ಮಂಡಳಿ ಜಾಲತಾಣದಲ್ಲಿ ವಿದ್ಯಾರ್ಥಿಗಳ ಆಕ್ಷೇಪಣೆ ಸಲ್ಲಿಸಲು ಅವಕಾಸವಿದೆ.
ಇಲಾಖೆಯ ಅಧಿಕೃತ ಜಾಲತಾಣ ಈ ಕೆಳಗೆ ನೀಡಲಾಗಿದೆ.
https://kseab.karnataka.gov.in/ ಸಲ್ಲಿಸಬಹುದು.
ವಿಶೇಷ ಸೂಚನೆ: ಮೇಲೇ ತಿಳಿಸಿದ ದಿನಾಂಕದ ಒಳಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ ತದನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಮಂಡಳಿ ನಿರ್ದೇಶಕರು ತಿಳಿಸಿದ್ದಾರೆ.