Thursday, November 14, 2024

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಆತ್ಮೀಯ ನೌಕರ ಬಾಂದವರೇ 2023 ಸಾಲಿನ SSLC ಮತ್ತು PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ” ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ “ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಬಾರ್‍ ಸೆಪ್ಲೇಯರ್ ಆಗಿದ್ದ ಹಳ್ಳಿ ಹೈದ ,ಪಶು ಸಂಗೋಪನೆಯಲ್ಲಿ ಸಾಧನೆ ಮಾಡಿ ಜೀವನ ಕಟ್ಟಿಕೊಂಡಿರುವ ಯಶೋಗಾಥೆ

ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು :


ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.
ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾಸಂಸ್ಥೆಗಳಲ್ಲಿ,ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ.
ವಿದ್ಯಾರ್ಥಿಯು 2023 SSLC ಮತ್ತು PUC ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು.

online ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು.

ವಿದ್ಯಾರ್ಥಿಗಳು ಪಾಸಪೋರ್ಟ್ ಅಳತೆಯ ಭಾವಚಿತ್ರ
ದೃಢೀಕೃತ ಅಂಕಪಟ್ಟಿ
ಇಲಾಖೆಯ ಸೇವಾ ದೃಢೀಕರಣ ಪತ್ರ ಹಾಗೂ ಸಂಘದ ಜಿಲ್ಲಾ/ತಾಲೂಕು/ಯೋಜನಾ ಶಾಖೆ ಅಧ್ಯಕ್ಷರು/ಬೆಂಗಳೂರು/ನಗರ ರಾಜ್ಯ ಪರಿಷತ್ ಸದಸ್ಯರಿಂದ ಪಡೆದ ದೃಡೀಕರಣ ಪತ್ರ (KSGEA NEWS Blog ನಲ್ಲಿ PDF File ಲಭ್ಯವಿದೆ.)
ಈ ಮೇಲ್ಕಂಡ ಲಗತ್ತುಗಳನ್ನು ನಿಗದಿತ JPG Format ನಲ್ಲಿ ( 1 MB ಮೀರದಂತೆ )ಅಪಲೋಡ್ ಮಾಡುವುದು.
ಅರ್ಜಿ ಸಲ್ಲಿಕೆ ಯಶಸ್ವಿಗೊಂಡ ನಂತರ ನೋಂದಾಯಿತ ಇ-ಮೇಲೆ ಸ್ವೀಕೃತಿ ರವಾನೆಯಾಗಲಿದೆ.
ಶೇಕಡವಾರು ಅಂಕಗಳನ್ನು ನಿರ್ಧರಿಸಿ ಅರ್ಜಿಯನ್ನು ಪರಿಗಣಿಸುವ ನಿರ್ಧಾರ ಸಂಘದ್ದಾಗಿರುತ್ತದೆ.

ಇದನ್ನೂ ಓದಿ: ಬೆಳೆಗಳಿಗೆ ಪ್ಲಾಸ್ಟಿಕ್ ಮಲ್ಚಿಂಗ್ ಪದ್ದತಿ ಬಳಸುವುದರಿಂದ ಲಾಭವೇನು?

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/05/2023.

ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಗ್ರಾಮ ಓನ್ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಇತ್ತೀಚಿನ ಸುದ್ದಿಗಳು

Related Articles