Thursday, November 21, 2024

Govt free hostels-2024:ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿ ಆಹ್ವಾನ! ಅದರ ಮಾಹಿತಿ ಮತ್ತು ಲಿಂಕ್ ಇಲ್ಲಿದೆ.

ರಾಜ್ಯ ಸರಕಾರದಿಂದ ಉಚಿತ ವಸತಿ ನಿಲಯಗಳ ಪ್ರವೇಶಾತಿಗೆ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. ಸರಕಾರವು ಇದೀಗ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ (Govt hostel Application-2024) ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಕರ್ನಾಟಕ ರಾಜ್ಯದಲ್ಲಿರುವ ವಿದ್ಯಾರ್ಥಿಗಳಿಗೆ ಹಳ್ಳಿಗಳಲ್ಲಿ ಸರಿಯಾದ ಶಾಲೆ/ಕಾಲೇಜು ಇಲ್ಲದೆ ಇರುವುದರಿಂದ ವಿದ್ಯಾರ್ಥಿಗಳು ನಗರ/ಪಟ್ಟಣಗಳಿಗೆ ಓದಲು ಹೋಗುತ್ತಾರೆ. ಅವರಿಗೆ ಅನುಕೂಲವಾಗಲು ಉಚಿತ ವಸತಿ ಮತ್ತು ಊಟ ಸೌಲಭ್ಯವನ್ನು ಕಲ್ಪಿಸಲು ಇರುವಂತಹ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿಸಲ್ಲಿಸಲು ಬೇಕಾಗಿರುವ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ.

2024-25 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ(minority welfare department) ಪ್ರಿ ಮೆಟ್ರಿಕ್ ಹಾಗೂ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳಿಗೆ ಹೊಸದಾಗಿ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಾತಿ ಬಯಸುವ ಅಭ್ಯರ್ಥಿಗಳಿಗೆ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಿದೆ.

ಇದನ್ನೂ ಓದಿ: ಕೃಷಿ ಪಂಪಸೆಟ್ ಗಳಿಗೆ ಆಧಾರ್‌ ಜೋಡಣೆ ಕಡ್ಡಾಯ? ಎಲ್ಲಿ ಮಾಡಿಸಬೇಕು ಮತ್ತು ಇದರ ಉದ್ದೇಶಗಳು ಇಲ್ಲಿದೆ ಮಾಹಿತಿ.

WHO CAN APPLY-ವಸತಿ ನಿಲಯಗಳಿಗೆ ಯಾರು ಅರ್ಜಿ ಸಲ್ಲಿಸಬಹುದು.

ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜಿಲ್ಲೆಗಳಲ್ಲಿರುವಂತಹ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಅಲ್ಪ ಸಂಖ್ಯಾತ ಸಮುದಾಯದವರಾದ ಮುಸ್ಲಿಂ, ಕ್ರಿಸ್ಚಿಯನ್, ಸಿಖ್, ಬೌದ್ಧ, ಜೈನ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳ ಸೇರಿದಂತೆ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಪೋಷಕರ ಆದಾಯ ಎಷ್ಟಿರಬೇಕು?

ಸರಕಾರದ ಉಚಿತ ವಸತಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಪೋಷಕರ ವಾರ್ಷಿಕ ಆದಾಯವು 2.50ಲಕ್ಷ ರೂಪಾಯಿ ಒಳಗಿರಬೇಕು.

Govt Free Hostel application-2024:ಅರ್ಜಿಸಲ್ಲಿಸಲು ಬೇಕಾಗುವ ಅವಶ್ಯಕ ದಾಖಲೆಗಳು:

1)ಶೈಕ್ಷಣಿಕ ಪ್ರಮಾಣ ಪತ್ರ

2)ವಿದ್ಯಾರ್ಥಿಯ ಆಧಾರ್ ಕಾರ್ಡ್

3)ಜಾತಿ ಮತ್ತು ಆದಾಯ ಪ್ರಮಾಣ ಪತ್ರ

4)ಕಾಲೇಜು ನೋಂದಣಿ ಸಂಖ್ಯೆ

5)ಮೊಬೈಲ್ ನಂಬರ್

ಇದನ್ನೂ ಓದಿ: 2024 ರ ಬೆಳೆ ವಿಮೆ ಕಟ್ಟಿದ್ದರೆ, ನಂತರ ಈ ಕೆಲಸ ಮಾಡಿ ಇಲ್ಲವಾದಲ್ಲಿ ಕಟ್ಟಿದ ಹಣ ವ್ಯರ್ಥವಾಗುತ್ತದೆ.

6)ಹಿಂದಿನ ಶೈಕ್ಷಣಿಕ ವರ್ಷದ ಅಂಕಪಟ್ಟಿ

ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿಸಲ್ಲಿಸಲು ಕೊನೆಯ ದಿನಾಂಕಗಳು:

1.Pre-matric ವಿದ್ಯಾರ್ಥಿನಿಲಯಗಳಿಗೆ ಅರ್ಜಿಸಲ್ಲಿಸಲು-31ಜುಲೈ2024

2.Post-matric ವಿದ್ಯಾರ್ಥಿನಿಲಯಗಳಿಗೆ ಅರ್ಜಿಸಲ್ಲಿಸಲು-05ಅಗಷ್ಟ್2024

ಅರ್ಜಿ ಸಲ್ಲಿಸಲು ಪ್ರಮುಖ ಲಿಂಕ್ ಇಲ್ಲಿದೆ  Click here….

ಇತ್ತೀಚಿನ ಸುದ್ದಿಗಳು

Related Articles