ಆತ್ಮೀಯ ರೈತ ಬಾಂದವರೇ ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಕಾಲುದಾರಿ ಅಥವಾ ಬಂಡಿದಾರಿ ಸೌಲಭ್ಯ ಒದಗಿಸುವ ಸಲುವಾಗಿ ಕ್ರಮವಹಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ನೀಡಿದೆ ಈ ಆದೇಶವನ್ನು ಸದುಪಯೋಗ ಪಡೆದುಕೊಳ್ಳಲು ಈ ಮೂಲಕ ಕೋರಲಾಗುತ್ತಿದೆ.
ರಾಜ್ಯದಲ್ಲಿ ರೈತರು ವ್ಯವಸಾಯ ಉದ್ದೇಶಗಳಿಗಾಗಿ ಬಳಸುವ ಕೃಷಿ ಯಂತ್ರೋಪಕರಣಗಳನ್ನು ಮತ್ತು ಜಾನುವಾರಗಳನ್ನು, ರಸಗೊಬ್ಬರಗಳನ್ನು ಮತ್ತು ಆಯಾ ಹಂಗಾಮಿನ ಬೆಳೆ ಕಟಾವಿನ ನಂತರ ಕೊಯ್ಲು ಮಾಡಿರುವ ದವಸ ಧಾನ್ಯಗಳನ್ನು ಹೊಲ ಮತ್ತು ಗದ್ದೆಗಳಿಂದ ಓಕ್ಕಲುತನಕ್ಕೆ, ಕೃಷಿ ಬೇಕಾದ ಇತರೆ ವಸ್ತುಗಳನ್ನು ಸಾಗಿಸಲು ಭೂಮಾಲೀಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು ದಾರಿ ಸಮಸ್ಯೆ ಇರುವುದು ಸರ್ವೆಸಾಮನ್ಯ ಅದನ್ನು ಅರಿತ ರಾಜ್ಯ ಸರ್ಕಾರ ಬಳಕೆದಾರ ರ್‍ಯೆತರಿಗೆ ತೊಂದರೆಗಳು ಆಗುತ್ತಿರುವ ಕಾರಣದಿಂದ ಸರ್ಕಾರ ಈ ಆದೇಶವನ್ನು ಹೊರಡಿಸಿದ್ದು ಈ ಆದೇಶದಿಂದ ಸಾಮಾನ್ಯ ಜನರಿಗೆ ಸ್ವಲ್ಪ ಮಟ್ಟಿಗೆ ನಿರಾಳವಾಗುವುದು ಎಂದು ಭಾವಿಸುತ್ತಾ, ಲೇಖನದಲ್ಲಿ ಹೇಗೆ? ಏನು? ಅಂತ ಸಂಪೂರ್ಣ ಮಾಹಿತಿಯನ್ನು ನೀಡಲಾಗಿರುತ್ತದೆ. ಈ ಸಂದೇಶವನ್ನು ನೀವು ಓದಿ ನಂತರ ಗ್ರಾಮದ ಇತರೆ ರೈತರಿಗೂ ಹಂಚಿಕೊಳ್ಳಿ . ಹಾಗೂ ಮೊದಲು ಆಗುತ್ತಿದ್ದ ತೊಂದರೆಗಳಿಗೆ ಈ ಆದೇಶದಿಂದ ಪರಿಹಾರವನ್ನು ಕಂಡುಕೊಳ್ಳಿ..
ಇದನ್ನೂ ಓದಿ: Krishi Prashasti 2025 : ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ ಪ್ರಥಮ ಬಹುಮಾನ ಮೊತ್ತ 50,000/-ರೂ
ರ್‍ಯೆತ ಬಾಂದವರೇ ಈ ದಾರಿ ಸಮಸ್ಯೆ ಬಹುಕಾಲದಿಂದಲೂ ಇದ್ದು ಅಕ್ಕಪಕ್ಕದ ಜಮೀನುಗಳ ರ್‍ಯೆತರು ಕೆಲವು ಖಾಸಗಿ ಜಮೀನುಗಳನ್ನು ದಾಟಿಕೊಂಡು ಕೃಷಿಪೂರಕ ಚಟುವಟಿಕೆಗಳನ್ನು ಜರುಗಿಸಲು ಹಾಗೂ ಬೆಳೆದ ಫಸಲನ್ನು ಹೊರತರಲಾರದೆ ನಷ್ಟ ಹೊಂದುತ್ತಿರುವುದು ಕೆಲವು ಮಾದ್ಯಮಗಳಿಂದ ತಿಳಿದು ಬಂದಿರುತ್ತದೆ ಹಾಗೂ ಈ ಬಗ್ಗೆ ಸಾರ್ವಜನಿಕರಿಗೆ ಹೇಳುವುದೆನೆಂದರೆ ನೀವು ನಿಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ .
ಗ್ರಾಮ ನಕಾಶೆಕಂಡ ದಾರಿಗಳಲ್ಲಿ ಬಳಕೆದಾರ ರ್‍ಯೆತರು ತಿರುಗಾಡಲು ಅವಕಾಶವಿರುವಾಗೂ ಕೆಲವು ಭೂಮಾಲಿಕರು ಬಳಕೆದಾರ ರ್‍ಯೆತರುಗಳಿಗೆ ತಿರುಗಾಡಲು ಅಡ್ಡಿಪಡಿಸುತ್ತಿರುವುದು ಹಾಗೂ ಅಂತಹ ಜಾಗಗಳನ್ನು ಮುಚ್ಚಿರುವುದು ಹಾಗೂ ರೈತರು ಬಹುಕಾಲದಿಂದಲೂ ಬಳಸುವ ದಾರಿಗಳಲ್ಲಿ ತಿರುಗಾಡಲು ಕೆಲವು ರೈತರು ಮದ್ಯದ ವ್ಯೆಯಕ್ತಿಕ ದ್ವೇಷ /ಅಸೂಯೆಗಳು ಹೊಂದಾಣಿಕೆಯ ಕೊರತೆಯಿಂದಾಗಿ ಬಳಕೆದಾರ ರೈತರ ತೊಂದರೆಗಳಿಗೆ ಬಹುತೇಕ ಕಾರಣಗಳಾಗಿರುವುದರಿಂದ ಈ ನಿಯಮವನ್ನು ರಾಜ್ಯ ಸರ್ಕಾರ ಜನಸಾಮಾನ್ಯರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಈ ಒಂದು ಆದೇಶವನ್ನು ಹೊರಡಿಸಿದೆ.
