ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪಟಾಪ್ ವಿತರಣೆ ಕಾರ್ಯಕ್ರಮ:
ಉದ್ದೇಶವೇನು? ಅರ್ಹತೆಯನ್ನು?ಅರ್ಜಿ ಸಲ್ಲಿಕೆ, ಮತ್ತು ದಾಖಲೆಗಳ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ.
ಆತ್ಮೀಯ ಪ್ರೀಯ ವಿದ್ಯಾರ್ಥಿ ಮಿತ್ರರೇ ವಿದ್ಯಾರ್ಥಿಗಳನ್ನು ಡಿಜಿಟಲ್ ಶಿಕ್ಷಣಕ್ಕೆ ಉತ್ತೇಜಿಸುವ ನಿಟ್ಟಿನಲ್ಲಿ ಮತ್ತು ಬಡ ಮಕ್ಕಳಿಗೆ ಓದಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರಗಳು ಇಲಾಖೆಗಳ ಮೂಖಾಂತರ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಮಾಡುವ ಕಾರ್ಯಕ್ರಮವನ್ನು ಜಾರಿಗೆ ತಂದಿರುತ್ತವೆ. ಈ ಒಂದು ಸುವರ್ಣ್ ಅವಕಾಶವನ್ನು ಅರ್ಹ ಎಲ್ಲಾ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಿ.
ಕೆಲ ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ (Free Laptop) ವಿತರಣೆಗೆ ಚಾಲನೆ ನೀಡುವಂತೆ ಸೂಚಿಸಿದ್ದರು. ಈ ಬೆನ್ನಲ್ಲೇ ಇದೀಗ ಪ್ರಥಮ ಪಿಯುಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಪಡೆಯೋದಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಗೃಹಲಕ್ಷೀ ಯೋಜನೆಯ ಒಂದನೇ ಕಂತಿನ ಅರ್ಹ ಅರ್ಜಿದಾರರ ಪಟ್ಟಿ!!
ಇದನ್ನೂ ಓದಿ: ” CM – ಮುಖ್ಯಮಂತ್ರಿ ಪರಿಹಾರ ನಿಧಿ’ಯಿಂದ ‘ಆರ್ಥಿಕ ನೆರವು’ ಪಡೆಯಬೇಕೆ?
ಉಚಿತ ಲ್ಯಾಪ್‌ಟಾಪ್ ಯೋಜನೆಯ ಉದ್ದೇಶ:
ಉಚಿತ ಲ್ಯಾಪ್‌ಟಾಪ್ ವಿತರಣಾ ಯೋಜನೆಯ ಮುಖ್ಯವಾದ ಉದ್ದೇಶವು ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಶಿಕ್ಷಣವನ್ನು ಉತ್ತೇಜಿಸುವುದು. ಆರ್ಥಿಕ ಬಿಕ್ಕಟ್ಟಿನಿಂದ ಸ್ವಂತವಾಗಿ ಪಡೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣವನ್ನು ನೀಡುವುದು ಕರ್ನಾಟಕ ಸರ್ಕಾರದ ಮತ್ತೊಂದು ಉದ್ದೇಶವಾಗಿದೆ. ಪ್ರಥಮ ಮತ್ತು ದ್ವೀತಿಯ ಪಿ.ಯು.ಸಿ ಓದುತ್ತಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಮತ್ತೊಂದು ಮಾರ್ಗವಾಗಿದೆ. ಈ ಯೋಜನೆಯು ತಂತ್ರಜ್ಞಾನ ಕ್ಷೇತ್ರದಲ್ಲಿ ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದಂತಾಗುತ್ತದೆ.
ಟ್ಯಾಬ್ ಪಡೆಯಬೇಕು ಎಂದುಕೊಂಡಿರುವ ಎಲ್ಲ ವಿದ್ಯಾರ್ಥಿಗಳಿಗೆ ಒಂದು ಸುವರ್ಣ ಅವಕಾಶವಾಗಿದೆ. ಹಾಗಾಗಿ ಇಂತಹ ಅವಕಾಶವನ್ನು ತಪ್ಪಿಸದೆ ಈ ಕೂಡಲೇ ಅರ್ಜಿಯನ್ನು ನೀಡಿ ಲ್ಯಾಪ್ ಟಾಪ್ ಪಡೆದುಕೊಳ್ಳಿ.
ಅರ್ಹತೆ:
ಈ ಬಗ್ಗೆ ಕಾರ್ಮಿಕ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕಾರ್ಮಿಕ ಇಲಾಖೆಯು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಲ್ಲಿ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ ಎಂದಿದೆ.
ಆಸಕ್ತ ವಿದ್ಯಾರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಆಯಾ ಜಿಲ್ಲಾ, ತಾಲೂಕು ಕಾರ್ಮಿಕ ಅಧಿಕಾರಿಗಳ ಕಚೇರಿಯಿಂದ ಪಡೆದು, ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ದಾಖಲೆಗಳು:
ಕಚೇರಿಯಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ
ಕಟ್ಟಡ ಕಾರ್ಮಿಕರ ನೋಂದಣಿ ಗುರುತಿನ ಚೀಟಿ,
ವಿದ್ಯಾರ್ಥಿಗಳ ಆಧಾರ್ ಕಾರ್ಡ್,
ವ್ಯಾಸಂಗ ದೃಢೀಕರಣ ಪತ್ರ,
ಎಸ್.ಎಸ್.ಎಲ್.ಸಿ. ದೃಢೀಕೃತ ಅಂಕಪಟ್ಟಿ,
ಇದುವರೆಗೆ ಯಾವುದೇ ಯೋಜನೆಯಡಿ ಲ್ಯಾಪ್‌ಟಾಪ್ ಪಡೆಯದಿರುವ ಬಗ್ಗೆ ಸ್ವಯಂದೃಢೀಕೃತ ಪತ್ರ ಇವುಗಳನ್ನು ಲಗತ್ತಿಸಿ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ವಿದ್ಯಾರ್ಥಿಗಳು ಮೇಲೆ ತಿಳಿಸಿದ ಎಲ್ಲಾ ದಾಖಲೆಗಳೊಂದಿಗೆ ಕಾರ್ಮಿಕ ಇಲಾಖೆಗೆ ಸೆ.15 ರೊಳಗಾಗಿ ಇಲಾಖಾ ಕಚೇರಿಗೆ ಸಲ್ಲಿಸುವಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಮೇಲೆ ನೀಡಲಾದ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಜಿಲ್ಲೆಯ ಕಾರ್ಮಿಕ ಇಲಾಖೆಗೆ ಭೇಟಿ ನೀಡಿ ಅಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಆನ್ನೈನ್ ಮುಖಾಂತರ ಸಲ್ಲಿಸುವ ಆಯ್ಕೆ ಇರುವುದಿಲ್ಲ. ವಿದ್ಯಾರ್ಥಿಯ ಅವಶ್ಯಕತೆ ಹಾಗೂ ದಾಖಲೆಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ಸಿದ್ಧಪಡಿಸಿ ಟ್ಯಾಬ್ ಗಳನ್ನು ವಿತರಣೆ ಮಾಡುತ್ತಾರೆ.