ಹೊಲಿಗೆ ಯಂತ್ರ ತರಬೇತಿಯನ್ನು(Sewing Machine Training) ಪಡೆದು ಸ್ವ-ಉದ್ಯೋಗವನ್ನು ಆರಂಭಿಸಲು ಆಸಕ್ತಿಯಿರುವ ಮಹಿಳಾ ಅಭ್ಯರ್ಥಿಗಳಿಗೆ ಉಚಿತ ತರಬೇತಿಯನ್ನು ನೀಡಲು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಕುಮಟಾ ಕೇಂದ್ರದಿಂದ ಒಂದು ತಿಂಗಳ ಉಚಿತ ಟೈಲರಿಂಗ್ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಮಹಿಳೆಯರಿಗೆ ತಮ್ಮ ಕಾಲ ಮೇಲೆ ತಾವು ನಿಂತು ಸ್ವಾವಲಂಬನೆ ಜೀವನವನ್ನು ನಡೆಸಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಹೊಲಿಗೆ ಯಂತ್ರಕ್ಕೆ(Holige Yantra) ಸಹಾಯಧನವನ್ನು ನೀಡಲು ಕೇಂದ್ರ ಮತ್ತು ರಾಜ್ಯ ಸರಕಾರದಿಂದ ವಿವಿಧ ಕಾರ್ಯಕ್ರಮಗಳಿದ್ದು, ಈ ಕುರಿತು ಉಪಯುಕ್ತ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ.
ಇದನ್ನೂ ಓದಿ: DBT Status Check- ಎಲ್ಲಾ ಯೋಜನೆಯ ಹಣದ ಜಮಾ ವಿವರ ತಿಳಿಯುವುದು ಇನ್ನು ಭಾರೀ ಸುಲಭ!
ಉಚಿತ ಹೊಲಿಗೆ ಯಂತ್ರ ತರಬೇತಿಗೆ ಎಲ್ಲಿ ಅರ್ಜಿ ಸಲ್ಲಿಸಬೇಕು? ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಹೊಲಿಗೆ ಯಂತ್ರವನ್ನು ಸಹಾಯಧನದಲ್ಲಿ ಪಡೆಯಲು ಯಾವೆಲ್ಲ ಯೋಜನೆಗಳು(Sewing Machine Subsidy Schemes) ಪ್ರಸ್ತುತ ಜಾರಿಯಲ್ಲಿವೆ ಇತ್ಯಾದಿ ಸಂಪೂರ್ಣ ವಿವರವನ್ನು ಈ ಕೆಳಗೆ ತಿಳಿಸಲಾಗಿದೆ.
Training dates- ಉಚಿತ ಹೊಲಿಗೆ ಯಂತ್ರ ತರಬೇತಿ ನಡೆಯುವ ಅವದಿ:
ಉಚಿತ ಹೊಲಿಗೆ ಯಂತ್ರ ತರಬೇತಿಯು ದಿನಾಂಕ- 05-03- 2025 ರಿಂದ ಪ್ರಾರಂಭವಾಗಿ 03-04-2025 ಕ್ಕೆ ಮುಕ್ತಾಯಗೊಳ್ಳುತ್ತದೆ. ಅಂದರೆ ಒಟ್ಟು 30 ದಿನಗಳ ತರಬೇತಿ ನಡೆಯುತ್ತದೆ.
ಇದನ್ನೂ ಓದಿ: Pouthi Khata Abhiyana-ರಾಜ್ಯ ಸರಕಾರದಿಂದ ಪೌತಿ ಖಾತೆ ಅಭಿಯಾನ!
Purpose of training- ಹೊಲಿಗೆ ಯಂತ್ರ ತರಬೇತಿ ಯೋಜನೆಯ ಉದ್ದೇಶ:
ಮಹಿಳೆಯರ ಆರ್ಥಿಕ ಸ್ವಾವಲಂಬನೆ: ಈ ತರಬೇತಿಯನ್ನು ಪಡೆದ ಮಹಿಳೆಯರು ಕುಟುಂಬ ನಿರ್ವಹಿಸುವ ಮೂಲಕ ಸ್ವಂತವಾಗಿ ಆದಾಯಗಳಿಸಲು ಸಹಾಯಕಾರಿಯಾಗಿದೆ.
ಮಹಿಳೆಯರ ಸ್ಥಾನಮಾನ: ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಸ್ಥಾನಮಾನದಲ್ಲಿ ಉನ್ನತ ಸ್ಥಾನವನ್ನು ಕಾಣಬಹುದು.
ಇದನ್ನೂ ಓದಿ: Agriculture machine subsidy-ವಿವಿಧ ಕೃಷಿ ಯಂತ್ರೋಪಕರಣಗಳ ಸಹಾಯಧನಕ್ಕೆ ಅರ್ಜಿ ಆಹ್ವಾನ! ಕೃಷಿ ಇಲಾಖೆ.

Who can apply for free sewing machine- ಉಚಿತ ಹೊಲಿಗೆ ಯಂತ್ರ ತರಬೇತಿಯನ್ನು ಪಡೆಯಲು ಯಾರು ಅರ್ಜಿ ಸಲ್ಲಿಸಬಹುದು?
- ಅರ್ಜಿದಾರರ ವಯಸ್ಸು 18 ರಿಂದ 45 ವರ್ಷದ ಒಳಗಿರಬೇಕು.
- ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ ಈ ತರಬೇತಿಯಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.
- ಅರ್ಜಿದಾರರು ಕನ್ನಡವನ್ನು ಓದಲು ಮತ್ತು ಕಡ್ಡಾಯವಾಗಿ ಬರಬೇಕು.
- ಅರ್ಜಿದಾರರು ಒಮ್ಮೆ ತರಬೇತಿ ಕೇಂದ್ರದಿಂದ ತರಬೇತಿ ಪಡೆದ ನಂತರ ಸ್ವ-ಉದ್ಯೋಗ ಪ್ರಾರಂಭಿಸಲು ಆಸಕ್ತಿಯನ್ನು ಹೊಂದಿರಬೇಕು.
- ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಮೊದಲ ಅದ್ಯತೆ ನೀಡಲಾಗುತ್ತದೆ.
What are the Documents -ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು:
- ಅರ್ಜಿದಾರರ ಆಧಾರ್ ಕಾರ್ಡ- Aadhar Card
- ಬ್ಯಾಂಕ್ ಪಾಸ್ ಬುಕ್ – Bank Passbook
- ಪಡಿತರ ಚೀಟಿ – Ration card
- ಪೋಟೋ- Photocopy
- ಪಾನ್ ಕಾರ್ಡ -Pancard
- ಮೊಬೈಲ್ ನಂಬರ್- Mobile number
ಇದನ್ನೂ ಓದಿ: ಕೃಷಿ ಇಲಾಖೆ ಸೌಲಭ್ಯಗಳು ಮತ್ತು ಮಾನದಂಡಗಳು!
How to apply- ಉಚಿತ ಹೊಲಿಗೆ ಯಂತ್ರ ತರಬೇತಿಗೆ ಅರ್ಜಿಯನ್ನು ಹೇಗೆ ಸಲ್ಲಿಸಬೇಕು?
ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸುವ ಮುಂಚಿತವಾಗಿ ಈ 9449860007, 9538281989, 9916783825, 8880444612 ಮೊಬೈಲ್ ನಂಬರ್ ಗಳಿಗೆ ಕರೆ ಮಾಡಿ ನಿಮ್ಮ ಹೆಸರುಗಳನ್ನು ರಿಜಿಸ್ಟರ್ ಮಾಡಿಕೊಳ್ಳಬೇಕು. ತರಬೇತಿ ಪ್ರಾರಂಭವಾಗುವ ದಿನ ಕೆಳಿರುವ ಎಲ್ಲಾ ದಾಖಲಾತಿಗಳನ್ನು ಸಿದ್ದಮಾಡಿಕೊಂಡು ತರಬೇತಿಯಲ್ಲಿ ಭಾಗವಹಿಸತಕ್ಕದ್ದು.
Address- ಹೊಲಿಗೆ ಯಂತ್ರ ತರಬೇತಿ ನಡೆಯುವ ಸ್ಥಳ:
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ಇಂಡಿಸ್ಟ್ರಿಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ, ಉತ್ತರಕನ್ನಡ
ಇದನ್ನೂ ಓದಿ: ಕೃಷಿ ಹೊಂಡ ನಿರ್ಮಾಣ ಶೇ.80% ಸಹಾಯಧನ ಕೃಷಿ ಭಾಗ್ಯ ಯೋಜನೆ!
Sewing Machine Subsidy Schemes- ಉಚಿತ ಹೊಲಿಗೆ ಯಂತ್ರಕ್ಕೆ ಸಹಾಯಧನ ಪಡೆಯಬಹುದು ಹೇಗೆ?
ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ವರ್ಗಕ್ಕೆ ಸೇರಿದ ಫಲಾನುಭವಿಗಳಿಗೆ ಸ್ವ-ಉದ್ಯೋಗವನ್ನು ಆರಂಭಿಸಲು ಕೇಂದ್ರ ಮತ್ತು ರಾಜ್ಯ ಸರಕಾರದ ಸಹಯೋಗದಲ್ಲಿ ವಿವಿಧ ಯೋಜನೆಯ ಮೂಲಕ ಹೊಲಿಗೆ ಯಂತ್ರ ಪಡೆಯಲು ಸಬ್ಸಿಡಿಯನ್ನು ನೀಡಲಾಗುತ್ತದೆ.
ಎರಡು ಯೋಜನೆಯಡಿ ಹೊಲಿಗೆ ಯಂತ್ರಕ್ಕೆ ಸಹಾಯಧನ ಪಡೆಯಲು ಅವಕಾಶವಿದ್ದು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಮತ್ತು ಗ್ರಾಮೀಣ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಯೋಜನೆ ಗಳಲ್ಲಿ ನಾಗರಿಕರು ಸಬ್ಸಿಡಿಯನ್ನು ಪಡೆಯಲು ಅವಕಾಶವಿರುತ್ತದೆ.
PM vishwakarma-ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಮಾಹಿತಿಯನ್ನು ಪಡೆಯಲು ವೆಬ್ಸೈಟ್ ಲಿಂಕ್- CLICK HERE
Sewing machine Subsidy-ಗ್ರಾಮೀಣ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಯೋಜನೆಯ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್ಸೈಟ್ ಲಿಂಕ್- CLICK HERE