ಆತ್ಮೀಯ ಓದುಗರೇ ಕರ್ನಾಟಕ ರಾಜ್ಯದ ( karnataka state) ರಾಜ್ಯ ಕಾಂಗ್ರೆಸ್ ಪಕ್ಷ ಚುನಾವಣೆ ವೇಳೆ ಘೋಷಿಸಿದಂತೆ ಕಾಂಗ್ರೆಸ್ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ. ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,000 ರೂ. ನೀಡುವ ಯೋಜನೆ ಆಗಿರುತ್ತದೆ.
ಆಗಸ್ಟ್ 15ರ ಬಳಿಕ ಮನೆಯ ಯಜಮಾನಿಗೆ ಹಣ ನೀಡಲು ಸರ್ಕಾರ ಮುಂದಾಗಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಯೋಜನೆಗೆ ಒಪ್ಪಿಗೆ ಸಿಕ್ಕಿದ್ದು, ಇದೇ ತಿಂಗಳ ಜುಲೈ 19 ರಂದು ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲು ಸರ್ಕಾರ ಮುಂದಾಗಿದೆ. ಈ ಒಂದು ಯೋಜನೆಗೆ ಸರ್ಕಾರ ಯಾವ ಯಾವ ಷರತ್ತುಗಳನ್ನು ವಿಧಿಸಿದೆ,ನೋಡೋಣ ಬನ್ನಿ
ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಯೋಜನೆಯ ಲಾಭ ಸಿಗಲಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ? ಯಾರು ಈ ಯೋಜನೆ ಅರ್ಹರು? ಯೋಜನೆ ಜಾರಿ ಮಾಡುವುದು ಯಾವಾಗಿನಿಂದ?ಯಾವೆಲ್ಲಾ ದಾಖಲೆಗಳನ್ನು ಹೊಂದಿರುಬೇಕು? ಗೃಹಿಣಿಯರ ಖಾತೆಗೆ ಹಣ ಯಾವಾಗಿನಿಂದ ಬರುತ್ತದೆ ಎಂಬ ಪ್ರಶ್ನೆಗಳು ಸೇರಿ ಅನೇಕ ನಿಮ್ಮ ಪ್ರಶ್ನೆಗಳಿಗೆ ತೆರೆ ಎಳೆಯಲು ಈ ಲೇಖನವನ್ನು ನೀಡಿರುತ್ತೆವೆ. ಇದನ್ನು ಸಂಪೂರ್ಣವಾಗಿ ಓದಿ ನಿಮ್ಮ ಊರಿನ ಮತ್ತು ನಿಮ್ಮ ಹತ್ತಿರದವರಿಗೆ ಮಾಹಿತಿಯನ್ನು ಹಂಚಿಕೊಳ್ಳಿ.
ಮನೆ ಯಜಮಾನಿಗೆ 2 ಸಾವಿರ ನೀಡುವ ಗೃಹಲಕ್ಷ್ಮೀ ಯೋಜನೆ ಮಾರ್ಗಸೂಚಿ ಪ್ರಕಟ: ಪ್ರಮುಖ 5 ಷರತ್ತುಗಳಿವು
ಇದನ್ನೂ ಓದಿ: ಮುಂದಿನ ಮೂರು ದಿನ ಮಳೆ ಮಾಹಿತಿ ಹಾಗೂ , ಎಲ್ಲೆಲ್ಲಿ ಯೆಲ್ಲೋ ಅಲರ್ಟ್ ನೀಡಿದ ಹವಮಾನ ಇಲಾಖೆ.
ಏನಿದು ಗೃಹಲಕ್ಷ್ಮೀ ಯೋಜನೆ?
ಪ್ರತಿ ಮನೆಯ ಯಜಮಾನಿಗೆ ತಿಂಗಳಿಗೆ 2,000 ರೂ. ನೀಡುವ ಯೋಜನೆಯೇ ಗೃಹಲಕ್ಷ್ಮೀ ಯೋಜನೆ. ಚುನಾವಣೆಗೂ ಮುನ್ನ ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮೀ ಯೋಜನೆ ಕೂಡ ಒಂದು. ಈಗ ಅಧಿಕಾರಕ್ಕೆ ಬಂದ ಹಿನ್ನೆಲೆ ಕಾಂಗ್ರೆಸ್ ಸರ್ಕಾರ ಈ ಯೋಜನೆಯನ್ನು ಜಾರಿಗೆ ತರುತ್ತಿದೆ.
ಗೃಹಲಕ್ಷ್ಮೀ ಯೋಜನೆ ಜಾರಿ ಯಾವಾಗ?
ಗೃಹಲಕ್ಷ್ಮೀ ಯೋಜನೆ ಆಗಸ್ಟ್ 16 ಅಥವಾ 17ರಂದು ಜಾರಿಗೆ ಬರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ವೇಳೆ ಇರಲಿದ್ದಾರೆ.
ಈ ಯೋಜನೆಗೆ ಗೃಹಲಕ್ಷ್ಮೀ( Gruha lakshmi) ಯೋಜನೆಗೆ ಯಾರು ಅರ್ಹರು?
ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ವಿತರಿಸುವ ಅಂತ್ಯೋದಯ( APL & BPL) , ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆ ಮಾತ್ರ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಯಾಗಲು ಅರ್ಹರಾಗಿರುತ್ತಾರೆ. ಆದರೆ ಯೋಜನೆಯ ಮಾರ್ಗಸೂಚಿಯ ಪ್ರಕಾರ ಯಜಮಾನಿ ಅಥವಾ ಯಜಮಾನಿಯ ಗಂಡ ಜಿಎಸಟಿ ಅಥವಾ ಆದಾಯ ತೆರಿಗೆ ಪಾವತಿದಾರರಾಗಿದ್ದರೆ ಅವರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅನರ್ಹರು. ಒಂದು ವೇಳೆ ಮನೆಯ ಯಜಮಾನಿ ಮರಣ ಹೊಂದಿದ್ದಲ್ಲಿ ಮನೆಯ ಇತರೆ ಮಹಿಳೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಯೋಜನೆಯ ಲಾಭ ಪಡೆಯಲು ಅರ್ಜಿ ಎಲ್ಲಿ ಸಲ್ಲಿಸಬೇಕು?
ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಾಗಲು ಅರ್ಜಿಯನ್ನು ಸಲ್ಲಿಸಲು ಸರ್ಕಾರದ ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹತ್ತಿರ ಗ್ರಾಮ್ ಓನ್ ಕೇಂದ್ರ,ಕರ್ನಾಟಕ ಒನ್, ಅಥವಾ ತಮ್ಮ ಮೊಬೈಲ್ ನಲ್ಲಿ ಸ್ವತಂ ನೀವೇ ಅರ್ಜಿ ಸಲ್ಲಿಸಬಹುದು, ಆನ್‌ಲೈನ್ ಅಥವಾ ಭೌತಿಕವಾಗಿಯಾದರೂ ಅರ್ಜಿ ಸಲ್ಲಿಸಬಹುದು.
ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ ಯಾವಾಗ?
ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಜುಲೈ 19 ರಿಂದ ಆರಂಭವಾಗಲಿದೆ. ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಗಳು ಮತ್ತು ದಾಖಲೆಗಳನ್ನು ಪರಿಶೀಲನೆ ನಡೆಸಿ ಫಲಾನುಭವಿಗಳ ಆಯ್ಕೆ ಆಗುತ್ತದೆ.
ಗೃಹಲಕ್ಷ್ಮೀ ಯೋಜನೆಗೆ ಬೇಕಾಗುವ ದಾಖಲೆಗಳು ?
ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಈ ಕೇಳಗಿನ ದಾಖಲೆಗಳು ಬೇಕು.
- ರೇಷನ್ ಕಾರ್ಡ್2. ಬ್ಯಾಂಕ್ ಪಾಸ್‌ಬುಕ್3. ಆಧಾರ್ ಕಾರ್ಡ್4. ಯಾವುದಾದರೂ ಗುರುತಿನ ಚೀಟಿ5.ಮೊಬೈಲ್ ಸಂಖ್ಯೆ.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಹೆಚ್ಚುವರಿ ಅಕ್ಕಿ ಬದಲು ನೇರವಾಗಿ ಹಣ ವರ್ಗಾವಣೆಗೆ ಮುಖ್ಯಮಂತ್ರಿ ಚಾಲನೆ:
ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದರೆ ಏನಾಗುತ್ತದೆ?
ಕುಟುಂಬದ ಎಲ್ಲ ಮಹಿಳೆಯರಿಗೂ ಈ ಯೋಜನೆ ಅನ್ವಯ ಆಗಲ್ಲ. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದರೆ ರೇಷನ್ ಕಾರ್ಡ ಒಡತಿಗೆ ಒಬ್ಬರಿಗೆ ಮಾತ್ರ ಗೃಹಲಕ್ಷ್ಮೀ ಯೋಜನೆ ಅನ್ವಯವಾಗುತ್ತದೆ.
ಅರ್ಜಿ ಸಲ್ಲಿಕೆಯಲ್ಲಿ ತೊಂದರೆಯಾದಲ್ಲಿ ಸಹಾಯವಾಣಿ: Helpline Number:
ಅರ್ಜಿ ಸಲ್ಲಿಕೆಯಲ್ಲಿ ಜನ ಸಾಮಾನ್ಯರಿಗೆ ಯೋಜನೆ ಬಗ್ಗೆ ಗೊಂದಲ ಕಂಡು ಬಂದಲ್ಲಿ ಪ್ರಶ್ನೆಗಳು ಇದ್ದರೆ ಈ ಸಹಾಯವಾಣಿಗೆ 8147500500 whatsapp only ಅಥವಾ 1902 ಕರೆ ಮಾಡಿ ತಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದಾಗಿರುತ್ತದೆ.