Thursday, September 19, 2024

Kharif Crop survey-ನಿಮ್ಮ ಜಮೀನಿನ ಬೆಳೆ ಸಮೀಕ್ಷೆ ಇನ್ನೂ ಆಗಿಲ್ಲವೇ ಚಿಂತೆ ಬೇಡಾ ಇನ್ನೂ ಅವಕಾಶವಿದ್ದು, ಅಗಷ್ಠ 15 ರ ಒಳಗೆ ಸಮೀಕ್ಷೆ ಮಾಡಿಕೊಳ್ಳಿ! ಲಿಂಕ್‌ ಇಲ್ಲಿದೆ.

ಹೌದು ರೈತ ಭಾಂದವರೇ ಮುಂಗಾರು ಹಂಗಾಮಿನ 2024ರ ಬೆಳೆ ಸಮೀಕ್ಷೆ ಮಾಡಿಕೊಳ್ಲಲು ಇನ್ನೂ ಅವಕಾಶವಿದ್ದು, ಯಾರು ಇನ್ನೂ ಮಾಡದೇ ಬಾಕಿ ಇರುವ ರೈತರು ಆದಷ್ಟು ಬೇಗನೆ ಅಗಷ್ಠ 15 ರ ಒಳಗೆ ಸಮೀಕ್ಷೆ ಮಾಡಿಕೊಳ್ಳಿ.

ಕರ್ನಾಟಕ ಸರಕಾರವು ಸುಮಾರು 5 ರಿಂದ 6 ವರ್ಷಗಳಿಂದ ರೈತರು ಬೆಳೆದಿರುವ ಬೆಳೆಗಳ ಸಮೀಕ್ಷೆಯನ್ನು ಮಾಡುವ ಕಾರ್ಯವನ್ನು ಮಾಡುತ್ತಿದೆ. ಅದಕ್ಕಾಗಿ ಪ್ರತಿ ವರ್ಷದಲ್ಲಿ ಮೂರು ಬಾರಿ ಬೆಳೆ ಸಮೀಕ್ಷೆಯನ್ನು ಮಾಡಲಾಗುತ್ತದೆ. ಅವು ಮುಂಗಾರು ಸಮೀಕ್ಷೆ, ಹಿಂಗಾರು ಸಮೀಕ್ಷೆ, ಬೇಸಿಗೆ ಸಮೀಕ್ಷೆ ಎಂದು ಮೂರು ಹಂಗಾಮುಗಳಲ್ಲಿ ಬೆಳೆ ಸಮೀಕ್ಷೆ ಕಾರ್ಯವನ್ನು ಮಾಡಲಾಗುತ್ತದೆ.

ಬೆಳೆ ಸಮೀಕ್ಷೆ ಪ್ರಯೋಜನಗಳು:

ಬೆಳೆ ಸಮೀಕ್ಷೆ ಮಾಹಿತಿಯನ್ನು ಪೃಕೃತಿ ವಿಕೋಪಗಳ ಪರಿಹಾರ ವಿತರಣೆ, ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿಗಳ ಗುರುತಿಸುವಿಕೆ, ಬೆಳೆ ವಿಮೆ ಯೋಜನೆ ಅನುಷ್ಠಾನ, ಋತುಮಾನವಾರು ವಿವಿಧ ಬೆಳೆಗಳ ವಿಸ್ತೀರ್ಣ ವರದಿ ಕಾರ್ಯ, ಬೆಳೆ ಕಟಾವು ಪ್ರಯೋಗ ಅನುಷ್ಠಾನ, ಕೃಷಿ/ತೋಟಗಾರಿಕೆ/ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನ ಹಾಗೂ ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಬಳಸಲಾಗುವುದು.


