ಎಲ್ಲಾ ರೈತ ಮಿತ್ರರಿಗೆ ನಮಸ್ಕಾರಗಳು ಇಂದು ಈ ಲೇಖನದಲ್ಲಿ ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಲು ಎಲ್ಲಿ ಅರ್ಜಿ(Crop insurance application-2024)ಸಲ್ಲಿಸಬೇಕು? ಅಗತ್ಯ ದಾಖಲೆಗಳೇನು? ಇತ್ಯಾದಿ ಅಗತ್ಯ ಮಾಹಿತಿಯನ್ನು ತಿಳಿಸಲಾಗಿದೆ.
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ತಮ್ಮ ತಮ್ಮ ಬೆಳೆಗಳಿಗೆ ವಿಮೆ ಮಾಡಿಸಲು ಅವಕಾವಿದ್ದು ಹಾಗೂ ತೋಟಗಾರಿಕೆ ಬೆಳೆಬೆಳೆದ ರೈತರಿಗೂ ಹವಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಸರಕಾರದಿಂದ ಜಾರಿಗೊಳಸಿದ್ದು, ಸರಕಾರದಿಂದ ನಿಗದಿಪಡಿಸಿರುವ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆಯಬಹುದು.
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಬೇಕಾಗುವ ದಾಖಲೆಗಳೇನು? ಈ ಕುರಿತು ಸಂಪೂರ್ಣ ವಿವರವನ್ನುಈ ಕೆಳಗೆ ತಿಳಿಸಲಾಗಿದ್ದು ಮಾಹಿತಿಯು ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ.
How to apply for crop insurance-ಬೆಳೆ ವಿಮೆ ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು?
ರೈತರು ತಮ್ಮ ಹಳ್ಳಿಗೆ ಸಂಬಂದಪಟ್ಟ ಬೆಳೆಗೆ ವಿಮೆಯನ್ನು ಮಾಡಿಕೊಳ್ಳಲು ಈ ಯೋಜನೆಯಡಿ ಅವಕಾಶವಿದ್ದು ಅಗತ್ಯ ದಾಖಲೆಗಳ ಸಮೇತ ನಿಮ್ಮ ಹತ್ತಿರದ ಗ್ರಾಮ ಒನ್ ಅಥವಾ ಕರ್ನಾಟಕ್ ಒನ್, CSC ಕಂಪ್ಯೂಟರ್ ಸೆಂಟರ್ ಅನ್ನು ನೇರವಾಗಿ ಭೇಟಿ ಮಾಡಿ ಆನ್ಲೈನ್ ಮೂಲಕ ವಿಮೆ ಪ್ರೀಮಿಯಂ ಅನ್ನು ಪಾವತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.ಅಥವಾ ನಿಮ್ಮ ಗ್ರಾಮಗಳ ಹತ್ತಿರ ಇರುವ ಸೊಸೈಟಿಗಳಲ್ಲಿ ಬೆಳೆ ವಿಮೆ ಮಾಡಿಸಿಕೊಳ್ಳಿ.
Required Documets for application-ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
1) ಅರ್ಜಿದಾರರ ಆಧಾರ್ ಕಾರ್ಡ.
2) ಆಧಾರ್ ಲಿಂಕ್ ಅಗಿರುವ ಬ್ಯಾಂಕ್ ಖಾತೆ.
3) ಜಮೀನಿನ ಪಹಣಿ/ಉತಾರ್/RTC.
Frutis ID-FID ಅಲ್ಲಿ ಎಲ್ಲಾ ಸರ್ವೆ ನಂಬರ್ ಮತ್ತು ವಿಸ್ತೀರ್ಣ ಸರಿಯಾಗಿರಬೇಕು:
ರೈತರು ತಾವು ಬೆಳೆದಿರುವ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಪ್ರೂಟ್ಸ್ ಐಡಿಯಲ್ಲಿ/FID ಅಲ್ಲಿ ನಿಮ್ಮ ಜಮೀನಿನ ಎಲ್ಲಾ ಸರ್ವೆ ನಂಬರ್ ಮತ್ತು ಜಮೀನಿನ ವಿಸ್ತೀರ್ಣ ಸರಿಯಾಗಿ ಸೇರ್ಪಡೆಯಾಗಿರುವ ಅತೀ ಮುಖ್ಯವಾಗಿದೆ ಈ ತಂತ್ರಾಂಶದಲ್ಲಿ ಸರ್ವೆ ನಂಬರ್ ಸೇರ್ಪಡೆಯಾಗಿಲ್ಲದಿದ್ದಲ್ಲಿ ಬೆಳೆ ವಿಮೆ ಮಾಡಿಸಲು ಅಗುವುದಿಲ್ಲ.
ಪ್ರೂಟ್ಸ್ ಐಡಿ ವಿವರವನ್ನು ಸರಿಪಡಿಸಿಕೊಳ್ಳಲು ರೈತರು ತಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರವನ್ನು ಭೇಟಿ ಮಾಡಬೇಕು.
last date for application- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?
ಬೆಳೆ ವಿಮೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿವರವನ್ನು ರೈತರು ಈ ಅಧಿಕೃತ www.samrakshane.karnataka.gov.in ವೆಬ್ಸೈಟ್ ಅನ್ನು ಪ್ರವೇಶ ಮಾಡಿ ತಮ್ಮ ತಮ್ಮ ಮೊಬೈಲ್ ನಲ್ಲೇ ಈ ಕೆಳಗಿನ ವಿಧಾನವನ್ನು ಅನುಸರಿಸಿ ತಿಳಿದುಕೊಳ್ಳಬಹುದು.
Step-1: ಪ್ರಥಮದಲ್ಲಿ ಈ insurance last date ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು. ತದನಂತರ ಈ ಪೇಜ್ ನಲ್ಲಿ “ವರ್ಷ/Year: 2024-25” ಮತ್ತು “ಋತು: Kharif/ಮುಂಗಾರು” ಎಂದು ಆಯ್ಕೆ ಮಾಡಿಕೊಂಡು “ಮುಂದೆ/Go” ಬಟನ್ ಮೇಲೆ ಕ್ಲಿಕ್ ಮಾಡಬೇಕು.
Step-2: ಬಳಿಕ “Farmers’ ವಿಭಾಗದಲ್ಲಿ “View Cut Off Dates” ಬಟನ್ ಮೇಲೆ ಕ್ಲಿಕ್ ಮಾಡಬೇಕು.
Step-3: ತದನಂತರ ಇಲ್ಲಿ ಆಯ್ಕೆ ವಿಭಾಗದಲ್ಲಿ “District/ಜಿಲ್ಲೆ” ಮೇಲೆ ಕ್ಲಿಕ್ ಮಾಡಿ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡರೆ ನಿಮ್ಮ ಜಿಲ್ಲೆಯಲ್ಲಿ ಬೆಳೆಯುವ ಬೆಳೆವಾರು ಬೆಳೆ ವಿಮೆ ಪ್ರಿಮಿಯಂ ಪಾವತಿ ಮಾಡಲು ಅಥವಾ ಕಟ್ಟಲು ಕೊನೆಯ ದಿನಾಂಕದ ಪಟ್ಟಿ ತೋರಿಸುತ್ತದೆ.
ಇದನ್ನು ನೋಡಿ ರೈತರು ಸರಕಾರದಿಂದ ನಿಗದಿಪಡಿಸಿರುವ ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.