Thursday, November 21, 2024

Bele darshaka app-ಬೆಳೆ ಸಮೀಕ್ಷೆಯಲ್ಲಿ ನಿಮ್ಮ ಬೆಳೆ ನಮೂದು ತಪ್ಪಾಗಿದ್ದರೆ ಹೀಗೆ ಆಕ್ಷೇಪಣೆ ಸಲ್ಲಿಸಬಹುದು!

ನಮಸ್ಕಾರ ರೈತ ಭಾಂದವರೇ, 2024 ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಮುಕ್ತಾಯವಾಗಿದ್ದು ನಿಮ್ಮ ಜಮೀನಿನ ಬೆಳೆ ಸಮೀಕ್ಷೆ ಆಗಿದ್ದರೆ ಅದರಲ್ಲಿ ಬೆಳೆ ತಪ್ಪಾಗಿ ನಮೂದಾಗಿದ್ದಲ್ಲಿ ಅದನ್ನು ಸರಿಪಡಿಸಲು ಆಕ್ಷೇಪಣೆಯನ್ನು ಹೇಗೆ ಸಲ್ಲಿಸಬೇಕು ಎಂದು ಈ ಲೇಖನದಲ್ಲಿ ತಿಳಿಸಲಾಗುತ್ತದೆ.

ರೈತರು ತಮ್ಮ ಮೊಬೈಲ್ ನಲ್ಲೇ ಪಹಣಿಯಲ್ಲಿ ದಾಖಲಿಸಿದ ಬೆಳೆ ಮಾಹಿತಿ (Crop details in rtc) ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ ಮಾಡಲಾಗಿದೆ. ಜಮೀನಿನ ಪಹಣಿ/ RTCಗಳಲ್ಲಿನ ಬೆಳೆ ವಿವರಗಳನ್ನು ಏನು ದಾಖಲಿಸಲಾಗಿದೆ ಎಂದು ನೋಡಬಹುದು. ಹಾಗೂ ಆಕ್ಷೇಪಣೆಯನ್ನು ಸಲ್ಲಿಸುವುದು ಹೇಗೆ ಎಂದು ತಿಳಿದುಕೊಳ್ಳಿ.

How to Crop Survey carections-2024 ರ ಬೆಳೆ ಸಮೀಕ್ಷೆಯಲ್ಲಿ ತಪ್ಪಾಗಿ ದಾಖಲಾದ ಬೆಳೆಗೆ ಆಕ್ಷೇಪಣೆ ಸಲ್ಲಿಸುವ ವಿಧಾನ:

1)ಮೊದಲಿಗೆ GOOGLE PLYSTORE ಹೋಗಿ ಅಲ್ಲಿ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ bele darshank app ನ್ನು ಡೌನ್ಲೋಡ್‌ ಮಾಡಿಕೊಳ್ಳಿ.

2)ನಂತರ ನಿಮಗೆ ಅದರಲ್ಲಿ ವರ್ಷ, ಋತು, ಜಿಲ್ಲೆ, ತಾಲೂಕು, ಹೋಬಳಿ,ಗ್ರಾಮ ಕೇಳುತ್ತದೆ ಅದನ್ನೂ ಹಾಕಿ ಮುಂದೆವರೆಯಿರಿ.

3)ಇದಾದ ಮೇಲೆ ನಿಮ್ಮ ಸರ್ವೆ ನಂಬರ್‌ ಹಾಕಿ ವಿವರ ಪಡೆಯಿರಿ ಮೇಲೆ ಕ್ಲಿಕ್‌ ಮಾಡಿ.

4) ನಂತರ ನಿಮಗೆ ನಿಮ್ಮ ಸರ್ವೇ ನಂಬರಿನ್‌ ಹಿಸ್ಸಾ ನಂಬರ್ ಬರುತ್ತವೆ ಅದನ್ನು ಆಯ್ಕೆ ಮಾಡಿಕೊಳ್ಳಿ.