ರೈತರಿಗೊಂದು ಉತ್ತಮವಕಾಶ:

ರೈತರು ತಮ್ಮ ಜಮೀನಿನ ಬೆಳೆ ವಿವರವನ್ನು ಯಾವುದೇ ಲೋಪದೋಷಗಳಿಗೆ ಆಸ್ಪದವಿಲ್ಲದಂತೆ ತಾವೇ ದಾಖಲಿಸಲು ಸರ್ಕಾರದಿಂದ ಸುವರ್ಣಾವಕಾಶವನ್ನು ಕಲ್ಪಿಸಿದ್ದು, ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯುವುದು. ಜಿಲ್ಲೆಯ ರೈತರು ನಿಗದಿತ ಅವಧಿಯೊಳಗೆ ಮೊಬೈಲ್ ಆ್ಯಪ್ ನಲ್ಲಿ ತಮ್ಮ ಜಮೀನಿನ ಸರ್ವೆ ನಂಬರ್ ವಾರು ಬೆಳೆ ವಿವರವನ್ನು ನಿಖರವಾಗಿ ದಾಖಲಿಸಿ ಮುಂಗಾರು–2024 ರ ಬೆಳೆ ಸಮೀಕ್ಷೆ ಕಾರ್ಯವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರ,ದಕ್ಷಿಣ ಕನ್ನಡ ಇವರು ಪ್ರಕಟಣೆಯಲ್ಲಿ ತಿಳಿಸಿದೆ. ಇದೇ ರೀತಿ ರಾಜ್ಯದ್ಯಂತ ಬೆಳೆ ಸಮೀಕ್ಷೆ ಕಾರ್ಯ ಅರಂಭವಾಗಿದ್ದು ರೈತರು ತಮ್ಮ ಜಮೀನಿನ ನಿಖರ ಬೆಳೆ ವಿವರ ದಾಖಲಿಸಲು ಇದು ಒಂದು ಉತ್ತಮ ಮಾರ್ಗವಾಗಿದೆ.

Kharif crop survey app: ಮೊಬೈಲ್ ನಲ್ಲಿ ಬೆಳೆ ಸಮೀಕ್ಷೆ ಮಾಡುವ ವಿಧಾನ:

ಮೇಲೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಗೂಗಲ್ ಪ್ಲೇ-ಸ್ಟೋರ್ ನಿಂದ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡ ಬಳಿಕ ನಿಮ್ಮ ಜಮೀನಿಗೆ ಭೇಟಿ ಮಾಡುವ ಮೊದಲು ಮೊದಲಿಗೆ ನೆಟ್ ವರ್ಕ ಇರುವ ಸ್ಥಳದಲ್ಲೇ ಈ ಅಪ್ಲಿಕೇಶನ್ ಅನ್ನು ಒಪನ್ ಮಾಡಿಕೊಂಡು ನಿಮ್ಮ ಅಧಾರ್ ವಿವರ ಮತ್ತು ಜಮೀನಿನ ಸರ್ವೆ ನಂಬರ್ ವಿವರವನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.

