Thursday, September 19, 2024

Free CCTV Installation training-ಸ್ವ-ಉದ್ಯೋಗ ಕೈಗೊಳ್ಳಲು ಸಿಸಿ ಕ್ಯಾಮೆರಾ ಅಳವಡಿಸುವಿಕೆ ಮತ್ತು ದುರಸ್ಥಿ ಉಚಿತ ತರಬೇತಿ! ಆಸಕ್ತರಿಂದ ಅರ್ಜಿ ಆಹ್ವಾನ.

ರುಡ್ ಸೆಟ್ ದಕ್ಷಿಣ ಕನ್ನಡ(ಮಂಗಳೂರು) ಜಿಲ್ಲೆವತಿಯಿಂದ ಉಚಿತ ವಸತಿ-ಊಟ ಸಹಿತ ವಿವಿಧ ಬಗೆಯ ಸ್ವ-ಉದ್ಯೋಗ ಪ್ರಾರಂಭಿಸಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ವಿವಿಧ ಬಗೆಯ ತರಬೇತಿ ನೀಡುವುದರ ಜೊತೆಗೆ ಸ್ವ-ಉದ್ಯೋಗವನ್ನು ಪ್ರಾರಂಭಿಸಲು ಆರಂಭಿಕ ಹಂತದಲ್ಲಿ ಬೇಕಾಗುವ ಬಂಡವಾಳಕ್ಕೆ ಆರ್ಥಿಕವಾಗಿ ನೆರವಾಗಲು ಬ್ಯಾಂಕ್ ಗಳಿಂದ ಹೇಗೆ ಸಾಲ ಪಡೆಯಬಹುದು ಎಂದು ಸೂಕ್ತ ಮಾರ್ಗದರ್ಶನವನ್ನು ಸಹ ನೀಡಲಾಗುತ್ತದೆ.

ರುಡ್ ಸೆಟ್ ಸಂಸ್ಥೆ,ದಕ್ಷಿಣ ಕನ್ನಡ(ಮಂಗಳೂರು)(ಗ್ರಾಮೀಣಾಭಿವೃದ್ಧಿ ಹಾಗೂ ಸ್ವ ಉದ್ಯೋಗ ತರಬೇತಿ ಸಂಸ್ಥೆ) ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಹಾಗೂ ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ನಡೆಯುತ್ತಿದ್ದು, ನಮ್ಮ ಸಂಸ್ಥೆಯಲ್ಲಿ ದಿನಾಂಕ 05/ಅಗಷ್ಟ/2024 ರಿಂದ 17/ಅಗಷ್ಟ/2024 ರವರೆಗೆ CCTV Installation training ಈ ಉಚಿತ ತರಬೇತಿಯನ್ನು ಆಯೋಜಿಸಲಾಗುತ್ತಿದೆ. ಆದ ಕಾರಣ ಈ ತರಭೇತಿಯಲ್ಲಿ ಭಾಗವಹಿಸಲು ಇಚ್ಚಿಸುವವರು ಅರ್ಜಿ ಸಲ್ಲಿಸಲು ಸಂಸ್ಥೆಯ ನಿರ್ದೇಶಕರು ಪ್ರಕಟಣೆ ಹೊರಡಿಸಲಾಗಿದೆ.

ಇದನ್ನೂ ಓದಿ: Fid(ರೈತರ ನೋಂದಣಿ) ಮಾಡಿದ್ದರೂ ಬೆಳೆ ವಿಮೆಯಲ್ಲಿ ಸರ್ವೇ ನಂಬರ್ ಕಾಣಿಸುತ್ತಿಲ್ಲವೇ ಇಲ್ಲಿದೆ ಕಾರಣ!

Free training details-ಈ ಕೆಳಗೆ ತಿಳಿಸಿದ ತರಭೇತಿಗಳು ಉಚಿತವಾಗಿ ನಡೆಯಲಿವೆ.

1.ಸಿಸಿ ಟಿವಿ ಕ್ಯಾಮೆರಾ ಇನ್ಸ್ಟಾಲೆಷನ್(13 ದಿನಗಳು)

2.ಫಾಸ್ಟ ಫುಡ್ ತಯಾರಿಕೆ (10 ದಿನಗಳು)

3.ಅಣಬೆ ಬೇಸಾಯ (10 ದಿನಗಳು)

4.ಮೋಟಾರ್ ರಿವೈಂಡಿಗ್ ವರ್ಕ್ಸ್ (1 ತಿಂಗಳು)

5.ಬ್ಯೂಟಿಸಿಯನ್ ತರಬೇತಿ (1 ತಿಂಗಳು)

6.ಬೇಕರಿ ಆಹಾರ ತಯಾರಿಕೆ (1 ತಿಂಗಳು)

ಇದಲ್ಲದೇ ಇನ್ನೂ ಹಲವಾರು ಸ್ವ-ಉದ್ಯೋಗವನ್ನು ಕೈಗೊಳ್ಳುವಂತಹ ತರಬೇತಿಗಳನ್ನು ನೀಡಲಾಗುತ್ತದೆ.

How to join training- ತರಬೇತಿಯನ್ನು ಯಾರೆಲ್ಲ ಸೇರಬಹುದು?

1.ಅಭ್ಯರ್ಥಿಯು ಗ್ರಾಮೀಣ ಪ್ರದೇಶದವರಾಗಿರಬೇಕು.

2.ವಯೋಮಿತಿ 19 ರಿಂದ 45 ವಯಸ್ಸಿನ ಒಳಗಿರಬೇಕು.

3.ಅಭ್ಯರ್ಥಿಯು ಗ್ರಾಮೀಣ ಭಾಗದ ಬಿಪಿಲ್ ಅಥವಾ ಅಂತ್ಯೋದಯ ಅಥವಾ ನರೇಗಾ ಜಾಬ್ ಕಾರ್ಡ್ ಹೊಂದಿರಬೇಕು.

ಇದನ್ನೂ ಓದಿ: ಕಿಸಾನ್ ಸಮ್ಮಾನ್ ರೂ.2000  ಹಣ ಬಂದಿಲ್ಲವೇ, ಇಲ್ಲಿವೇ ಕಾರಣಗಳು!

ವಿಶೇಷ ಸೂಚನೆ: ತರಬೇತಿಯು ಸಂಪೂರ್ಣ ಊಟ ವಸತಿಯೊಂದಿಗೆ ವಸತಿ ಸಹಿತ ಉಚಿತವಾಗಿರುತ್ತದೆ. ಮತ್ತು ತರಬೇತಿಯ ಕೊನೆಯ ದಿನ ಪ್ರಯಾಣ ಪತ್ರ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಸಂಪರ್ಕಿಸಬೇಕಾದ ವಿಳಾಸ:

ರುಡ್ ಸೆಟ್ ಸಂಸ್ಥೆ

ಉಜಿರೆ,ದಕ್ಷಿಣ ಕನ್ನಡ (ಮಂಗಳೂರು)

Near ಧರ್ಮಸ್ಥಳ-274240

08256236404/9591044014/9900793675/9448484237/9980885900/9902594791.

Whatspp ಮೂಲಕ ಅರ್ಜಿ ಸಲ್ಲಿಸಲು:6364561982

Online ಮೂಲಕ ಅರ್ಜಿ ಸಲ್ಲಿಸಲು:rudsetitraining.org

ಇತ್ತೀಚಿನ ಸುದ್ದಿಗಳು

Related Articles