Thursday, November 21, 2024

Anganawadi jobs-2024:ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆ ಭರ್ತಿಗೆ ಆನ್ಲೈನ್ ಅರ್ಜಿ ಸಲ್ಲಿಸಲು ಅವಕಾಶ!

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಆರು ವರ್ಷ ಒಳಗಿನ ಮಕ್ಕಳಿಗೆ ಶಿಕ್ಷಣ ಮತ್ತು ಇತರೆ ಚಟುವಟಿಕೆಗಳನ್ನು ನಡೆಸಿ ಮಕ್ಕಳ ಬೆಳವಣಿಗೆಗೆ ಪೂರಕವಾಗಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. ಯಾವ ಜಿಲ್ಲೆಗಳಲ್ಲಿ ಈ ಹುದ್ದೆಗಳಿವೆ ಎಂದು ಈ ಲೇಖನದಲ್ಲಿ ತಿಳಿಸಲಾಗುವುದು.

ನಮ್ಮ ದೇಶದಲ್ಲಿ ಮಕ್ಕಳ ಅಭಿವೃದ್ಧಿ ಹಾಗೂ ಬೆಳವಣಿಗೆಗೆ ಹೆಚ್ಚು ಪ್ರಾಶಸ್ತತೆ ನೀಡುವ ಉದ್ದೇಶದಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯನ್ನು ನೇಮಕ ಮಾಡಲಾಗಿದೆ. ಈ ಇಲಾಖೆಯು ಪ್ರತಿ ಒಂದು ಹಳ್ಳಿಗಳಲ್ಲಿ ಮಕ್ಕಳ ಅಭಿವೃದ್ಧಿ ಮತ್ತು ಶಿಕ್ಷಣಕ್ಕೆ ಒತ್ತು ನೀಡಲು ಅಂಗನವಾಡಿಗಳನ್ನು ಸ್ಥಾಪಿಸಲಾಗಿದೆ.

ರಾಜ್ಯದ ಆಯ್ದ ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳನ್ನು ಇತರೆ ವಿವರವನ್ನು ಈ ಕೆಳಗೆ ತಿಳಿಸಲಾಗಿದೆ.

ಇದನ್ನೂ ಓದಿ:ಈ ಇಲಾಖೆಗಳಲ್ಲಿ ಜನರಿಗೆ ವಿವಿಧ ಯೋಜನೆಗಳ ಮೂಲಕ ಹಣ ಬರುವ ಯೋಜನೆಗಳಿವೆ ಅವುವುಗಳ ಬಗ್ಗೆ ಇಲ್ಲಿದೆ ಮಾಹಿತಿ.

Anganawadi jobs-ಪ್ರಸ್ತುತ ಈ ಕೆಳಗೆ ನೀಡಿದ ಜಿಲ್ಲೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

1.ಚಿಕ್ಕಮಗಳೂರು(chikkamagalore) 2.ದಕ್ಷಿಣ ಕನ್ನಡ(mangalore) 3.ಧಾರವಾಡ(dharawad)4.ಗದಗ(gadaga) 5.ಮಂಡ್ಯ(mandya) 6.ಉಡುಪಿ(udupi) 7.ಚಿಕ್ಕ ಬಳ್ಳಾಪುರ(chikkaballapur) 8.ರಾಮನಗರ(ramanagar)

Apply documents-ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

1)ಆಧಾರ್ ಕಾರ್ಡ್ ಪ್ರತಿ.

2)ವಾಸಸ್ಥಳ ಪ್ರಮಾಣ ಪತ್ರ.

3)10ನೇ ತರಗತಿ ಅಂಕ ಪಟ್ಟಿ.

4)12ನೇ ತರಗತಿ ಅಂಕ ಪಟ್ಟಿ.

5)ಜಾತಿ ಪ್ರಮಾಣ ಪತ್ರ.

6)ಪೋಟೋ, ಸಹಿ, ಇಮೇಲ್ ಐಡಿ.

ಇದನ್ನೂ ಓದಿ:ಕೃಷಿ ಇಲಾಖೆಯಿಂದ ಪ್ರಕಟಣೆ ಪಿ ಎಂ ಕಿಸಾನ್ ಹಣ ಬರುವವರು ಈ ಕೆಲಸ ಮಾಡುವುದು ಕಡ್ಡಾಯ!

Anganawadi jobs-ಈ ಹುದ್ದೆಗಳಿಗೆ ಎಲ್ಲಿ ಅರ್ಜಿ ಸಲ್ಲಿಸಬೇಕು?

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗೆ ನಿಮ್ಮ ಹತ್ತಿರದ ಗ್ರಾಮ ಒನ್, ಸೇವಾ ಸಿಂಧು ಸೈಬರ್, ಕರ್ನಾಟಕ ಒನ್ ಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಭೇಟಿ ಮಾಡಿ ವಿಚಾರಿಸಬಹುದು.

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. Click here….

ಇತ್ತೀಚಿನ ಸುದ್ದಿಗಳು

Related Articles