Step-1: ಈ ಲಿಂಕ್ ಮೇಲೆ kharifa crop survey app ಕ್ಲಿಕ್ ಮಾಡಿ ಮೊಬೈಲ್ ಅಪ್ಲಿಕೇಶನ್ ಒಪನ್ ಮಾಡಿಕೊಂಡು 3 ರಿಂದ 4 ಬಾರಿ allow ಎಂದು ಒತ್ತಿ ಬಳಿಕ ಕೊನೆಯಲ್ಲಿ “Agree” ಬಟನ್ ಮೇಲೆ ಕ್ಲಿಕ್ ಮಾಡಬೇಕು. ಬಳಿಕ “E-KYC ಮೂಲಕ ಆಧಾರ್ ದೃಡೀಕರಿಸಿ” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ರೈತರ ಅಧಾರ್ ಕಾರ್ಡ ನಂಬರ್ ಅನ್ನು ಹಾಕಿ ಸಹಮತಿ ಇದೆ ಎಂದು ಟಿಕ್ ಮಾಡಿಕೊಂಡು ಕೆಳಗಡೆ ದೃಡೀಕರಣ ವಿಧಾನವನ್ನು ಆಯ್ಕೆ ಮಾಡಿ ಅಲ್ಲಿ OTP ಮೇಲೆ ಕ್ಲಿಕ್ ಮಾಡಿ “ಓಟಿಪಿ ಪಡೆಯಿರಿ” ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-2: ತದನಂತರ ನಿಮ್ಮ ಮೊಬೈಲ್ ಗೆ ಬರುವ 6 ಅಂಕಿಯ OTP ಅನ್ನು ಹಾಕಿ ಸಲ್ಲಿಸಿ ಬಟನ್ ಮೇಲೆ ಕ್ಲಿಕ್ ಮಾಡಿದರೆ  ನಿಮ್ಮ ಎಲ್ಲಾ ವಿವರ ಇಲ್ಲಿ ತೋರಿಸುತ್ತದೆ. ಇಲ್ಲಿ ಮೊಬೈಲ್ ನಂಬರ್ ಹಾಕಿ “ಸಕ್ರಿಯಗೊಳಿಸಿ” ಬಟನ್ ಮೇಲೆ ಕ್ಲಿಕ್ ಮಾಡಿ OTP ಅನ್ನು ನಮೂದಿಸಿ “ಸಲ್ಲಿಸಿ” ಬಟನ್ ಮೇಲೆ ಕ್ಲಿಕ್ ಮಾಡಿ ಸಕ್ರಿಯಗೊಳಿಸಿಕೊಳ್ಳಬೇಕು.

Step-3: ಇದಾದ ಬಳಿಕ ನಿಮ್ಮ ಸರ್ವೆ ನಂಬರ್ ಗಳು ಇಲ್ಲಿ ತೋರಿಸುತ್ತವೆ ನಂತರ ನಿಮ್ಮ ಜಮೀನಿನ್ನು ಭೇಟಿ ಮಾಡಿ ಒಂದು ಒಂದು ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಿ “ಬೆಳೆ ವಿವರ ದಾಖಲಿಸಿ” ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ಪ್ರಸ್ತುತ ಬೆಳೆದಿರುವ ಬೆಳೆ ವಿವರವನ್ನು ಹಾಕಿ ಬೆಳೆಯ 2 ಪೋಟೋ ಕ್ಲಿಕ್ ಮಾಡಿಕೊಂಡು ಬೆಳೆ ವಿವರ ದಾಖಲಿಸಬೇಕು.

Crop survey-ಬೆಳೆ ಸಮೀಕ್ಷೆ ವಿವರ ಅಪ್ಲೋಡ್ ಮಾಡುವ ವಿಧಾನ:

ಈ ಮೇಲಿನ ವಿಧಾನವನ್ನು ಅನುಸರಿ ನಿಮ್ಮ ಜಮೀನಿನ ಬೆಳೆ ವಿವರ ದಾಖಲಿಸಿದ ಬಳಿಕ ಕೊನೆಯಲ್ಲಿ “ಅಪ್ಲೋಡ್ ಮಾಡಿ” ಬಟನ್ ಮೇಲೆ ಕ್ಲಿಕ್ ಮಾಡಿ ತಪ್ಪದೇ ನೀವು ಮಾಡಿರುವ ಬೆಳೆ ಸಮೀಕ್ಷೆ ವರದಿಯನ್ನು ಅಪ್ಲೋಡ್ ಮಾಡಬೇಕು ಇಲ್ಲವಾದಲ್ಲಿ ಈ ವಿವರವು ನಿಮ್ಮ ಮೊಬೈಲ್ ನಲ್ಲೇ ಉಳಿದು ಬಿಡುತ್ತದೆ.

Crop survey helpline- 18004253553 ಇನ್ನು ಹೆಚ್ಚಿನ ಮಾಹಿತಿ:

ಇತ್ತೀಚಿನ ಸುದ್ದಿಗಳು

Related Articles