ಧರ್ಮಸ್ಥಳದ ಹತ್ತಿರ ಉಜಿರೆ ರುಡ್ ಸೆಟ್ ದಕ್ಷಿಣ ಕನ್ನಡ(ಮಂಗಳೂರು) ಜಿಲ್ಲೆ ವತಿಯಿಂದ ಸ್ವ-ಉದ್ಯೋಗ ಆಕಾಂಕ್ಷಿಗಳಿಗೆ ಉಚಿತ ಕಂಪ್ಯೂಟರ್ ಡಿಟಿಪಿ ಮತ್ತು ವಿವಿಧ ಬಗೆಯ ಸ್ವ-ಉದ್ಯೋಗ ಪ್ರಾರಂಭಿಸಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ತರಬೇತಿಗೆ ಅರ್ಜಿ ಕರೆಯಲಾಗಿದೆ.
ಈ ಒಂದು ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ವಿವಿಧ ಬಗೆಯ ತರಬೇತಿ ನೀಡುವುದರ ಜೊತೆಗೆ ಸ್ವ-ಉದ್ಯೋಗವನ್ನು ಆರಂಭಿಸಲು ಬೇಕಾಗುವ ಬಂಡವಾಳಕ್ಕೆ ಆರ್ಥಿಕವಾಗಿ ನೆರವಾಗಲು ಬ್ಯಾಂಕ್ ಗಳಿಂದ ಸಾಲ ಪಡೆಯಲು ಸೂಕ್ತ ಮಾರ್ಗದರ್ಶನವನ್ನು ಸಹ ನೀಡಲಾಗುತ್ತದೆ.
ಉಜಿರೆ ರುಡ್ ಸೆಟ್ ಸಂಸ್ಥೆ,ದಕ್ಷಿಣ ಕನ್ನಡ(ಮಂಗಳೂರು)(ಗ್ರಾಮೀಣಾಭಿವೃದ್ಧಿ ಹಾಗೂ ಸ್ವ ಉದ್ಯೋಗ ತರಬೇತಿ ಸಂಸ್ಥೆ) ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಹಾಗೂ ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ನಡೆಯುತ್ತಿದ್ದು, ನಮ್ಮ ಸಂಸ್ಥೆಯಲ್ಲಿ ದಿನಾಂಕ 19/05/2025 ರಿಂದ 02/07/2025 (45 ದಿನಗಳ) ವರೆಗೆ ಕಂಪ್ಯೂಟರ್ ಡಿಟಿಪಿ ಉಚಿತ ತರಬೇತಿಯನ್ನು ನಡೆಸಲಾಗುತ್ತಿದೆ. ಆದ್ದರಿಂದ ಈ ತರಬೇತಿಯಲ್ಲಿ ಭಾಗವಹಿಸಲು ಆಸಕ್ತರು ಅರ್ಜಿ ಸಲ್ಲಿಸಲು ಸಂಸ್ಥೆಯ ನಿರ್ದೇಶಕರು ಪ್ರಕಟಣೆ ಹೊರಡಿಸಲಾಗಿದೆ.
ಇದನ್ನೂ ಓದಿ:ಸ್ವ-ಉದ್ಯೋಗ ಸ್ಥಾಪನೆಗೆ ಕೃಷಿ ಇಲಾಖೆವತಿಯಿಂದ ಸಹಾಯಧನ ಸಿಗಲಿದೆ!
Free training details-ಈ ಕೆಳಗೆ ತಿಳಿಸಿದ ತರಭೇತಿಗಳು ಉಚಿತವಾಗಿ ನಡೆಯಲಿವೆ.
1.ಸಿಸಿ ಟಿವಿ ಕ್ಯಾಮೆರಾ ಇನ್ಸ್ಟಾಲೆಷನ್(13 ದಿನಗಳು)
2. ಬೇಕರಿ ಆಹಾರ ತಯಾರಿಕೆ (1 ತಿಂಗಳು)
3.ಅಣಬೆ ಬೇಸಾಯ (10 ದಿನಗಳು)
4.ಹಪ್ಪಳ ಮತ್ತು ಚಿಪ್ಸ ತಯಾರಿಕೆ (10 ದಿನಗಳು)
5.ಬ್ಯೂಟಿಸಿಯನ್ ತರಬೇತಿ (1 ತಿಂಗಳು)
6. ಫಾಸ್ಟ ಫುಡ್ ತಯಾರಿಕೆ (10 ದಿನಗಳು)
7.ಕಂಪ್ಯೂಟರ್ ಟ್ಯಾಲಿ (30ದಿನಗಳು)
ಇದಲ್ಲದೇ ಇನ್ನೂ ಅನೇಕ ಯುವಕರು ಮತ್ತು ಯುವತಿಯರಿಗೆ ಸ್ವ-ಉದ್ಯೋಗವನ್ನು ಕೈಗೊಳ್ಳುವಂತಹ ತರಬೇತಿಗಳನ್ನು ನೀಡಲಾಗುತ್ತದೆ.
How to join training- ತರಬೇತಿಯನ್ನು ಯಾರೆಲ್ಲ ಸೇರಬಹುದು?
1.ಅಭ್ಯರ್ಥಿಯು ನಗರ/ಗ್ರಾಮೀಣ ಪ್ರದೇಶದವರಾಗಿರಬೇಕು.
2.ವಯೋಮಿತಿ 18 ರಿಂದ 45 ವಯಸ್ಸಿನ ಒಳಗಿರಬೇಕು.
ವಿಶೇಷ ಸೂಚನೆ: ತರಬೇತಿಯು ಸಂಪೂರ್ಣ ಊಟ ವಸತಿಯೊಂದಿಗೆ ಉಚಿತವಾಗಿರುತ್ತದೆ. ಹಾಗೂ ಸಂಸ್ಥೆಯ ಸಮವಸ್ತ್ರ ಉಚಿತವಾಗಿ ಕೊಡಲಾಗುವುದು ಮತ್ತು ತರಬೇತಿಯ ಕೊನೆಯ ದಿನ ಪ್ರಮಾಣ ಪತ್ರ ನೀಡಲಾಗುತ್ತದೆ.
ಇದನ್ನೂ ಓದಿ:ಪಡಿತರ ಚೀಟಿದಾರರು ಕಡ್ಡಾಯವಾಗಿ ಇಕೆವೈಸಿ ಮಾಡಿಸಿ ಇಲ್ಲವಾದಲ್ಲಿ ರೇಷನ್ ಕಾರ್ಡ್ ರದ್ದಾಗಲಿದೆ!
APPLY address-ಅರ್ಜಿ ಸಲ್ಲಿಸಲು ಸಂಪರ್ಕಿಸಬೇಕಾದ ವಿಳಾಸ:
ರುಡ್ ಸೆಟ್ ಸಂಸ್ಥೆ
ಉಜಿರೆ,ದಕ್ಷಿಣ ಕನ್ನಡ (ಮಂಗಳೂರು)
Near ಧರ್ಮಸ್ಥಳ-574240
08256236404/9591044014/9591044014/9980885900
9902594791.Whatspp ಮೂಲಕ ಅರ್ಜಿ ಸಲ್ಲಿಸಲು:6364561982
Online ಮೂಲಕ ಅರ್ಜಿ ಸಲ್ಲಿಸಲು:www.rudsetujire.com