Tuesday, April 8, 2025

Bee farming  training-ರುಡ್ ಸೆಟ್ ನಲ್ಲಿ  ಉಚಿತ ಜೇನು ಸಾಕಾಣಿಕೆ ತರಬೇತಿ! ಆಸಕ್ತರಿಂದ ಅರ್ಜಿ ಆಹ್ವಾನ.

ರುಡ್ ಸೆಟ್ ಸಂಸ್ಥೆ ಕುಮಟಾ, ಉತ್ತರ ಕನ್ನಡ (ಕಾರವಾರ) ಜಿಲ್ಲೆ ವತಿಯಿಂದ ಸ್ವ-ಉದ್ಯೋಗ ಆಕಾಂಕ್ಷಿಗಳಿಗೆ  ಉಚಿತ ಜೇನು ಸಾಕಾಣಿಕೆ ಮತ್ತು ವಿವಿಧ ಬಗೆಯ ಸ್ವ-ಉದ್ಯೋಗ ಪ್ರಾರಂಭಿಸಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಒಂದು ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ವಿವಿಧ ಬಗೆಯ ತರಬೇತಿ ನೀಡುವುದರ ಜೊತೆಗೆ ಸ್ವ-ಉದ್ಯೋಗವನ್ನು ಆರಂಭಿಸಲು ಬೇಕಾಗುವ ಬಂಡವಾಳಕ್ಕೆ ಆರ್ಥಿಕವಾಗಿ ನೆರವಾಗಲು ಬ್ಯಾಂಕ್ ಗಳಿಂದ ಸಾಲ ಪಡೆಯಲು ಸೂಕ್ತ ಮಾರ್ಗದರ್ಶನವನ್ನು ಸಹ ನೀಡಲಾಗುತ್ತದೆ.

ರುಡ್ ಸೆಟ್ ಸಂಸ್ಥೆ ಕುಮಟಾ, ಉತ್ತರ ಕನ್ನಡ (ಕಾರವಾರ)(ಗ್ರಾಮೀಣಾಭಿವೃದ್ಧಿ ಹಾಗೂ ಸ್ವ ಉದ್ಯೋಗ ತರಬೇತಿ ಸಂಸ್ಥೆ) ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಸಹಭಾಗಿತ್ವದಲ್ಲಿ ನಡೆಯುತ್ತಿದ್ದು, ನಮ್ಮ ಸಂಸ್ಥೆಯಲ್ಲಿ ದಿನಾಂಕ 24/03/2025 ರಿಂದ 02/04/2025 (10 ದಿನಗಳ) ವರೆಗೆ ಜೇನು ಸಾಕಾಣಿಕೆ ಉಚಿತ ತರಬೇತಿಯನ್ನು ನಡೆಸಲಾಗುತ್ತಿದೆ. ಆಸಕ್ತರು ಈ ತರಬೇತಿಯಲ್ಲಿ ಭಾಗವಹಿಸಲು ಆಸಕ್ತರು ಅರ್ಜಿ ಸಲ್ಲಿಸಲು ಸಂಸ್ಥೆಯ ನಿರ್ದೇಶಕರು ಪ್ರಕಟಣೆ ಹೊರಡಿಸಲಾಗಿದೆ.

ಇದನ್ನೂ ಓದಿ:ಎಲ್ಲಾ ವರ್ಗದ ರೈತರಿಗೆ ಶೇ.90% ಸಹಾಯಧನದಲ್ಲಿ ಸ್ಪಿಂಕ್ಲರ್ ವಿತರಣೆ! ಕೃಷಿ ಇಲಾಖೆ.

Free training details-ಈ ಕೆಳಗೆ ತಿಳಿಸಿದ ತರಭೇತಿಗಳು ಉಚಿತವಾಗಿ ನಡೆಯಲಿವೆ.