5)ಇದಾದ ಮೇಲೆ ಮಾಲೀಕರ ವಿವರ ಆಯ್ಕೆ ಮಾಡಿ ಮುಂದರೆವರೆಯಿರಿ.

6)ನಂತರ ಸಮೀಕ್ಷೆ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್‌ ಮಾಡಿ ಮುಂದೆವರೆಯಿರಿ.

7)ಕ್ಲಿಕ್‌ ಮಾಡಿದ ಮೇಲೆ ನಿಮಗೆ ಅಲ್ಲಿ ಸಮೀಕ್ಷೆಗಾರರ ಹೆಸರು, ಮೊಬೈಲ್‌ ಸಂಖ್ಯೆ, ಸಮೀಕ್ಷೆಯ ದಿನಾಂಕ ಕಾಣುತ್ತದೆ ಅದರ ಕೆಳಗಡೆ ಇರುವ ಮೊಬೈಲ್‌ ನಂಬರ್‌ ಮೇಲೆ ಕ್ಲಿಕ್‌ ಮಾಡಿ ಆಗ ನಿಮಗೆ ತಿಳಿ ಹಸಿರು ಬಣ್ಣದ ಬದಲಾವಣೆ ಕಾಣುತ್ತದೆ.

8)ನಂತರ ನಿಮಗೆ ಅದರ ಕೆಳಗಡೆ ಕಾಣುವ ಬೆಳೆ ವಿವರ ವೀಕ್ಷಿಸಿ ಮೇಲೆ ಕ್ಲಿಕ್‌ ಮಾಡಿ.

9)ಆಗ ನಿಮಗೆ ರೈತನ ಹೆಸರು, ಸರ್ವೇ ನಂಬರ್‌, ಮೊಬೈಲ್‌ ನಂ, ಅದರ ಕೆಳಗಡೆ ಬೆಳೆ ಹೆಸರು , ವಿಸ್ತೀರ್ಣ, ವರ್ಗ, ನೀರಾವರಿ ವಿಧ, ಷರಾ, ಛಾಯಾಚಿತ್ರ ವೀಕ್ಷಿಸಿ, ಎಂಬ ಆಯ್ಕೆಗಳು ಕಾಣಿಸುತ್ತವೆ.

10)ತಮಗೆ ಕಾಣುವ ಬೆಳೆಯ ಹೆಸರು ಏನು ನಮೂದಾಗಿದೆ ಎಂದು ತಿಳಿಯುತ್ತದೆ. ಹಾಗೂ ನಿಮ್ಮ ಬೆಳೆಯ ಪೋಟೋ ಸಹ ತಾವು ಅಲ್ಲಿ ನೋಡಬಹುದು.

11) ನಿಮಗೆ ಅದರ ಕೆಳಗೆ ದಾಖಲಿಸಿದ ಬೆಳೆ ವಿವರ ಕುರಿತು ಆಕ್ಷೇಪಣೆ ಇದ್ದಲ್ಲಿ ಕೆಳಗಿನ ಆಯ್ಕೆ ಮೇಲೆ ಕ್ಲಿಕ್ ಮಾಡಿ? ಕ್ಲಿಕ್ ಮಾಡಿ ಆಕ್ಷೇಪಣೆ ವಿವರ ದಾಖಲಿಸಿ ಒತ್ತ ಬೇಕು. ನಂತರ ಗ್ರಾಮ ಆಡಳಿತ ಅಧಿಕಾರಿ ಅಥವಾ ಕೃಷಿ ಅಧಿಕಾರಿಗಳ ಗಮನಕ್ಕೆ ತಂದು ಸಮೀಕ್ಷೆ ಮಾಡಿಸಬೇಕು.

ದಾಖಲಾದ ಬೆಳೆ ವಿವರ ಕುರಿತು ಆಕ್ಷೇಪಣೆ ಇದ್ದಲ್ಲಿ ಇಲ್ಲಿದೆ ಲಿಂಕ್ Click here….

ಇತ್ತೀಚಿನ ಸುದ್ದಿಗಳು

Related Articles