Monday, September 16, 2024

Drought relief Proposal: ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ: ರಾಜ್ಯ ಸರ್ಕಾರ

ಆತ್ಮೀಯ ರೈತ ಬಾಂದವರೇ ಈ ವರ್ಷ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ಭೀಕರ ಬರಗಾಲ ಆಗಿರುವ ವಿಚಾರ ಎಲ್ಲರಿಗೂ ಗೊತ್ತಿರುವ ಸಂಗತಿ. ಈ ಬರಗಾಲ ನಿರ್ವಹಣೆಗೆ ರಾಜ್ಯ ಸರ್ಕಾರ ಹಲವಾರು ಕ್ರಮಗಳು ಕೈಗೊಂಡದೆ.

ರಾಜ್ಯ ಸರ್ಕಾರ ಬರ ನಿರ್ವಹಣೆ ಕೈಗೊಂಡ ಕ್ರಮಗಳು:
ಬರ ನಿರ್ವಹಣೆ ಕಾರ್ಯಕ್ಕೆ 31 ಜಿಲ್ಲೆಗಳಿಗೆ
324 ಕೋಟಿ ರೂ ಬಿಡುಗಡೆ.’

ಮುಂದಿನ ದಿನಗಳಲ್ಲಿ ಕುಡಿಯುವ ನೀರಿ ಪೂರೈಕೆ, ಗೋಶಾಲೆ, ಮೇವಿನ ಬ್ಯಾಂಕ್ ನಿರ್ವಹಣೆ ಇತರೆ ತುರ್ತು ಬರ ನಿರ್ವಹಣೆ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು 31 ಜಿಲ್ಲೆಗಳಿಗೆ 324 ಕೋಟಿ ರೂ. ಗಳನ್ನು ಕಳೆದ ಅಕ್ಟೋಬರ್ ಮಾಹೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ.

ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ಆರ್‌ಬಿಐ ನಿರ್ದೇಶನದಂತೆ ರೈತರ ಬೆಳೆ ಸಾಲದ ಮರುಪಾವತಿ ಅವಧಿಯನ್ನು ಅಲ್ಪಾವಧಿಯಿಂದ ಮಧ್ಯಾವಧಿ ಅಥವಾ ದೀರ್ಘಾವಧಿವರೆಗೆ ರೀ ಸ್ಟರ್ಕ್ಚರ್ ಮಾಡಲು ಎಸ್‌ಎಲ್‌ಬಿಸಿಗೆ ಸೂಚಿಸಲಾಗಿದೆ.

ಇದನ್ನೂ ಓದಿ: ಬೆಳೆಹಾನಿ, ಬೆಳೆವಿಮೆ ,ಮತ್ತು ಪಿ ಎಂ ಕಿಸಾನ್ ಹಣ ಜಮಾ ಆಗಲು NPCI Active ಕಡ್ಡಾಯ ಚೆಕ್ ಮಾಡಿ ಈ ಲಿಂಕ್ ಮೇಲೆ ಓತ್ತಿ ಪರಿಕ್ಷೀಸಿಕೊಳ್ಳಿ.

ರಾಜ್ಯದಲ್ಲಿ 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಲಾಗಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಜಂಟಿ ಸಮೀಕ್ಷೆ ವರದಿಯನ್ವಯ 46.11 ಲಕ್ಷ ಹೆಕ್ಟೇರ್ ಕೃಷಿ ಹಾಗೂ 2.06 ಲಕ್ಷ ಹೆಕ್ಟೇರ್ ತೋಟಗಾರಿಕೆ ಸೇರಿದಂತೆ ಒಟ್ಟು 48.17 ಲಕ್ಷ ಹೆಕ್ಟೇರ್ ಬೆಳೆಹಾನಿಯಾಗಿದ್ದು, ಬೆಳೆಹಾನಿ ಇನ್‌ಪುಟ್ ಸಬ್ಸಿಡಿಗೆ ಎನ್‌ಡಿಆರ್‌ಎಫ್ ಅಡಿಯಲ್ಲಿ ರೂ.4663.12 ಕೋಟಿ ರೂ.ಗಳ ಆರ್ಥಿಕ ನೆರವು ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.

ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಎನ್‌ಡಿಆರ್‌ಎಫ್ ಅನುದಾನವನ್ನು ನಿರೀಕ್ಷಿಸಿ ಎಸ್‌ಡಿಆರ್‌ಎಫ್/ಎನ್‌ಡಿಆರ್‌ಎಫ್ SDRF/NDRFಮಾರ್ಗಸೂಚಿಗಳ ಪ್ರಕಾರ ಬೆಳೆಹಾನಿ ಪರಿಹಾರದ ಮೊಲದನೇ ಕಂತಾಗಿ ಬೆಳೆಹಾನಿ ಪರಿಹಾರವಾಗಿ ಅರ್ಹತೆಯ ಅನುಗುಣವಾಗಿ 2000ರೂ. ರೈತರಿಗೆ ಪಾವತಿಸಲು ತೀರ್ಮಾನಿಸಲಾಗಿದೆ.

ಪಶು ಸಂಗೋಪನೆ ಇಲಾಖೆಯ ವರದಿಯನುಸಾರ ಕೋಲಾರ ಜಿಲ್ಲೆಯಲ್ಲಿ 2.23 ಲಕ್ಷ ಟನ್ ಮೇವು ಲಭ್ಯವಿದೆ. ಎಸ್‌ಡಿಆರ್‌ಎಫ್ ಅಡಿಯಲ್ಲಿ ಮೇವಿನ ಕಿರು ಪೊಟ್ಟಣಗಳನ್ನು ನಿಯಮಾನುಸಾರ ಖರೀದಿಸಲು 20 ಕೋಟಿ ರೂ. ಗಳನ್ನು ಪಶು ಸಂಗೋಪನೆ ಇಲಾಖೆಗೆ ಬಿಡುಗಡೆಗೊಳಿಸಲಾಗಿದೆ. 31 ಜಿಲ್ಲೆಗಳಿಗೆ ಬಿಡುಗಡೆ ಮಾಡಿದ 324 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ ಪೈಕಿ ಕೋಲಾರ ಜಿಲ್ಲೆಗೆ 9 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಈ ಜಿಲ್ಲೆಯ 4 ಗ್ರಾಮಗಳಲ್ಲಿ ಖಾಸಗಿ ಬೋರವೆಲ್ ಮೂಲಕ ಬಾಡಿಗೆ ಆಧಾರದ ಮೇಲೆ ನೀರು ಪೂರೈಸಲಾಗುತ್ತಿದೆ.

ಮುಖ್ಯಮಂತ್ರಿ Siddaramaiah ಅವರು ನವದೆಹಲಿಯಲ್ಲಿ ಪ್ರಧಾನಮಂತ್ರಿ Narendra Modi ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿರುತ್ತಾರೆ.

ಇದರಲ್ಲಿ 4,663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ, 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.


ರಾಜ್ಯದಲ್ಲಿ 236 ತಾಲೂಕುಗಳ ಪೈಕಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಎನ್‌.ಡಿ.ಆರ್‌.ಎಫ್. NDRFನಿಂದ 4,663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ.

ಇದನ್ನೂ ಓದಿ: Krishi Bhagya Scheme 2023-24: 100 ಕೋಟಿ ವೆಚ್ಚ ದಲ್ಲಿ “ಕೃಷಿ ಭಾಗ್ಯ” ಯೋಜನೆ ಮರುಜಾರಿ:

ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ. ಅಲ್ಲದೆ, ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್‌ Fruits ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್‌ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿರುತ್ತಾರೆ. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದ್ದೇನೆ.

ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್‌ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್‌ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್‌.ಡಿ.ಆರ್.ಎಫ್. ಅಡಿ 17,901 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ12,577 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್‌ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಪ್ರಧಾನ ಮಂತ್ರಿಗಳಿಗೆ ಮನವರಿಕೆ ರಾಜ್ಯದ ಮುಖ್ಯಮಂತ್ರಿಗಳು ಮಾಡಿಕೊಟ್ಟಿರುತ್ತಾರೆ.

ಇದನ್ನೂ ಓದಿ: ಜಲಾನಯನ ಅಭಿವೃದ್ದಿ ಇಲಾಖೆ ವತಿಯಿಂದ Watershed scheme: 20 ಲಕ್ಷ ವರೆಗಿನ ಸಾಲಕ್ಕೆ ಶೇ. 4 % ಬಡ್ಡಿ ಸಹಾಯಧನ ಯೋಜನೆ:

ಬರದಿಂದ ಸಂಕಷ್ಟದಲ್ಲಿರು ಕರ್ನಾಟಕದ ರೈತರ ಹಿತರಕ್ಷಣೆಯ ದೃಷ್ಟಿಯಿಂದ ಆದಷ್ಟು ಬೇಗ ಪರಿಹಾರ ಬಿಡುಗಡೆ ಮಾಡುವಂತೆ ಕೋರಿರುತ್ತಾರೆ.

ಇತ್ತೀಚಿನ ಸುದ್ದಿಗಳು

Related Articles