1.ಸಿಸಿ ಟಿವಿ ಕ್ಯಾಮೆರಾ ಇನ್ಸ್ಟಾಲೆಷನ್(13 ದಿನಗಳು)

2. ಬೇಕರಿ ಆಹಾರ ತಯಾರಿಕೆ (1 ತಿಂಗಳು)

3.ಅಣಬೆ ಬೇಸಾಯ (10 ದಿನಗಳು)

4.ಹಪ್ಪಳ ಮತ್ತು ಚಿಪ್ಸ ತಯಾರಿಕೆ (10 ದಿನಗಳು)

5.ಬ್ಯೂಟಿಸಿಯನ್ ತರಬೇತಿ (1 ತಿಂಗಳು)

6. ಫಾಸ್ಟ ಫುಡ್ ತಯಾರಿಕೆ (10 ದಿನಗಳು)

7.ಕಂಪ್ಯೂಟರ್ ಟ್ಯಾಲಿ (30ದಿನಗಳು)

ಇದಲ್ಲದೇ ಇನ್ನೂ ಅನೇಕ ಯುವಕರು ಮತ್ತು ಯುವತಿಯರಿಗೆ  ಸ್ವ-ಉದ್ಯೋಗವನ್ನು ಕೈಗೊಳ್ಳುವಂತಹ ತರಬೇತಿಗಳನ್ನು ನೀಡಲಾಗುತ್ತದೆ.

How to join training- ತರಬೇತಿಯನ್ನು ಸೇರಲು ಬೇಕಾಗುವ ಅರ್ಹತೆಗಳು:

1.ಅಭ್ಯರ್ಥಿಯು ಗ್ರಾಮೀಣ (BPL) ಮೊದಲ ಆದ್ಯತೆ

2.ವಯೋಮಿತಿ 18 ರಿಂದ 45 ವಯಸ್ಸಿನ ಒಳಗಿರಬೇಕು.

3.ಕನ್ನಡ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.

4.ಸ್ವ-ಉದ್ಯೋಗ ಆರಂಭಿಸಲು ಆಸಕ್ತರಿರಬೇಕು.

ಇದನ್ನೂ ಓದಿ:ಎರೆಹುಳು ಗೊಬ್ಬರ ಮಹತ್ವ ಮತ್ತು ಪ್ರಯೋಜನಗಳು!

ವಿಶೇಷ ಸೂಚನೆ: ತರಬೇತಿಯು ಸಂಪೂರ್ಣ ಊಟ ವಸತಿಯೊಂದಿಗೆ ಉಚಿತವಾಗಿರುತ್ತದೆ. ಹಾಗೂ ಸಂಸ್ಥೆಯ ಸಮವಸ್ತ್ರ ಉಚಿತವಾಗಿ ಕೊಡಲಾಗುವುದು  ಮತ್ತು ತರಬೇತಿಯ ಕೊನೆಯ ದಿನ ಪ್ರಮಾಣ ಪತ್ರ ನೀಡಲಾಗುತ್ತದೆ.

APPLY address-ಅರ್ಜಿ ಸಲ್ಲಿಸಲು ಸಂಪರ್ಕಿಸಬೇಕಾದ ವಿಳಾಸ:

ರುಡ್ ಸೆಟ್ ಸಂಸ್ಥೆ

ಕುಮಟಾ, ಉತ್ತರ ಕನ್ನಡ (ಕಾರವಾರ)

ಇಂಡಿಸ್ಟ್ರೀಯಲ್ ಏರಿಯಾ, ಹೆಗಡೆ ರಸ್ತೆಕುಮಟಾ-581343

9449860007, 9538281989, 9916783825, 8880444612 .

ಬೇಕಾಗುವ ದಾಖಲೆಗಳು

4 ಪಾಸ್ ಫೋರ್ಟ್ ಸೈಜ್ ಫೋಟೋ, ಬ್ಯಾಂಕ್ ಪಾಸ್ ಬುಕ್ ಪ್ರತಿ, ರೇಷನ್ ಕಾರ್ಡ್ ಪ್ರತಿ, ಆಧಾರ್ ಕಾರ್ಡ್ ಪ್ರತಿ, ಪಾನ್ ಕಾರ್ಡ್ ಪ್ರತಿ.

ಇತ್ತೀಚಿನ ಸುದ್ದಿಗಳು

Related Articles