ಹೌದು, ರೈತ ಭಾಂದವರೇ ನೀವು 2024ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಮಾಡಿದ್ದರೆ ಮಾತ್ರ ನಿಮ್ಮ 2024ರ ಬೆಳೆ ವಿಮೆ ಪರಿಹಾರ ಮತ್ತು ಬೆಳೆ ಹಾನಿ ಪರಿಹಾರಗಳು ಸಿಗುತ್ತವೆ. ಇದಕ್ಕೆ ತಾವು ಕಡ್ಡಾಯವಾಗಿ ಬೆಳೆ ಸಮೀಕ್ಷೆ ಮಾಡಿಕೊಳ್ಳಿ. ಅದರ ಮಾಹಿತಿ ಇಲ್ಲಿದೆ ನಿಮಗಾಗಿ.
ರಾಜ್ಯ ಸರಕಾರವು ಸುಮಾರು 5- 6 ವರ್ಷಗಳಿಂದ ರೈತರು ಬೆಳೆದಿರುವ ಬೆಳೆಗಳ ಸಮೀಕ್ಷೆಯನ್ನು ಮಾಡುವ ಕಾರ್ಯವನ್ನು ಮಾಡುತ್ತಿದೆ. ಅದಕ್ಕಾಗಿ ಪ್ರತಿ ವರ್ಷದಲ್ಲಿ ನಾಲ್ಕು ಬಾರಿ ಬೆಳೆ ಸಮೀಕ್ಷೆಯನ್ನು ಮಾಡಲಾಗುತ್ತದೆ. ಅವು ಪೂರ್ವ ಮುಂಗಾರು ಸಮೀಕ್ಷೆ, ಮುಂಗಾರು ಸಮೀಕ್ಷೆ, ಹಿಂಗಾರು ಸಮೀಕ್ಷೆ, ಬೇಸಿಗೆ ಸಮೀಕ್ಷೆ ಎಂದು ನಾಲ್ಕು ಹಂತಗಳಲ್ಲಿ ಬೆಳೆ ಸಮೀಕ್ಷೆ ಕಾರ್ಯವನ್ನು ಮಾಡಲಾಗುತ್ತದೆ.
ಯಾರೂ ಎಲ್ಲಾ ರೈತರು ತಾವು ಬಹುವಾರ್ಷಿಕ ಬೆಳೆಗಳನ್ನು (ಅಡಿಕೆ,ತೆಂಗು, ಬಾಳೆ, ಕೊಕ್ಕೊ, ಕಾಳುಮೆಣಸು. ಕಾಫಿ, ರಬ್ಬರ್,ಗೇರು) ಬೆಳೆದಿದ್ದಿರಾ ಅಂತಹ ರೈತರು ಈಗ ಬಿಡುಗಡೆ ಮಾಡಿರುವ ಮುಂಗಾರು ರೈತರ ಬೆಳೆ ಸಮೀಕ್ಷೆ ಲಿಂಕ್ ಬಳಸಿ ಸಮೀಕ್ಷೆ ಮಾಡಿಕೊಂಡರೆ ಮಾತ್ರ ತುಂಬಾ ಪ್ರಯೋಜನಕ್ಕೆ ಬರುತ್ತದೆ.
ಮುಂಗಾರು ಬೆಳೆ ಸಮೀಕ್ಷೆ ಮಾಡಿಕೊಳ್ಳುವ ವಿಧಾನ:
ಕೆಳಗಡೆ ನೀಡಿದ ವಿಧಾನವನ್ನು ಅನುಸರಿಸಿ ಗೂಗಲ್ ಪ್ಲೇ-ಸ್ಟೋರ್ ನಿಂದ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡ ಬಳಿಕ ನಿಮ್ಮ ಜಮೀನಿಗೆ ಭೇಟಿ ಮಾಡುವ ಮೊದಲು ಮೊದಲಿಗೆ ನೆಟ್ ವರ್ಕ ಇರುವ ಸ್ಥಳದಲ್ಲೇ ಈ ಅಪ್ಲಿಕೇಶನ್ ಅನ್ನು ಒಪನ್ ಮಾಡಿಕೊಂಡು ನಿಮ್ಮ ಅಧಾರ್ ವಿವರ ಮತ್ತು ಜಮೀನಿನ ಸರ್ವೆ ನಂಬರ್ ವಿವರವನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
Step-1: ಈ ಲಿಂಕ್ ಮೇಲೆ ಕ್ಲಿಕ್ ಮಾಡಿ farmers kharif crop survey-2024 ಮೊಬೈಲ್ ಅಪ್ಲಿಕೇಶನ್ ಒಪನ್ ಮಾಡಿಕೊಂಡು 3 ರಿಂದ 4 ಬಾರಿ allow ಎಂದು ಒತ್ತಿ ಬಳಿಕ ಕೊನೆಯಲ್ಲಿ “Agree” ಬಟನ್ ಮೇಲೆ ಕ್ಲಿಕ್ ಮಾಡಬೇಕು. ಬಳಿಕ “E-KYC ಮೂಲಕ ಆಧಾರ್ ದೃಡೀಕರಿಸಿ” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ರೈತರ ಅಧಾರ್ ಕಾರ್ಡ ನಂಬರ್ ಅನ್ನು ಹಾಕಿ ಒಪ್ಪಿಗೆ ಇದೆ ಎಂದು ಟಿಕ್ ಮಾಡಿಕೊಂಡು ಕೆಳಗಡೆ ದೃಡೀಕರಣ ವಿಧಾನವನ್ನು ಕ್ಲಿಕ್ ಮಾಡಿ ಅಲ್ಲಿ OTP ಮೇಲೆ ಕ್ಲಿಕ್ ಮಾಡಿ “ಓಟಿಪಿ ಪಡೆಯಿರಿ” ಬಟನ್ ಮೇಲೆ ಕ್ಲಿಕ್ ಮಾಡಬೇಕು.
