Free Sewing Machine Scheme: ಉಚಿತ ಹೊಲಿಗೆ ಯಂತ್ರ ವಿತರಣೆ:
ಆತ್ಮೀಯರೇ 2023-24ನೇ ಸಾಲಿನಲ್ಲಿ ವಿವಿಧ ಯೋಜನೆಗಳ ಅಡಿಯಲ್ಲಿ ವೃತ್ತಿನಿರತ ಗ್ರಾಮೀಣ ಕುಶಲಕರ್ಮಿ/ಗುಡಿ ಕೈಗಾರಿಕೆಯಲ್ಲಿ ತೊಡಗಿಕೊಂಡಿರುವ ಅರ್ಹ ಅಭ್ಯರ್ಥಿಗಳು ತಮ್ಮ ತಮ್ಮ ಕಸುಬನ್ನು ಮುಂದುವರೆಸಿಕೊಂಡು ಹೊಗುವ ಒಂದು ದೃಷ್ಠಿಯಿಂದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯವತಿಯಿಂದ ಉಚಿತ ವಿದ್ಯುತ್ ಹೊಲಿಗೆ ಮಿಷನ್ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Holige Yantra Scheme:ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ
ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ವಿದ್ಯುತ್ ಚಾಲಿತ ಮರಗೆಲಸ, ದೋಬಿ, ಗಾರೆಕೆಲಸ, ಕಮ್ಮಾರಿಕೆ, ಕ್ಷೌರಿಕ ಮತ್ತು ವಿದ್ಯುತ್ ಚಾಲಿತ ಹೊಲಿಗೆಯಂತ್ರ (Free Sewing Machine Scheme) ವೃತ್ತಿಯ ಉಪಕರಣಗಳನ್ನು ಪಡೆಯಲು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಈ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
Documents required: ಬೇಕಾಗುವ ದಾಖಲೆಗಳು
ಇದನ್ನೂ ಓದಿ: ಸಹಾಯಧನದಲ್ಲಿ ತುಂತುರು ನೀರಾವರಿ ಘಟಕಕ್ಕೆ ಅರ್ಜಿ ಆಹ್ವಾನ:
ಭಾವಚಿತ್ರ
ಜಾತಿ ಪ್ರಮಾಣ ಪತ್ರ (SC, ST, Minority)
ಹೊಲಿಗೆ ತರಬೇತಿ ಪಡೆದ ಪ್ರಮಾಣ ಪತ್ರ
ರೇಷನ್ ಕಾರ್ಡ್/ ವೋಟರ್ ಐ.ಡಿ
ಮರಗೆಲಸ, ಗಾರೆಕೆಲಸ, ಕ್ಷೌರಿಕ ಹಾಗೂ ಧೋಬಿ ಕಸುಬಿನ ಕುಶಲಕರ್ಮಿಯಾಗಿದ್ದಲ್ಲಿ ಆಯಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯವರಿಂದ ಧೃಡೀಕರಣ ಪತ್ರ/ ಕಾರ್ಮಿಕ ಇಲಾಖೆಯಿಂದ ವಿತರಿಸಿದ ಕುಶಲಕರ್ಮಿ ಗುರುತಿನ ಚೀಟಿ ಪ್ರತಿ,
Free Sewing Machine Scheme : ಈ ಕೆಳಗೆ ಉಚಿತ ಹೊಲಿಗೆ ಯಂತ್ರದ ಕೊನೆಯ ದಿನಾಂಕಗಳನ್ನು ನೀಡಲಾಗಿರುತ್ತದೆ.
ಇಲಾಖೆಯ ಸುತ್ತೋಲೆಗಾಗಿ ಇಲ್ಲಿ ಕ್ಲಿಕ್ ಮಾಡಿ:
ವಿಶೇಷ ಸೂಚನೆ: ಈ ಕೆಳಗೆ ನೀಡಿರುವ ಜಿಲ್ಲೆಗಳಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯವತಿಯಿಂದ ಉಚಿತ ವಿದ್ಯುತ್ ಹೊಲಿಗೆ ಮಿಷನ್ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಚಾಮರಾಜನಗರ ಜಿಲ್ಲೆ: 30-11-2023
ಗದಗ ಜಿಲ್ಲೆ: 20-11-2023
ಹಾಸನ ಜಿಲ್ಲೆ: 15-11-2023
ಯಾದಗಿರಿ ಜಿಲ್ಲೆ: 10-11-2023
ಇಲಾಖೆಯ ಸುತ್ತೋಲೆಗಾಗಿ ಇಲ್ಲಿ ಕ್ಲಿಕ್ ಮಾಡಿ:
ಅರ್ಜಿ ಸಲ್ಲಿಸಲು ಹತ್ತಿರದ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಹಾಗೂ ನಾಗರಿಕ ಸೇವಾ ಸೆಂಟರ್ ಭೇಟಿ ನೀಡಿ ಅರ್ಜಿ ಸಲ್ಲಿಸಿ.
ಹೆಚ್ಚಿನ ಮಾಹಿತಿಗಾಗಿ ಸಂಬಂದಪಟ್ಟಇಲಾಖೆ ಜಾಲತಾಣ ತಾಲ್ಲೂಕು ಕೈಗಾರಿಕಾ ವಿಸ್ತರಣಾಧಿಕಾರಿಗಳು/ ಉಪ ನಿರ್ದೇಶಕರ ಕಛೇರಿ, ಗ್ರಾಮೀಣ ಕೈಗಾರಿಕೆಗಳು (ಖಾದಿ ಮತ್ತು ಗ್ರಾಮೋದ್ಯೋಗ), ಇವರನ್ನು ಸಂಪರ್ಕಿಸಬಹುದು.
ಇದನ್ನೂ ಓದಿ: ಬರ ಪರಿಹಾರ ಜಮಾ ಆಗಲು ಈ ಕೆಲಸ ಕಡ್ಡಾಯ: 324 ಕೋಟಿ ಬರ ಪರಿಹಾರ ಬಿಡುಗಡೆ: