Monday, September 1, 2025

Karnataka Male Mahiti: ಜುಲೈ 16 ರವರೆಗಿನ ರಾಜ್ಯದ ಮಳೆ ಮುನ್ಸೂಚನೆ

ಕರ್ನಾಟಕ ಮಳೆ ಪ್ರಮಾಣ ಸೂಚಕ ನಕ್ಷೆಯ ಮಾಹಿತಿಯನ್ವಯ ರಾಜ್ಯದಲ್ಲಿ ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡು ಜಿಲ್ಲೆಗಳು, ಒಳನಡು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿನ ಮುಂದಿನ ಜುಲೈ 16ರವರೆಗಿನ ಮಳೆಯ ಮಾಹಿತಿಯನ್ನು ಈ ಲೇಖನದಲ್ಲಿ Karnataka Male Mahiti ಹಂಚಿಕೊಳ್ಳಲಾಗಿದೆ. ಈ ಮಾಹಿತಿಯನ್ನು ಆದಷ್ಟೂ ರೈತ ಸಮುದಾಯಕ್ಕೆ ಅನುಕೂಲವಾಗುವ ದೃಷ್ಟಿಯಿಂದ ನವು ಕಳುಹಿಸುವ ಮಾಹಿತಿ ಶೇರ ಮಾಡಿ.

ಕರಾವಳಿ ಜಿಲ್ಲೆಗಳ ಮಳೆ ಮತ್ತು ಹವಾಮಾನ ಮುನ್ಸೂಚನೆ :

ಕರಾವಳಿಯ ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಬಿಟ್ಟು ಬಿಟ್ಟು ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ತೋಟಗಳಿಗೆ ಔಷಧಿ ಸಿಂಪಡಿಸಲು ಇಡೀ ದಿನ ಕಾಲಾವಕಾಶ ಸಿಗುವ ಸಾಧ್ಯತೆಗಳು ಕಾಣಿಸುತ್ತಿಲ್ಲ.

ಇದನ್ನೂ ಓದಿ: E-Pauti Movement: ಇ- ಪೌತಿ ಮಾಡದೆ ಇದ್ದರೆ ಸರ್ಕಾರ ಈ ಎಲ್ಲಾ ಯೋಜನೆ ಲಾಭ ಬಂದ್!!

ಮಲೆನಾಡು ಜಿಲ್ಲೆಗಳ ಮಳೆ ಮತ್ತು ಹವಾಮಾನ ಮುನ್ಸೂಚನೆ :

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ತಾಲೂಕುಗಳಲ್ಲಿ ಸಾಮಾನ್ಯ ಮಳೆ ಹಾಗೂ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿದ್ದು, ಜುಲೈ 16ರಿಂದ ಮಲೆನಾಡಿನ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಲಕ್ಷಣಗಳಿವೆ.

ಒಳನಾಡು ಜಿಲ್ಲೆಗಳ ಮಳೆ ಮತ್ತು ಹವಾಮಾನ ಮುನ್ಸೂಚನೆ :
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ದಕ್ಷಿಣ ಒಳನಾಡು ಜಿಲ್ಲೆಗಳ ಮಳೆ ಮತ್ತು ಹವಾಮಾನ ಮುನ್ಸೂಚನೆ :
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ಈಗಿನಂತೆ ಜುಲೈ 16ರಿಂದ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ…

ಇದನ್ನೂ ಓದಿ: Rain and Weather Report: ಗುರುವಾರದ ರಾಜ್ಯದ ಮಳೆ- ಹವಾಮಾನ ಮುನ್ಸೂಚನೆ.

ಮಾಹಿತಿ..
ಸಾಯಿ ಶೇಖರ್

ಇತ್ತೀಚಿನ ಸುದ್ದಿಗಳು

Related Articles