Friday, November 22, 2024

Bagar hukum scheme-ರಾಜ್ಯದ ಕಂದಾಯ ಸಚಿವರಿಂದ ರೈತರಿಗೆ ಸಿಹಿ ಸುದ್ಧಿ “ಬಗರ್ ಹುಕುಂ” ಮರು ಚಾಲನೆ!

ನಮಸ್ಕಾರ ರೈತರೇ, ಕರ್ನಾಟಕ ರಾಜ್ಯ ಸರಕಾರದ ಕಂದಾಯ ಇಲಾಖೆಯಿಂದ ‘ಬಗರ್ ಹುಕುಂ’ ಸಾಗುವಳಿ ಜಮೀನು ಹೊಂದಿದ ರೈತರಿಗೆ ಸಿಹಿ ಸುದ್ಧಿ ನೀಡಿದೆ. ಈ ಕುರಿತು ರಾಜ್ಯದ ಕಂದಾಯ ಇಲಾಖೆಯ ಸಚಿವರಾದ ಕೃಷ್ಣ ಬೈರೇಗೌಡರವರು ಹಂಚಿಕೊಂಡಿರುವ ಸುದ್ಧಿಯನ್ನು ಈ ಲೇಖನದಲ್ಲಿ ರೈತರಿಗೆ ತಿಳಿಸಲಾಗುತ್ತದೆ.

ಕಳೆದ ಹಲವಾರು ವರ್ಷಗಳಿಂದ ಸರಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತ ಬಂದಿರುವ ಹಾಗೂ ಬಗರ್ ಹುಕುಂ ಸಾಗುವಳಿ ಚೀಟಿ ನಿರೀಕ್ಷೆಯಲ್ಲಿದ್ದಂತ ರೈತರಿಗೆ ಸಿಹಿ ಸುದ್ಧಿ ನೀಡಿದೆ. ಬಗರ್ ಹುಕುಂ ಅರ್ಜಿ ವಿಲೇವಾರಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾಹಿತಿ ಹಂಚಿಕೊಂಡಿದ್ದಾರೆ.

ಸುದ್ಧಿಗೋಷ್ಠಿಯಲ್ಲಿ ಮಾತನಾಡಿದಂತ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡರವರು ಬಗರ್ ಹುಕುಂ ನಮೂನೆ 57 ರ ಅಡಿಯಲ್ಲಿ ಒಟ್ಟಾರೆ 9.80 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ ಅನರ್ಹ ಅರ್ಜಿಗಳೆ ಅಧಿಕವಿದ್ದು, ಈ ಅರ್ಜಿಗಳ ವಿಲೇವಾರಿಗೆ ಈಗಾಗಲೇ ರಾಜ್ಯಾದ್ಯಾಂತ 160 ಬಗರ್ ಹುಕುಂ ಸಮಿತಿಗಳನ್ನು ರಚಿಸಲಾಗಿದೆ. ಪ್ರತಿ ತಿಂಗಳು ಕನಿಷ್ಠ ಮಟ್ಟದ ಅರ್ಜಿ ವಿಲೇವಾರಿ ಆಗಬೇಕು, ಮುಂದಿನ ಎಂಟು ತಿಂಗಳಲ್ಲಿ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಅಲ್ಲದೆ ಅರ್ಹರಿಗೆ ಭೂಮಿ ಮಂಜೂರು ಮಾಡಬೇಕು ಎಂದು ಈಗಾಗಲೇ ತಹಶಿಲ್ದಾರ್ ಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವರು ತಿಳಿಸಿದರು.

ಇದನ್ನೂ ಓದಿ:ಪಿಎಂ ಕಿಸಾನ್ ಸಮ್ಮಾನ್ 18ನೇ ಕಂತು ಬಿಡುಗಡೆಗೆ ದಿನಾಂಕ ಪ್ರಕಟಣೆ! ನಿಮ್ಮದು ಇಕೆವೈಸಿ ಆಗಿದೆಯೇ? ಚೆಕ್ ಮಾಡಿಕೊಳ್ಳಿ.

