Thursday, November 21, 2024

ಈ ಶೈಕ್ಷಣಿಕ ಸಾಲಿನ SSLC ಮತ್ತು ದ್ವೀತಿಯ PUC ವಿದ್ಯಾರ್ಥಿಗಳಿಗೆ ಸಿಹಿಸುದ್ದಿ :

ಆತ್ಮೀಯ ಪ್ರೀಯ ವಿದ್ಯಾರ್ಥಿಗಳೇ, ಇಂದು ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಕೊನೆಯ ಪರೀಕ್ಷೆಯಾಗಿರುತ್ತೆ, ಈ ದಿನ ನಿಮ್ಮಗೆ ಪರೀಕ್ಷಾ ಮಂಡಳಿ ಸಿಹಿಸುದ್ದಿ ನೀಡಿದೆ. 2022-23ನೇ ಸಾಲಿನ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ , ಈ ಬಾರಿಯೂ ಕೊರೊನಾ ಬ್ಯಾಚ್ ಎಂದು ಪರಿಗಣಿಸಿ 26 ಗ್ರೇಸ್ ಅಂಕ ಕೊಡುವ ಅವಕಾಶ ಇರುವುದಾಗಿ ಇಲಾಖೆಯ ಪರೀಕ್ಷಾ ಮಂಡಳಿ ನಿರ್ದೇಶಕರು ರಾಮಚಂದ್ರ, ಸರ್‍ ಮಾಹಿತಿ ನೀಡಿರುತ್ತಾರೆ.

ಇದನ್ನೂ ಓದಿ: ಸುವರ್ಣ ಅವಕಾಶ: ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ.

ಈ ಕುರಿತು ಮಾಹಿತಿ ನೀಡಿರುವ ಎಸ್‌ಎಸ್ ಎಲ್ ಸಿ ಬೊರ್ಡ್ ನಿರ್ದೇಶಕ ರಾಮಚಂದ್ರ, ಈ ಬಾರಿಯೂ ಕೊರೊನಾ ಬ್ಯಾಚ್ ಎಂದು ಪರಿಗಣಿಸಿ ಶೇ.10 ರಷ್ಟು ಗ್ರೇಸ್ ಅಂಕ ನೀಡಲಾಗುವುದು. ಮೂರು ವಿಷಯಗಳಿಗೆ ಮಾತ್ರ ಗ್ರೇಸ್ ಮಾರ್ಕ್ ಅಂಕ ನೀಡಲಾಗುತ್ತದೆ. ತೇರ್ಗಡೆ ಕಡಿಮೆ ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಮಾತ್ರ ಇದು ಅನ್ವಯವಾಗಲಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ.

ಇದನ್ನೂ ಓದಿ: POST ಆಫೀಸ್ ನಿಂದ ಹೊಸ ಯೋಜನೆ -ಮಾಸಿಕ ಆದಾಯಕ್ಕೆ ಉತ್ತಮ ಅವಕಾಶ.

SSLC 6 ವಿಷಯಗಳ ಪೈಕಿ 3 ವಿಷಯಗಳಲ್ಲಿ ಉತ್ತೀರ್ಣರಾಗಿದ್ದರೆ, ಉಳಿದ 3 ವಿಷಯಗಳಿಗೆ ತಲಾ ಶೇ. 10ರಷ್ಟು ಆದರೆ ಒಟ್ಟು 26 ಅಂಕ ಮೀರದಂತೆ ಕೃಪಾಂಕ ದೊರೆಯಲಿದೆ. ಪ್ರಥಮ ಭಾಷೆಯಲ್ಲಿ ಗರಿಷ್ಠ 10 ಅಂಕ ಮತ್ತು ಉಳಿದ ವಿಷಯಗಳಲ್ಲಿ ಗರಿಷ್ಠ 8 ಅಂಕವನ್ನು ಕೃಪಾಂಕದ ರೂಪದಲ್ಲಿ ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿರುವ ಎಸ್‌ಎಸ್ ಎಲ್ ಸಿ ಬೊರ್ಡ್ ನಿರ್ದೇಶಕ ರಾಮಚಂದ್ರ, ಸರ್‍.

ಇದನ್ನೂ ಓದಿ: ರಾಜ್ಯ ಮತ್ತು ಕೇಂದ್ರ ಸರ್ಕಾರದ PM-Kisan 14 ಕಂತಿನ ಅರ್ಹ ಮತ್ತು ಅನರ್ಹ ಫಲಾನುಭವಿಗಳ ಯಾರು ತಿಳಿಯಿರಿ

ಅದೇ ರೀತಿ 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮುಗಿಸಿ ಇನ್ನೆನೂ ರಿಸಲ್ಟಗಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಶೇ. 5 ರಷ್ಟು ಗ್ರೇಸ್ ಮಾರ್ಕ್ಸ್ ನೀಡುವುದಾಗಿ ದ್ವಿತೀಯ ಪಿಯುಸಿ ಪರೀಕ್ಷಾ ಮಂಡಳಿ ತಿಳಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳಿಗೆ 210 ಅಂಕಗಳನ್ನು ಪಡೆದಿರುವ ವಿದ್ಯಾರ್ಥಿ ಎರಡು ವಿಷಯಗಳಲ್ಲಿ ಶೇ. 5 ರಷ್ಟು ಅಂದರೆ ತಲಾ 5 ಅಂಕ ಸೇರಿ 10 ಅಂಕಗಳನ್ನು ನೀಡಲಾಗುದು ಎಂದು ಮಾಹಿತಿ ದೊರೆತಿದೆ.

ಇದನ್ನೂ ಓದಿ: ತೋಟಗಾರಿಕೆ ಮತ್ತು ಕೃಷಿ ಇಲಾಖೆಗಳಿಂದ ಕೃಷಿ ಉಪಕರಣಕ್ಕೆ NOC(ನೀರಾಕ್ಷೇಪಣಾ ಪತ್ರ) ಪಡೆಯುವುದು ಹೇಗೆ? ಅದರ ಅವಶ್ಯಕತೆ ಏನು?

ಪರೀಕ್ಷೆ ಬರೆದಿರುವ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾಗಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಅಂತ ಹಾರೈಸುವ .

ಇತ್ತೀಚಿನ ಸುದ್ದಿಗಳು

Related Articles