Saturday, October 5, 2024

Education Loan Facility : 1ಲಕ್ಷ ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ:

2023-24 ನೇ ಸಾಲಿನ ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನ:
ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಹಾಗೂ ಈ ಯೋಜನೆಯಡಿ ಸಾಲ ಸೌಲಭ್ಯವನ್ನು ಪಡೆಯುವವರು ಆನೈಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿರುತ್ತದೆ.

Arya Vaishya Community Eligibility of Education Loan Scheme: ಅರಿವು ಶೈಕ್ಷಣಿಕ ಸಾಲ ಯೋಜನೆಯ ಅರ್ಹತೆಗಳು:

ಇದನ್ನೂ ಓದಿ: 7 ಲಕ್ಷದವರೆಗೆ ಪಿಕ್‌ಅಪ್ ವ್ಯಾನ್ ಖರೀದಿಸಲು ಸಾಲ ಸೌಲಭ್ಯ:

ಅರಿವು ಶೈಕ್ಷಣಿಕ ಸಾಲ ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಮುಖ್ಯವಾಗಿ ಸಿ.ಇ.ಟಿ, ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿಯಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1,00,000/-ಗಳ ಸಾಲವನ್ನು ಶೇ.2% ಬಡ್ಡಿದರದಲ್ಲಿ ಶೈಕ್ಷಣಿಕ ಸಾಲವನ್ನು ನೀಡಲಾಗುವುದು.


ಈ ಯೋಜನೆಯಡಿ ಸಾಲ ತೆಗೆದುಕೊಂಡ ಅಭ್ಯರ್ಥಿಗಳಿಗೆ ವ್ಯಾಸಂಗ ಪೂರ್ಣಗೊಂಡ ನಂತರ 4 ತಿಂಗಳ ವಿರಾಮಾವಧಿ ಇರುತ್ತದೆ.

ಅರಿವು ಶೈಕ್ಷಣಿಕ ಸಾಲ ಈ ಯೋಜನೆಯಡಿ ಸಾಲವನ್ನು 36 ವಾರ್ಷಿಕ ಕಂತುಗಳಲ್ಲಿ ಮರುಪಾವತಿಸಬೇಕು.
ಅರಿವು ಶೈಕ್ಷಣಿಕ ಸಾಲ ಈ ಯೋಜನೆಯಡಿ ಅರ್ಜಿದಾರರು ಅರ್ಜಿ ಸಲ್ಲಿಸಲು ಸಾಮಾನ್ಯವಾಗಿ 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು.


ಅರಿವು ಶೈಕ್ಷಣಿಕ ಸಾಲ ಈ ಯೋಜನೆಯಡಿ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ. 6,00,000/- ಗಳ ಮಿತಿಯೊಳಗಿರಬೇಕು.

Arya Vaishya Community General Eligibility For Applying : ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆ:

ಇದನ್ನೂ ಓದಿ: 2023-24 ನೇ ಸಾಲಿನ ಕೃಷಿ ಇಲಾಖೆಯಲ್ಲಿ ದೊರೆಯುವ ಉಪಕರಣಗಳ ದರಪಟ್ಟಿ ವಿವರ :

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು,
ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು),
ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು,


ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಹಾಗೂ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿಬೇಕು,

ವಿಶೇಷವಾಗಿ ಈ ಯೋಜನೆಗೆ ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33%, ಮಿಸಲಾತಿ ನೀಡಲಾಗಿದೆ.
ವಿಕಲಚೇತನರಿಗೆ ಶೇ.5%, ಮೀಸಲಾತಿಯನ್ನು ನೀಡಲಾಗಿರುತ್ತದೆ.
ತೃತೀಯ ಲಿಂಗಗಳಿಗೆ ಶೇ.5% ಮೀಸಲಾತಿ ನೀಡಲಾಗಿದೆ.
ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಒಂದು ಕುಟುಂಬದಲ್ಲಿ ಇಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

ಇದನ್ನೂ ಓದಿ: ನರೇಗಾ ಯೋಜನೆಯಡಿ ನಿಮ್ಮ ಗ್ರಾಮಕ್ಕಾಗಿ ಮತ್ತು ರೈತ ಸಮುದಾಯಕ್ಕೆ 1.35 ಲಕ್ಷದ ಕಾಮಗಾರಿ:

ಹೆಚ್ಚಿನ ಮಾಹಿತಿಗಾಗಿ ನಿಗಮದ ದೂರವಾಣಿ ಸಂಖ್ಯೆ 9448451111 ಹಾಗೂ ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕರ ಕಛೇರಿ ವಿಳಾಸಗಳನ್ನು ಹಾಗೂ ಎಲ್ಲಾ ವಿವರಗಳನ್ನು kacdc.karnataka.gov.in ವೆಬ್‌ಸೈಟ್‌ನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಇ.ಸಂಪತ್ ಕುಮಾರ್ ತಿಳಿಸಿದ್ದಾರೆ.

Documents required to apply:ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:
ಸಿ.ಇ.ಟಿ ಪ್ರವೇಶ ಸಂಖ್ಯೆ ಪ್ರತಿ.
ಕಳೆದ ವರ್ಷದ ಅಂಕಪಟ್ಟಿ
ಪ್ರಾಂಶುಪಾಲರು ದೃಢೀಕರಿಸಿದ ಪ್ರಸ್ತುತ ಸಾಲಿನ ವ್ಯಾಸಂಗ ಪ್ರಮಾಣ ಪತ್ರ.
ಪ್ರಾಂಶುಪಾಲರು ದೃಢೀಕರಿಸಿದ ಪೂರ್ಣ ವ್ಯಾಸಂಗದ ಫೀ ಸ್ಟ್ರಕ್ಚರ್ ಪ್ರತಿ.
ಕಾಲೇಜಿನಲ್ಲಿಯೇ ಹಾಸ್ಟೆಲ್ ಸೌಲಭ್ಯ ಪಡೆದಿದ್ದಲ್ಲಿ ಪ್ರಾಂಶುಪಾಲರು ಅಥವಾ ಹಾಸ್ಟೆಲ್ ವಾರ್ಡನ್ ರವರಿಂದ ದೃಢೀಕರಣ ಪ್ರತಿ

ಸಲ್ಲಿಸಬೇಕಾದ ದಾಖಲೆಗಳು (500 KB ಒಳಗಿರಬೇಕು)

Last date to apply: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :
ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ.

Application Website link:ಅರ್ಜಿ ಸಲ್ಲಿಸುವ ಜಾಲತಾಣ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ kacdc.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಇತ್ತೀಚಿನ ಸುದ್ದಿಗಳು

Related Articles