Monday, June 16, 2025

DAP fertilizer- DAP ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಕೆಗೆ ಕೃಷಿ ಇಲಾಖೆ ಸೂಚನೆ !

ನಮಸ್ಕಾರ ರೈತರೇ, ರಾಜ್ಯದೆಲ್ಲೆಡೆ ಮುಂಗಾರು ಕೃಷಿ ಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು DAP ರಸಗೊಬ್ಬರದ ಬದಲಿಗೆ ಸಂಯುಕ್ತ ರಸಗೊಬ್ಬರವನ್ನು ಬಳಸುವಂತೆ ಕೃಷಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.

ಸಸ್ಯಗಳ ಬೆಳವಣಿಗೆಗೆ 17 ಪೋಷಕಾಂಶಗಳ ಅಗತ್ಯವಿರುತ್ತದೆ. ಅವುಗಳಲ್ಲಿ  ಗಾಳಿ ಮತ್ತು ನೀರಿನ ಮೂಲಕ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಉಳಿದ 14 ಪೋಷಕಾಂಶಗಳಿಗಾಗಿ ಸಂಯುಕ್ತ ರಸಗೊಬ್ಬರ ಬಳಕೆಗೆ ಸಲಹೆ ನೀಡಲಾಗಿದೆ.

ಸಾರಜನಕ, ರಂಜಕ, ಪೋಟ್ಯಾಷ್‌, ಕ್ಯಾಲ್ಸಿಯಂ, ಮೆಗ್ನಿಷಿಯಂ, ಗಂಧಕ, ಕಬ್ಬಿಣ, ಜಿಂಕ್‌, ಬೋರಾನ್‌, ತಾಮ್ರ, ಮ್ಯಾಂಗನೀಸ್‌, ಮಾಲಿಬ್ಡಿನಂ, ಕ್ಲೊರಿನ್‌ ಹಾಗೂ ನಿಕ್ಕಲ್‌ ಅಗತ್ಯವಿದ್ದು, ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶದ ಕೊರತೆ ಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ. ಆದ್ದರಿಂದ ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ, ಹೊಂಡಿ ಇತ್ಯಾದಿ ಸಾವಯವ ಗೊಬ್ಬರ ಬಳಕೆ ಮಾಡುವಂತೆ ಸೂಚಿಸಿದೆ.

ರೈತರು ಯೂರಿಯಾ ಮತ್ತು DAP ಯನ್ನು ಹೆಚ್ಚಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ. ಆದರೆ ಬೆಳೆಗಳಿಗೆ ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೊಟ್ಯಾಷ್‌ ಲಭ್ಯವಿರುವುದಿಲ್ಲ.

ಬೆಳೆಗಳಿಗೆ ಶಿಫಾರಸ್ಸಿನಂತೆ ಸಮತೋಲನಾತ್ಮಕ ರಸಗೊಬ್ಬರಗಳ ಬಳಕೆಯನ್ನು ಉತ್ತೇಜಿಸಿ, ಸಂಯುಕ್ತ ರಸಗೊಬ್ಬರಗಳನ್ನು ಬಳಸುವುದರಿಂದ ಸರಿದೂಗಿಸಬಹುದಾಗಿರುತ್ತದೆ. ಅಲ್ಲದೇ, ರೈತರು ರಸಗೊಬ್ಬರವನ್ನು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೆ, DAP ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒಂದಗಿಸುವ 20:20:0:13 ಹಾಗೂ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26, 12:32:16, 22:22:11, 17:17:17, 14:28:14, 19:19:19, 20:10:10, 14:35:14 ರಸಗೊಬ್ಬರಗಳನ್ನು ಸಹ ಬಳಸಬಹುದಾಗಿದೆ ಎಂದು ಕೃಷಿ ಇಲಾಖೆಯಿಂದ ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಅಥವಾ ರೈತ ಸಂಪರ್ಕ ಕೇಂದ್ರವನ್ನು ಭೇಟಿ ಮಾಡಿ ವಿಚಾರಿಸಬಹುದು.

ಇತ್ತೀಚಿನ ಸುದ್ದಿಗಳು

Related Articles