ನಮಸ್ಕಾರ ರೈತರೇ, ನಮ್ಮ ರಾಜ್ಯ ಸರಕಾರದ ಕೃಷಿ ಇಲಾಖೆಯಲ್ಲಿ ರೈತರಿಗೆ ಹಲವಾರು ಯೋಜನೆಗಳಿವೆ. ಕೃಷಿ ಇಲಾಖೆಯಲ್ಲಿ ರೈತರಿಗೆ ಬೀಜ, ಗೊಬ್ಬರ, ಕೃಷಿ ಪರಿಕರಗಳನ್ನು ಮಾತ್ರ ವಿತರಣೆ ಮಾಡುತ್ತಿಲ್ಲ ಅದರ ಜೊತೆಗೆ ರೈತರನ್ನು ಪ್ರೋತ್ಸಾಹಿಸಲು, ಕೃಷಿ ಮೇಲೆ ಒಲವು ಹೆಚ್ಚಿಸಲು ಕೃಷಿ ಪ್ರಶಸ್ತಿಗಳನ್ನು ನೀಡುವ ಯೋಜನೆಯನ್ನು ಜಾರಿಗೆತರಲಾಗಿದೆ.
ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ 2024-25 ನೇ ಸಾಲಿನಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಪ್ರಶಸ್ತಿಗಳಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿಗೆ ರೂ.25,000 ಮತ್ತು ತಾಲೂಕು ಮಟ್ಟದ ಪ್ರಶಸ್ತಿಗೆ ರೂ.10,000 ಎಂದು ನಿಗದಿ ಮಾಡಲಾಗಿದೆ. ಈ ಒಂದು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಯಸುವ ರೈತರು ಏನೆಲ್ಲ ಕೃಷಿ ಮಾಡಬೇಕು ಮತ್ತು ಯಾವ ರೀತಿಯ ಅರ್ಜಿ ಸಲ್ಲಿಸಬಹುದು ಎಂದು ಈ ಲೇಖನದಲ್ಲಿ ತಿಳಿಸಲಾಗುವುದು.
ಅರ್ಜಿ ಸಲ್ಲಿಸಬಯಸುವ ರೈತರು ಸಮಗ್ರ ಕೃಷಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನು ಸಾಕಾಣಿಕೆ, ರೇಷ್ಮೆ ಬೇಸಾಯ, ಹೈಟೆಕ್ ತಂತ್ರಜ್ಞಾನ ಅಳವಡಿಕೆ (ಹಸಿರು ಮನೆ) ಕೃಷಿ ಸಂಸ್ಕರಣೆ, ಕೃಷಿ ಅರಣ್ಯ, ಆಡು/ಕುರಿ/ಮೊಲ ಇತ್ಯಾದಿ ಸಾಕಾಣಿಕೆ ಚಟುವಟಿಕೆ ಇತ್ಯಾದಿ.
ಇದನ್ನೂ ಓದಿ:ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ಕೃಷಿ ಇಲಾಖೆಯಲ್ಲಿ 1 ಲಕ್ಷದವರೆಗು ಸಹಾಯಧನ ನೀಡಲಾಗುತ್ತದೆ!
Application documents-ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು?
1)ಅರ್ಜಿಯೊಂದಿಗೆ ಸಂಬಂಧಪಟ್ಟ ಚಟುವಟಿಕೆಯ ಜೆರಾಕ್ಸ್ ಪ್ರತಿ.
2)ಆಧಾರ್ ಕಾರ್ಡ್ ಪ್ರತಿ.
3)ಪಹಣಿ ಪತ್ರ/ಆರ್ ಟಿ ಸಿ ಪ್ರತಿ.
4)ಬ್ಯಾಂಕ್ ಪಾಸ್ ಬುಕ್ ಪ್ರತಿ.
5)1 ಫೋಟೋ.
Where to apply-ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?
ಮೇಲಿನ ಸಂಬಂಧ ಪಟ್ಟ ಎಲ್ಲಾ ದಾಖಲೆಗಳನ್ನು ಹೊಂದಿರುವ ರೈತರು ತಮ್ಮ ಹತ್ತಿರದ ರೈತರ ಸಂಪರ್ಕ ಕೇಂದ್ರ(ಕೃಷಿ ಇಲಾಖೆ) ಅಥವಾ ತಾಲೂಕಿನಲ್ಲಿರುವ ಸಹಾಯ ಕೃಷಿ ನಿರ್ದೇಶಕರ ಕಛೇರಿಯನ್ನು ಭೇಟಿ ಮಾಡಿ ಅರ್ಜಿಗಳನ್ನು ಸಲ್ಲಿಸಬಹುದು.
ಇದನ್ನೂ ಓದಿ:ಬೆಳೆ ಸಾಲ ಮನ್ನಾ ಆಗಿರುವ ರೈತರ ಪಟ್ಟಿಯನ್ನು ನೋಡಿಕೊಳ್ಳುವ ವಿಧಾನ!
ಸೂಚನೆ: ಹಲವು ಜಿಲ್ಲೆಗಳಲ್ಲಿ ಈಗಾಗಲೇ ಈ ಪ್ರಶಸ್ತಿಗೆ ಸಂಬಂದಪಟ್ಟ ಅರ್ಜಿ ಸಲ್ಲಿಕೆ ಮುಕ್ತಾಯ ವಾಗಿದ್ದರೇ ಬರುವ ವರ್ಷಕ್ಕೆ ಅರ್ಜಿ ಸಲ್ಲಿಸಬಹುದು. ತಾವು ಅದನ್ನು ತಮ್ಮ ಹತ್ತಿರದ ಕೃಷಿ ಇಲಾಖೆಯ ಕೃಷಿ ಅಧಿಕಾರಿಗಳಲ್ಲಿ ಕೇಳಿ ತಿಳಿದುಕೊಳ್ಳಿ.