Friday, September 20, 2024

Horticulture training: ಮಾಸಿಕ ರೂ, 1750/- ಶಿಷ್ಯವೇತನದೊಂದಿಗೆ ರೈತರ ಮಕ್ಕಳಿಗೆ ತರಬೇತಿ

ಆತ್ಮೀಯ ವಿದ್ಯಾರ್ಥಿ ಮಿತ್ರರೇ 2024-25 ನೇ ಸಾಲಿಗೆ ರಾಜ್ಯದ ವಿವಿಧೆಡೆ ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ 10 ತಿಂಗಳ ತೋಟಗಾರಿಕೆ (10) months horticulture training) ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಾಗಿದ್ದರೆ ಈ ಒಂದು ತರಬೇತಿಯ ಉದ್ದೇಶ ಅಥವಾ ನಿಭಂದನೆಗಳೇನು? ಹಾಗೂ ತರಬೇತಿ ಇರುವುದೇಲ್ಲಿ? ಅರ್ಹತೆಗಳೇನು?ಮಾಸಿಕ ವೇತನವೆಷ್ಟು? ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ವಿವರಿಸಲಾಗಿದೆ.

Training Place : ತರಬೇತಿ ಸ್ಥಳ:
2024-25 ನೇ ಸಾಲಿನಲ್ಲಿ ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರ, ಸಿದ್ದಾಪುರ (ಉ.ಕ) ಉತ್ತರಕನ್ನಡ , ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿರುತ್ತದೆ,

ಇದನ್ನೂ ಓದಿ: PM Kisan ಹಣ ಜಮಾ ಆಗಲು NPCI Active ಕಡ್ಡಾಯ ಚೆಕ್ ಮಾಡಿ ಈ ಲಿಂಕ್ ಮೇಲೆ ಓತ್ತಿ ಪರಿಕ್ಷೀಸಿಕೊಳ್ಳಿ.

ತೋಟಗಾರಿಕೆ ಕ್ಷೇತ್ರದಲ್ಲಿ ವೈಜ್ಞಾನಿಕವಾಗಿ ಮತ್ತು ಅರ್ಥಿಕವಾಗಿ ಉತ್ತಮ ಬೇಸಾಯ ಕ್ರಮಗಳ ಕುರಿತು ತರಬೇತಿಯನ್ನು ಪಡೆಯಲು ಆಸಕ್ತಿಯಿರುವ ಅಭ್ಯರ್ಥಿಗಳು ತಾಂತ್ರಿಕ ತರಬೇತಿ ನೀಡಲು ರಾಜ್ಯದ ವಿವಿಧೆಡೆ ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿ ಪಡೆಯಲು ಅರ್ಜಿ ಸಲ್ಲಿಸಬಹುದು.

Duration of training: ತರಬೇತಿಯ ನಡೆಯುವ ಅವಧಿ:
ಈ ತೋಟಗಾರಿಕೆ ತರಬೇತಿಯು ಮೇ 02 ,2024 ರಿಂದ ಮೇ 05,2024 ರವರೆಗೆ ನಡೆಯಲಿದ್ದು ಈ ತರಬೇತಿ ಹತ್ತು ತಿಂಗಳ ಕಾಲ ಇರಲಿದೆ.

Training Provisions: ತೋಟಗಾರಿಕೆ ತರಬೇತಿ ನಿಭಂದನೆಗಳು:

ಈ ತರಬೇತಿಯು ರೈತರ ಮಕ್ಕಳಿಗಾಗಿ ಇರುವುದರಿಂದ ಅಭ್ಯರ್ಥಿಯ ತಂದೆ ಅಥವಾ ಪೋಷಕರು ಕಡ್ಡಾಯವಾಗಿ ಜಮೀನಿ ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡಬೇಕು.

ಅಭ್ಯರ್ಥಿಯು ತಮ್ಮ ಸ್ವಂತ ತೋಟಗಳನ್ನು ಅಭಿವೃದ್ಧಿಪಡಿಸಬೇಕೆಂಬ ಅಭಿಲಾಷೆಯುಳ್ಳವವರಿ ಆಧ್ಯತೆ ನೀಡಲಾಗುತ್ತದೆ.

ಈ ತರಬೇತಿಯ ಕಾಲಾವಧಿ 10 ತಿಂಗಳು ತರಬೇತಿಯು ದಿನಾಂಕ: 02 ಮೇ 2024 ರಿಂದ ಪ್ರಾರಂಭವಾಗಿ 28 ಮೇ 2025 ರವರೆಗೆ ನಡೆಯುತ್ತದೆ.