Karnataka Land Revenue Rules: ಕರ್ನಾಟಕದ ಭೂಕಂದಾಯದ ನಿಯಮಗಳು:
ಕರ್ನಾಟಕದ ಭೂಕಂದಾಯದ ನಿಯಮ1966 ರ ನಿಯಮ 59 ರಲ್ಲಿ ’ದಾರಿಯ ಹಕ್ಕುಗಳು ಮತ್ತು ಇತರೆ ಅನುಭೋಗದ ಹಕ್ಕುಗಳ ಬಗ್ಗೆ ತಿಳಿಸಲಾಗಿತ್ತು ,ಸಂಬಂಧಪಟ್ಟ ಜಮೀನುಗಳ ಭಾಗಿದಾರರು ಒಪ್ಪಿರುವಂತಹ ಸಂದರ್ಭದಲ್ಲಿ ಹಕ್ಕುಗಳ ದಾಖಲೆ ರಿಜಿಸ್ಟರ್ನಲ್ಲಿ ನಮೂದು ಮಾಡಲು ಅವಕಾಶವಿದೆ.
The Indian Esement Act:
1882 ರಂತೆ ಪ್ರತಿ ಜಮೀನಿನ ಮಾಲೀಕರು ಅಥವಾ ಜಮೀನಿನನುಭವದಲ್ಲಿರುವವರು ಅವರ ಭೂಮಿಯನ್ನು ಪ್ರವೇಶಿಸುವ ಹಕ್ಕು ಮತ್ತು ವಹಿವಾಟಿನ (Easement) ಹಕ್ಕನ್ನು ಹೊಂದಿದ್ದು ,ಇದಕ್ಕೆ ಬಾಜುದಾರರಿಂದ ಯಾವುದೇ ಹಸ್ತಕ್ಷೇಪಕ್ಕೆ ಅಥವಾ ಈ ಬಗ್ಗೆ ಸದರಿ ಹಕ್ಕನ್ನು ಕ್ಷೀಣಿಸುವುದಕ್ಕೆ ಸಾದ್ಯವಿರುವುದಿಲ್ಲ ಎಂಬುದಾಗಿ ತಿಳಿಸಲಾಗಿದ್ದು ,ಈ ನಿಟ್ಟಿನಲ್ಲಿ ಕ್ರಮವಹಿಸಲು ಅವಕಾಶವಿದೆ.
ಅಲ್ಲದೇ, Code Of Criminal Procedure,1973 ಕಲಂ 147 ರನ್ವಯ ’ಭೂಮಿ ಮತ್ತು ನೀರಿನ ಹಕ್ಕಿನ ಉಪಯೋಗದ ಕುರಿತು ಸ್ಥಳೀಯ ಶಾಂತಿಗೆ ಭಂಗ ಉಂಟಾಗುವ ಸಂದರ್ಭಗಳಲ್ಲಿ ಅದನ್ನು ತಡೆಗಟ್ಟಲು ಕಾನೂನು ರೀತ್ಯಾ ತಹಶೀಲ್ದಾರ್ ರವರು ತಾಲ್ಲೂಕು ಕಾರ್ಯನಿರ್ವಾಹಕ ಮ್ಯಾಜಿಸ್ಟೃಟ್ ಆಗಿ ಕ್ರಮವಹಿಸಲು ಅಧಿಕಾರ ಹೊಂದಿರುತ್ತಾರೆ.
ಇದನ್ನೂ ಓದಿ: Weed Mat Subsidy: ತೋಟಗಾರಿಕೆ ಇಲಾಖೆಯಿಂದ ಕಳೆ ಚಾಪೆಗೆ 1.ಲಕ್ಷ ರೂ. ಸಹಾಯಧನ
ಆಯಾ ತಾಲೂಕಿನ ಕಂದಾಯ ಅಧಿಕಾರಿಗಳಿಗೆ ಮತ್ತು ತಹಶೀಲ್ದಾರ್ಗಳು ನಕಾಶೆ ಕಂಡ ಕಾಲುದಾರಿ,ಬಂಡಿದಾರಿ ಅಥವಾ ರಸ್ತೆಗಳಲ್ಲಿಅನ್ಯ ಕೃಷಿ ಬಳಕೆದಾರರು ತಿರುಗಾಡಲು ಅವಕಾಶ ನೀಡದೆ ಅಡ್ಡಿಪಡಿಸುವಂತಹ ಅಥವಾ ಬಳಸಲು ಮುಚ್ಚಿರುವಂತಹ ಸಂದರ್ಭಗಳಲ್ಲಿ ಅವುಗಳನ್ನು ತೆರುವುಗೊಳಿಸಲು ಅಂತಹ ತಿರುಗಾಡಲು ದಾರಿಗಳನ್ನು ಸರಿಪಡಿಸಿಕೊಳ್ಳಲು ಕ್ರಮವಹಿಸುವಂತೆ ಸೂಚಿಸಿದೆ.
ಸರ್ಕಾರದ ಆದೇಶ ಪ್ರತಿ:
