Saturday, October 5, 2024

Birth Certificate-ಜನನ-ಮರಣ ಪ್ರಮಾಣ ಪತ್ರ ಇನ್ನು ಮುಂದಕ್ಕೆ ನಿಮ್ಮ ಗ್ರಾಮ ಪಂಚಾಯತನಲ್ಲೇ ಪಡೆಯಬಹುದು!

ಸಾರ್ವಜನಿಕರಿಗೆ ಅನುಕೂಲವಾಗಲು ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆಯಲು (birth and death certificate) ಹಳ್ಳಿಯ ಜನರು ನಗರ ಪ್ರದೇಶದ ಕಛೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ರಾಜ್ಯ ಸರಕಾರದಿಂದ ನೂತನ ಕ್ರಮವನ್ನು ಜಾರಿಗೆ ತರಲಾಗಿದ್ದು, ಇನ್ನು ಮುಂದೆ ಈ ಪ್ರಮಾಣ ಪತ್ರಗಳನ್ನು ಪಡೆಯಲು ಹಳ್ಳಿಯ ಜನರು ನಗರ ಪ್ರದೇಶದ ಕಛೇರಿಗಳಿಗೆ ಹೋಗುವ ಅವಶ್ಯಕತೆ ಇರುವುದಿಲ್ಲ.

ಸರಕಾರದ ಕೆಲವು ಯೋಜನೆಗಳ ಸೌಲಭ್ಯ ಪಡೆಯಲು ನಾಗರಿಕರಿಗೆ ಜನನ-ಮರಣ ಪ್ರಮಾಣ ಪತ್ರಗಳನ್ನು ಒದಗಿಸುವುದು ಕಡ್ಡಾಯ ಮಾಡಲಾಗಿದ್ದು ಈ ಕಾರಣದಿಂದ ಪ್ರಮಾಣ ಪತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ.

ರಾಜ್ಯ ಸರಕಾರದ ಮುಂದಿನ ಕ್ರಮವೇನು? ಇನ್ನು ಮುಂದೆ ಜನನ-ಮರಣ ಪ್ರಮಾಣ ಪತ್ರವನ್ನು ಎಲ್ಲಿ ಪಡೆಯಬಹುದು? ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

Gram Panchayath Birth Certificate Application-ಜನನ-ಮರಣ ನೋಂದಣಿ ಮಾಡಲು ಗ್ರಾಮ ಪಂಚಾಯತಿಯಲ್ಲಿ ಅವಕಾಶ:

ಗ್ರಾಮ ಪಂಚಾಯತಿ ಕಾರ್ಯದರ್ಶಿಯವರನ್ನು ಇನ್ನು ಮುಂದೆ ಜನನ-ಮರಣ ಪ್ರಮಾಣ ಪತ್ರವನ್ನು ನೋಂದಣಿ ಮಾಡಿಕೊಳ್ಳಲು ಅವಕಾಶ ಒದಗಿಸಲಾಗಿದ್ದು ಸಾರ್ವಜನಿಕರು ಜನನ-ಮರಣ ಪ್ರಮಾಣ ಪತ್ರಗಳನ್ನು ಪಡೆಯಲು ಇನ್ನು ಮುಂದೆ ನಿಮ್ಮ ಗ್ರಾಮ ಪಂಚಾಯತಿಯಲ್ಲೇ ಅರ್ಜಿ ಸಲ್ಲಿಸಬಹುದು.

HOW TO APPLY-ನೋಂದಣಿ ಪ್ರಕ್ರಿಯೆ ಹೇಗೆ?

ಜನನ-ಮರಣದ ನೋಂದಣಿಯನ್ನು ಇನ್ನು ಮುಂದೆ ಗ್ರಾಮ ಪಂಚಾಯತಿಯಲ್ಲೇ ಆರಂಭಿಸುವ ಪ್ರಕ್ರಿಯೆ(ಜುಲೈ1)ರಿಂದ ಜಾರಿಗೆ ಬರಲಿದೆ.

ಗ್ರಾಮೀನ ಪ್ರದೇಶದಲ್ಲಿ ಜನನ-ಮರಣ ನೋಂದಣಿ ವ್ಯವಸ್ಥೆಗೆ ಬಲ ತುಂಬುವ ಜೊತೆಗೆ 30 ದಿನದೊಳಗೆ ನೋಂದಾಯಿಸಲು ಅನುಕೂಲವಾಗುವಂತೆ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ-ಮರಣ ಉಪನೋಂದಣಾಧಿಕಾರಿಗಳನ್ನಾಗಿ ಸರ್ಕಾರ ನೇಮಿಸಿದೆ.

APPLICATION FEES-ಶುಲ್ಕದ ವಿವರ ಹೀಗಿದೆ:

ಈ ಕುರಿತು ಜನನ-ಮರಣಗಳ ಮುಖ್ಯ ನೋಂದಣಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದು, ಪಂಚಾಯತಿಯಲ್ಲಿ ಜನನ-ಮರಣಗಳಾದ 21 ದಿನಗಳ ಒಳಗೆ ನೋಂದಣಿ ಮಾಡಿಕೊಂಡು ಉಚಿತವಾಗಿ ಪ್ರಮಾಣ ಪತ್ರ ವಿತರಿಸಬೇಕು.

21 ದಿನಗಳ ಬಳಿಕ 30 ದಿನದೊಳಗೆ ನೋಂದಾಯಿಸಿದರೆ ರೂ.2 ಶುಲ್ಕ ವಿಧಿಸಲಾಗುತ್ತದೆ.

30ದಿನಗಳ ತರುವಾಯ ಕಾರ್ಯದರ್ಶಿಗಳು ನೋಂದಣಿ ಮಾಡಬಾರದು ಎಂದು ಸೂಚಿಸಿದೆ.

ಜನನ-ಮರಣಗಳು ನಡೆದು 30 ದಿನಗಳ ತರುವಾಯ ಮಾಹಿತಿ ನೀಡುವ ಜನನ-ಮರಣಗಳ ನೋಂದಣಿ ಅಧಿಕಾರವನ್ನು ಆಯಾ ಗ್ರಾಮಗಳ ಗ್ರಾಮ ಆಡಳಿತ ಅಧಿಕಾರಿಗೆ ನೀಡಲಾಗಿದೆ.

ಜನರು ಅಗತ್ಯ ದಾಖಲೆಗಳೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಬೇಕು. ತಹಶೀಲ್ದಾರ್‌ ಅವರ ಲಿಖಿತ ಅನುಮತಿ ಪಡೆದು ನೋಂದಣಿ ಮಾಡಬೇಕು ಎಂದು ಸೂಚಿಸಲಾಗಿದೆ.

30ದಿನಗಳ ಬಳಿಕ ಒಂದು ವರ್ಷದೊಳಗಾದರೆ ತಹಶೀಲ್ದಾರರ ಪತ್ರ ಲಗತ್ತಿನ ಜೊತೆ ರೂ.5 ಶುಲ್ಕ.

1ವರ್ಷನಂತರವಾದರೆ ಮೊದಲನೇ ವರ್ಗದ ದಂಡಾಧಿಕಾರಿ ಅಥವಾ ಮಹಾಪ್ರಾಂತ ದಂಡಾಧಿಕಾರಿ ಆದೇಶ ಪತ್ರ ಲಗತ್ತು ರೂ.10ಶುಲ್ಕ.

ಇತ್ತೀಚಿನ ಸುದ್ದಿಗಳು

Related Articles