ತರಬೇತಿಯ ಅಂತ್ಯದಲ್ಲಿ ಪ್ರಾಯೋಗಿಕ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಅಂತಿಮ ಪರೀಕ್ಷೆಗೆ ಕುಳಿತುಕೊಳ್ಳಲು ಶೇ 75 ರಷ್ಟು ಹಾಜರಾತಿ ಕಡ್ಡಾಯ( ವೈದ್ಯಕೀಯ ಆಧಾರದ ಮೇಲೆ ಗರಿಷ್ಟ 30 ದಿನಗಳ ವಿನಾಯಿತಿ ಪಡೆಯಬವುದು)

ತರಬೇತಿಯಲ್ಲಿ ವಿಶೇಷವಾಗಿ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.1750/- ಮಾಸಿಕ ಶಿಷ್ಯವೇತನ ನೀಡಲಾಗುವುದು.

ಇದನ್ನೂ ಓದಿ: APJ and Murarji application : ವಸತಿ ಶಾಲೆಗಳ ಪ್ರವೇಶಗಳಿಗೆ ಅರ್ಜಿ ಆಹ್ವಾನ:

Eligibility for Horticulture Training: ತರಬೇತಿಗೆ ಅರ್ಹತೆ:
ರೈತ ಮಕ್ಕಳ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು S.S.L.C.ಯಲ್ಲಿ ಉತ್ತೀರ್ಣರಾದ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18-30 ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 18-33 ವರ್ಷ ಹಾಗೂ ಮಾಜಿ ಸೈನಿಕರಿಗೆ 33-65 ವರ್ಷ ವಯಸ್ಸಿನ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ತೋಟಗಾರಿಗೆ ತರಬೇತಿ ಪ್ರವೇಶಕ್ಕೆ ಅರ್ಜಿ ದೊರೆಯುವುದು ಎಲ್ಲಿ?
ಅರ್ಜಿ ನೀಡುವ ದಿನಾಂಕ:01-03-2024 ರಿಂದ 01-04-2024 ಸಂಜೆ; 5.30 ಗಂಟೆಯವರೆಗೆ ಇರುತ್ತದೆ,

ಅರ್ಜಿ ಫಾರಂಗಳನ್ನು ಹತ್ತಿರದ ತೋಟಗಾರಿಕೆ ಇಲಾಖೆ ಕಛೇರಿಯಲ್ಲಿ ಅಥವಾ ಇಲಾಖೆ ವೆಬ್ ಸೈಟ್ https://horticulturedir.karnataka.gov.in ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿರುತ್ತದೆ, ಹೆಚ್ಚಿನ ವಿವರಗಳಿಗೆ ಸಹಾಯಕ ತೋಟಗಾರಿಕೆ ನಿರ್ದೇಶಕರು, (ರಾಜ್ಯವಲಯ) ಸಿದ್ದಾಪುರ ರವರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.

ಅರ್ಜಿ ಸಲ್ಲಿಸುವುದು ಎಲ್ಲಿ?
ಸಾಮಾನ್ಯ ಅಭ್ಯರ್ಥಿಗಳು ರೂ. 30 ಮತ್ತು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ. 15 ಮೌಲ್ಯದ ಇಂಡಿಯನ್ ಪೋಸ್ಟಲ್ ಅರ್ಡರ್‍ ಅಥವಾ ಬ್ಯಾಂಕ್ ಡಿಮ್ಯಾಂಡ್ ಡ್ರಾಪ್ಟ್ ನ್ನು ತೋಟಗಾರಿಕೆ ಉಪ ನಿರ್ದೇಶಕರು (ಜಿಪಂ) ಅವರ ಹೆಸರಿನಲ್ಲಿ ಪಡೆದು ಅರ್ಜಿ ಮತ್ತು ಶುಲ್ಕದ ಬಾಬತ್ತು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08389-200460 ನ್ನು ಸಂಪರ್ಕಿಸಬಹುದಾಗಿದೆ.

ವಿಶೇಷ ಸೂಚನೆ : ಇದೇ ರೀತಿಯಾಗಿ ರಾಜ್ಯದ ವಿವಿಧೆಡೆ ತೋಟಗಾರಿಗೆ ತರಬೇತಿ ಪ್ರವೇಶಕ್ಕೆ ಅರ್ಜಿ ಆಹ್ವಾನ ಮಾಡಲಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ನಿಮ್ಮ ತಾಲೂಕಿನ ಸಹಾಯಕ ತೋಟಗಾರಿಕೆ ನಿರ್ದೇಶಕರು ಕಛೇರಿಯನ್ನು ಸಂಪರ್ಕಿಸಿ.

ಇದನ್ನೂ ಓದಿ: Aadhar card Update : ಆಧಾರ್‍ ನವೀಕರಣ ಮಾಡಲು Website link ಬಿಡುಗಡೆ: ಉಚಿತವಾಗಿ ನವೀಕರಣಕ್ಕೆ ಮಾ. 14 ಕೊನೆಯ ದಿನಾಂಕ:

ಇತ್ತೀಚಿನ ಸುದ್ದಿಗಳು

Related Articles