ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಸಕ್ತ 2023-24ನೇ(ಜನವರಿ ಆವೃತ್ತಿ) ಶೈಕ್ಷಣಿಕ ಸಾಲಿಗೆ ಪ್ರವೇಶಾತಿಗೆ(KSOU Admission) ಅರ್ಜಿ ಆಹ್ವಾನಿಸಲಾಗಿದೆ.
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಸಕ್ತ 2023-24ನೇ(ಜನವರಿ ಆವೃತ್ತಿ) ಶೈಕ್ಷಣಿಕ ಸಾಲಿಗೆ ಪ್ರವೇಶಾತಿ ಆರಂಭಿಸಿದ್ದು. ಸ್ನಾತಕ/ಸ್ನಾತಕೋತ್ತರ ಕೋರ್ಸಗಲಾದ ಬಿ.ಎ./ಬಿ.ಕಾಂ/ಬಿ.ಬಿ.ಎಂ/ಬಿ.ಎಸ್ಸಿ/ಬಿ.ಎಸ್.ಡಬ್ಲ್ಯೂ/ಬಿ.ಸಿ.ಎ/ಬಿ.ಎಲ್.ಐ.ಎಸ್ಸಿ.ಎಂ.ಎ/ಎಂ.ಸಿ.ಜೆ/ಎಂ.ಕಾಂ/ಎಂ.ಬಿ.ಎ/ಎಂ.ಎಲ್.ಐ.ಎಸ್ಸಿ/ಎಂ.ಎಸ್ಸಿ/ಎಂ.ಸಿ.ಎ/ಎಂ.ಎಸ್.ಡಬ್ಲ್ಯೂ, ಪಿ.ಜಿ, ಸರ್ಟಿಫಿಕೇಟ್ ಪ್ರೋಗ್ರಾಮ್ಸ್/ ಡಿಪ್ಲೋಮಾ ಪ್ರೋಗ್ರಾಮ್ಸ್/ ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಗಳಿಗೆ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತಿದೆ.
ಇದನ್ನೂ ಓದಿ: First installment drought payment Failure list:ಬರ ಪರಿಹಾರ ಹಣ ಬರದೇ ಇರುವ ರೈತರ ಪಟ್ಟಿ ಮತ್ತು ಕಾರಣ :
ಕರಾಮುವಿಯು ಮಲ್ಲೇಶ್ವರಂನ ಪ್ರಾದೇಶಿಕ ಕೇಂದ್ರದಲ್ಲಿ ಮಹಿಳಾ ಮತ್ತು ಪುರುಷ ವಿದ್ಯಾರ್ಥಿಗಳಿಗೆ ಪ್ರವೇಶಾತಿಗೆ ಅವಕಾಶ ಕಲ್ಪಿಸಿದ್ದು ಪ್ರಥಮ ವರ್ಷದ ಈ ಮೇಲ್ಕಂಡ ಕೋರ್ಸ್‌ಗಳ ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭವಾಗಿರುತ್ತದೆ.. ಪ್ರವೇಶಾತಿಯ ಅಂತಿಮ ದಿನಾಂಕ 31-03-2024.
ಕರಾಮುವಿಯ ಅಧಿಕೃತ ವೆಬ್ಸೈಟ್ ನಲ್ಲಿ KSOU Admission Portal ಮೂಲಕ ಈ ಮೇಲ್ಕಂಡ ಪದವಿಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಆನ್‌ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಲು ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ಶಶಿಕಲಾ ಜೆ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ, ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ. ಕೆ.ಎಸ್.ಆರ್.ಟಿ.ಸಿ/ಬಿ.ಎಂ.ಟಿ.ಸಿ/ ಎನ್.ಡಬ್ಲ್ಯು.ಕೆ.ಎಸ್.ಆರ್.ಟಿ.ಸಿ/ ಕೆ.ಕೆ.ಆರ್.ಟಿ.ಸಿ ಬೋಧನಾ ಶುಲ್ಕದಲ್ಲಿ ರಿಯಾಯಿತಿ ಇರುತ್ತದೆ.
ಪೂರ್ಣ ಶುಲ್ಕ ವಿನಾಯಿತಿಯು ಕೋವಿಡ್-19ರ ಸಾಂಕ್ರಾಮಿಕ ರೋಗದಿಂದ ಮೃತರಾದ ಪೋಷಕರ ಮಕ್ಕಳಿಗೆ, ತೃತಿಯ ಲಿಂಗದ (Transgender) ವಿದ್ಯಾರ್ಥಿಗಳಿಗೆ, ದೃಷ್ಟಿ ಹೀನ ವಿದ್ಯಾರ್ಥಿಗಳಿಗೆ ಬಿ.ಇ.ಡಿ/ಎಂಬಿಎ ಹೊರತುಪಡಿಸಿ) ಇರುತ್ತದೆ.
ಇದನ್ನೂ ಓದಿ: PM Kisan ಹಣ ಜಮಾ ಆಗಲು NPCI Active ಕಡ್ಡಾಯ ಚೆಕ್ ಮಾಡಿ ಈ ಲಿಂಕ್ ಮೇಲೆ ಓತ್ತಿ ಪರಿಕ್ಷೀಸಿಕೊಳ್ಳಿ.
ಎಸ್‌ಸಿ/ಎಸ್‌ಟಿ/ಓಬಿಸಿ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ SSP ಮುಖಾಂತರ ವಿದ್ಯಾರ್ಥಿ ವೇತನವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ:
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಅಧಿಕೃತ ವೆಬ್ಸೈಟ್: Click here