Step-2: ತದನಂತರ ನಿಮ್ಮ ಮೊಬೈಲ್ ಗೆ ಬರುವ 6 ಅಂಕಿಯ OTP ಅನ್ನು ಹಾಕಿ ಸಲ್ಲಿಸಿ ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಎಲ್ಲಾ ವಿವರ ಇಲ್ಲಿ ತೋರಿಸುತ್ತದೆ. ಇಲ್ಲಿ ಮೊಬೈಲ್ ನಂಬರ್ ಹಾಕಿ “ಸಕ್ರಿಯಗೊಳಿಸಿ” ಬಟನ್ ಮೇಲೆ ಕ್ಲಿಕ್ ಮಾಡಿ OTP ಅನ್ನು ನಮೂದಿಸಿ “ಸಲ್ಲಿಸಿ” ಬಟನ್ ಮೇಲೆ ಕ್ಲಿಕ್ ಮಾಡಿ ಸಕ್ರಿಯಗೊಳಿಸಿಕೊಳ್ಳಬೇಕು.
Step-3: ಇದಾದ ಬಳಿಕ ನಿಮ್ಮ ಸರ್ವೆ ನಂಬರ್ ಗಳು ಇಲ್ಲಿ ತೋರಿಸುತ್ತವೆ ನಂತರ ನಿಮ್ಮ ಜಮೀನಿನ್ನು ಭೇಟಿ ಮಾಡಿ ಒಂದು ಒಂದು ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಿ “ಬೆಳೆ ವಿವರ ದಾಖಲಿಸಿ” ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ಪ್ರಸ್ತುತ ಬೆಳೆದಿರುವ ಬೆಳೆ ವಿವರವನ್ನು ಹಾಕಿ ಬೆಳೆಯ 2 ಪೋಟೋ ಕ್ಲಿಕ್ ಮಾಡಿಕೊಂಡು ಬೆಳೆ ವಿವರ ದಾಖಲಿಸಬೇಕು.
Crop survey-ಬೆಳೆ ಸಮೀಕ್ಷೆ ವಿವರ ಅಪ್ಲೋಡ್ ಮಾಡುವ ವಿಧಾನ:
ಈ ಮೇಲಿನ ವಿಧಾನವನ್ನು ಅನುಸರಿ ನಿಮ್ಮ ಜಮೀನಿನ ಬೆಳೆ ವಿವರ ದಾಖಲಿಸಿದ ಬಳಿಕ ಕೊನೆಯಲ್ಲಿ “ಅಪ್ಲೋಡ್ ಮಾಡಿ” ಬಟನ್ ಮೇಲೆ ಕ್ಲಿಕ್ ಮಾಡಿ ತಪ್ಪದೇ ನೀವು ಮಾಡಿರುವ ಬೆಳೆ ಸಮೀಕ್ಷೆ ವರದಿಯನ್ನು ಅಪ್ಲೋಡ್ ಮಾಡಬೇಕು ಇಲ್ಲವಾದಲ್ಲಿ ಈ ವಿವರವು ನಿಮ್ಮ ಮೊಬೈಲ್ ನಲ್ಲೇ ಉಳಿದು ಬಿಡುತ್ತದೆ.
ಬೆಳೆ ಸಮೀಕ್ಷೆಯ ಹೆಚ್ಚಿನ ಮಾಹಿತಿಗೆ ಕೃಷಿ ಇಲಾಖೆ, ಕಂದಾಯ ಇಲಾಖೆ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.
Crop survey helpline- 18004253553 ತಾಂತ್ರಿಕ ಮಾಹಿತಿಗೆ.