ರಾಜ್ಯಾದ್ಯಾಂತ ಗ್ರಾಮ ಆಡಳಿತ ಅಧಿಕಾರಿಗಳ ಮಟ್ಟದಲ್ಲಿ ಕನಿಷ್ಠ 4ಲಕ್ಷ ರೈತರಿಗೆ ಸಂಬಂಧಿಸಿದ 69,437 ಸರ್ವೇ ನಂಬರ್ ಗಳಲ್ಲಿ ನಮೂನೆ 1 ರಿಂದ 5 ದಾಖಲೆಗಳನ್ನು ಪರಿಶಿಲಿಸಲಾಗಿದ್ದು, ಅಂದರೆ ಸಂಭಂದಪಟ್ಟ ರೈತರ ಕಡತಗಳನ್ನು ತಯಾರು ಮಾಡುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಈ ದಾಖಲೆಗಳನ್ನು ಒಂದು ಗೂಡಿಸಿ ರೈತರು ಪೋಡಿಗೆ ಅರ್ಹರೆ ಎಂದು ಗುರುತಿಸಲಾಗುವುದು. ಕಂದಾಯ ನಿರೀಕ್ಷಕರು, ಶಿರಸ್ತೇದಾರ್ ಹಾಗೂ ತಹಶೀಲ್ದಾರ್ ಈ ಬಗ್ಗೆ ಪರಿಗಣಿಸಿ ನಂತರ ನಮೂನೆ 6-10 ರ ಪ್ರಕ್ರಿಯೆಗೆ ಸರ್ವೇ ಇಲಾಖೆಗೆ ಪೋಡಿಗೆ ಶಿಫಾರಸ್ಸು ಮಾಡುತ್ತಾರೆ. ತದನಂತರ ರೈತರಿಗೆ ಪೋಡಿ ಲಭ್ಯವಾಗುತ್ತದೆ. ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಕಂದಾಯ ಇಲಾಖೆಯಿಂದ ಇಲ್ಲಿಯವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಸೇರಿಸಿ ಒಟ್ಟು ಶೇ 81.74 ರಷ್ಟು ಪಹಣಿ/ಆರ್ ಟಿ ಸಿ ಗಳಿಗೆ ಆಧಾರ್ ಲಿಂಕ್ ಮಾಡುವ ಕೆಲಸವನ್ನು ಮಾಡಲಾಗಿದೆ ಎಂದು ಕಂದಾಯ ಸಚಿವರು ತಿಳಿಸಿರುತ್ತಾರೆ. ಇನ್ನೂ ಉಳಿದವರು ಆದಷ್ಟು ಬೇಗನೆ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಿ ಆಧಾರ್ ಲಿಂಕ್ ಮಾಡಿಸಿಕೊಳ್ಳಲು ಸೂಚಿಸಲಾಗಿದೆ.

ಇದನ್ನೂ ಓದಿ:ಈ ಇಲಾಖೆಗಳಿಂದ ಜನರಿಗೆ ವಿವಿಧ ರೀತಿಯಲ್ಲಿ ಹಣ ಬರುವ ಯೋಜನೆಗಳಿವೆ! ಅವುಗಳ ಮಾಹಿತಿ ಇಲ್ಲಿದೆ.

Pouthi khate-ಶೀಘ್ರದಲ್ಲಿ ಪೌತಿ ಖಾತೆ ಆಂದೋಲನ ಜಾರಿ!

ಕಂದಾಯ ಸಚಿವರು ಪೌತಿ ಖಾತೆ ಆಂದೋಲನದ ಕುರಿತು ಸಹ ಮಾಹಿತಿ ತಿಳಿಸಿದ್ದು, ರಾಜ್ಯಾದ್ಯಾಂತ 48,16,813 ಜಮೀನುಗಳ ಮಾಲೀಕರು ನಿಧನರಾಗಿದ್ದಾರೆ. ಆದರೆ ಅವರ ಹೆಸರಲ್ಲೇ ಪಹಣಿ ಮುಂದುವರೆಯುತ್ತಿದೆ. ಈ ಎಲ್ಲರಿಗೂ ಶೀಘ್ರದಲ್ಲಿ ಪೌತಿ ಖಾತೆ ಆಂದೋಲನದ ಅಡಿಯಲ್ಲಿ ಖಾತೆ ಬದಲಿಸಿಕೊಡಲಾಗುವುದು ಎಂದು ಅವರು ತಿಳಿಸಿದರು.

ಇತ್ತೀಚಿನ ಸುದ್ದಿಗಳು

Related Articles