Monday, July 21, 2025

Karnataka Rain forecast: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ :

ಆತ್ಮೀಯ ರೈತ ಬಾಂದವರೇ, ಈ ಒಂದು ಲೇಖನದಲ್ಲಿ ಮುಂದಿನ ದಿನಗಳಲ್ಲಿ ಕರ್ನಾಟಕದ ಮಳೆಯ ಮುನ್ಸೂಚನೆ ಯಾವ ಪ್ರದೇಶದಲ್ಲಿ ಅಂದರೇ ರಾಜ್ಯದ ಕರಾವಳಿ ಜಿಲ್ಲೆಗಳು, ಮಲೆನಾಡು ಜಿಲ್ಲೆಗಳು ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳ ಹವಾಮಾನ ಮುನ್ಸೂಚನೆಯ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ಈ ಮಾಹಿತಿ ಆದಷ್ಟೂ ರೈತರಿಗೆ ಹಂಚಿಕೊಳ್ಳಿ ಅಂತ ಹೇಳುತ್ತಾ ಈ ಕೆಳಗೆ ನೀಡಿರುವ ಮಾಹಿತಿ ಓದಿ,

ಕರಾವಳಿ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಕರಾವಳಿ ತೀರ ತಾಲೂಕುಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಮತ್ತೂ ಸ್ವಲ್ಪ ಕಡಿಮೆ ಇರಬಹುದು ಎಂದು ಹೇಳಬಹುದು.
ಈಗಿನಂತೆ ಜುಲೈ 22ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾದರೂ ಜುಲೈ 28ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಜುಲೈ 29ರಿಂದ ದಿನದಲ್ಲಿ ಒಂದೆರಡು ಮಳೆ ಮಾತ್ರ ಇರಬಹುದು.

ಇದನ್ನೂ ಓದಿ: ಟ್ರಾಕ್ಟ‌ರ್ ಟ್ರೋಲಿ ಖರೀದಿಸಲು ಸಹಾಯಧನ

ಮಲೆನಾಡು ಹವಾಮಾನ ಮುನ್ಸೂಚನೆ :
ಮಲೆನಾಡು ಜಿಲ್ಲೆಗಳಾದ ಕೊಡಗು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ತಲಕಾವೇರಿ, ಭಾಗಮಂಡಲ ಸುತ್ತಮುತ್ತ ಭಾಗಗಳಲ್ಲಿ ಮಳೆ ಹೆಚ್ಚೇ ಇರಬಹುದು ಎಂದು ಹೇಳಬಹುದು.
ಮತ್ತು ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇರುತ್ತದೆ.
ಈಗಿನಂತೆ ಜುಲೈ 22ರಿಂದ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

ಉತ್ತರ ಒಳನಾಡು ಹವಾಮಾನ ಮುನ್ಸೂಚನೆ:
ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಹಾವೇರಿ, ಗದಗ,ದಾವಣಗೆರೆ, ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ತುಂತುರು ಮಳೆಯ ಮುನ್ಸೂಚನೆ ಇರುತ್ತದೆ.

ಇದನ್ನೂ ಓದಿ: Various applications from Sirsi sambar Board : ಕಾಳು ಮೆಣಸು ಬಿಡಿಸುವ ಯಂತ್ರ, ಮಳೆ ನೀರು ಕೊಯ್ಲು ,ಪಂಪ್ ಸೆಟ್ ಗೆ ಸಹಾಯಧನ ಅರ್ಜಿ

ದಕ್ಷಿಣ ಒಳನಾಡು ಹವಾಮಾನ ಮುನ್ಸೂಚನೆ:
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆ ಸ್ವಲ್ಪ ಹೆಚ್ಚಿರುವ ಮುನ್ಸೂಚನೆ ಇದ್ದು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 28ರ ತನಕವೂ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ಮಧ್ಯಮ ಸ್ತರದ ಗಾಳಿಯು ಬಂಗಾಳಕೊಲ್ಲಿಯ ಕಡೆಯಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕರಾವಳಿ ತನಕ ಬಂದು ತಿರುಗಿ ಬಂಗಾಳಕೊಲ್ಲಿಯ ಕಡೆಗೆ ಸಾಗುತ್ತಿದೆ. ಇದರ ಪರಿಣಾಮದಿಂದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕರಾವಳಿಯಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ: Krishi Prashasti 2025 : ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ ಪ್ರಥಮ ಬಹುಮಾನ ಮೊತ್ತ 50,000/-ರೂ

ಮಾಹಿತಿ…

ಸಾಯಿಶೇಖರ್ ಕರಿಕಳ

ಇತ್ತೀಚಿನ ಸುದ್ದಿಗಳು

Related Articles